Homeಮುಖಪುಟ’ಸರೋಜಿನಿ ಮಹಿಷಿ’ ವರದಿ ಜಾರಿಗೆ ಬಂದ್‌: ಅಂತಾದ್ದೇನಿದೆ ಈ ವರದಿಯಲ್ಲಿ? ಜಾರಿಗೆ ಮೀನಾಮೇಷವೇಕೆ?

’ಸರೋಜಿನಿ ಮಹಿಷಿ’ ವರದಿ ಜಾರಿಗೆ ಬಂದ್‌: ಅಂತಾದ್ದೇನಿದೆ ಈ ವರದಿಯಲ್ಲಿ? ಜಾರಿಗೆ ಮೀನಾಮೇಷವೇಕೆ?

ನಾಳೆ ಅಂದರೆ ಫೆ.13ರಂದು ಕೆಲ ಕನ್ನಡಪರ ಸಂಘಟನೆಗಳು ಬಂದ್‌ಗಿಳಿದಿವೆ. ವರದಿ ಬಿಡುಗಡೆಯಾಗಿ 30 ವರ್ಷದ ನಂತರವೂ ಪ್ರತಿಭಟನೆ ನಡೆಯುತ್ತಿದೆ ಎಂದರೆ ಆ ವರದಿಯಲ್ಲೇನಿದೆ?

- Advertisement -
- Advertisement -

ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳ ಕೆಲಸದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಎಂಬ ಆಶೋತ್ತರಗಳನ್ನು ಹೊತ್ತ ರಾಜ್ಯದ ಮೊದಲ ವರದಿ ಎಂಬ ಶ್ರೇಯ ಡಾ. ಸರೋಜಿನಿ ಮಹಿಷಿ ವರದಿಗೆ ಸಲ್ಲುತ್ತದೆ. ಅಸಲಿಗೆ ಮಾಜಿ ಸಂಸದೆ ಡಾ. ಸರೋಜಿನಿ ಮಹಿಷಿ 1986ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಈ ವರದಿಯನ್ನು ಕೇಂದ್ರವನ್ನಾಗಿಟ್ಟುಕೊಂಡು 2020ರಲ್ಲೂ ಸಹ ಪ್ರತಿಭಟನೆ ನಡೆಯುತ್ತವೆ, ಬಂದ್‌ಗೆ ಕರೆ ನೀಡಲಾಗುತ್ತದೆ, ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಕೆಲಸ ನೀಡಿ ಎಂಬ ಘೋಷ ವಾಕ್ಯಗಳು ಮೊಳಗುತ್ತವೆ ಎಂದರೆ 3 ದಶಕಗಳೇ ಕರೆದರೂ ಸ್ವಂತ ನೆಲದಲ್ಲಿ ಬದಲಾಗದ ಕನ್ನಡಿಗರ ಪರಿಸ್ಥಿತಿಯನ್ನು ನಾವು ಊಹಿಸಬಹುದು.

ಪ್ರಸ್ತುತ ರಾಜ್ಯದಲ್ಲಿ ಯುವಜನರ ಪರಿಸ್ಥಿತಿ ಮುಂಚಿನಂತಿಲ್ಲ. ನಿರುದ್ಯೋಗ ಎಂಬುದು ದಿನೇ ದಿನೇ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಆರ್ಥಿಕ ಕುಸಿತದ ಹೆಸರಿನಲ್ಲಿ ದಿನದಿಂದ ದಿನಕ್ಕೆ ಒಂದಷ್ಟು ಯುವಜನರು ಕೆಲಸವನ್ನು ಕಳೆದುಕೊಳ್ಳುತ್ತಲೇ ಇದ್ದಾರೆ. ಕನ್ನಡ ಭಾಷೆ ಅನ್ನದ ಪ್ರಶ್ನೆಯಾಗದ ಕಾರಣ ಮಕ್ಕಳ ಪ್ರಾಥಮಿಕ ಶಿಕ್ಷಣದಿಂದಲೂ ಕನ್ನಡ ಕ್ರಮೇಣ ದೂರವಾಗುತ್ತಿದೆ. ಇಂತಹ ಸಂದಿಗ್ಧ ದಿನಗಳಲ್ಲಿ ಸರೋಜಿನಿ ಮಹಿಷಿ ವರದಿ ಕುರಿತ ಕೂಗು ಅನಿವಾರ್ಯ ಹಾಗೂ ಅವಶ್ಯಕವೂ ಹೌದು. ಆ ನಿಟ್ಟಿನಲ್ಲಿ ಫೆಬ್ರವರಿ. 13 ರಂದು ಕರೆ ನೀಡಲಾಗಿರುವ ಬಂದ್ ಸಾಕಷ್ಟು ಮಹತ್ವಪಡೆದುಕೊಂಡಿದೆ

ನಿರುದ್ಯೋಗ ಎಂಬುದು ಭಾರತದ ಮಾತ್ರವಲ್ಲ ಕರ್ನಾಟಕದ ಪಾಲಿಗೂ ಸುಮಾರು ಆರು ದಶಕಗಳ ಪಿಡುಗು. ಹೀಗಾಗಿ ಕರ್ನಾಟಕದಲ್ಲಿ ಕನ್ನಡಿಗರಿಗೆ ಕನ್ನಡ ಅನ್ನದ ಪ್ರಶ್ನೆಯಾಗಬೇಕು ಎಂಬ ಕೂಗು 1983ರಿಂದಲೂ ಇದೆ. ದಿವಂಗತ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಕನ್ನಡಿಗರಿಗೆ ಕರ್ನಾಟಕದಲ್ಲಿ ಪರಭಾಷಿಕರಿಂದ ಅನ್ಯಾಯವಾಗುತ್ತಿದೆ ಎಂಬ ಕೂಗು ತುಸು ಜೋರಾಗಿಯೇ ಇತ್ತು. ಹೋರಾಟಗಳೂ ಸಹ ಉಗ್ರರೂಪ ತಳೆದಿತ್ತು.
ಈ ವೇಳೆ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕರ್ನಾಟಕದಲ್ಲಿ ಕನ್ನಡಿಗರಿಗೆ ದೊರೆಯುತ್ತಿದ್ದ ಉದ್ಯೋಗಾವಕಾಶಗಳನ್ನು ಪರಿಶೀಲಿಸಿ ವಿಮರ್ಶಿಸಲು ರಾಜ್ಯದ ಮೊದಲ ಮಹಿಳಾ ಸಂಸದೆ, ಸಚಿವೆ ಹಾಗೂ ಮಹಿಳಾ ಹೋರಾಟಗಾರ್ತಿ ಸರೋಜಿನಿ ಮಹಿಷಿ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಿದ್ದರು. ಸತತ ಮೂರು ವರ್ಷ ಈ ಕುರಿತು ಪರಿಶೀಲನೆ ನಡೆಸಿದ್ದ ಸಮಿತಿ 1986ರಲ್ಲಿ ಸರ್ಕಾರಕ್ಕೆ 53 ಅಂಶಗಳ ಒಂದು ವರದಿಯನ್ನು ಸಲ್ಲಿಸಿತ್ತು. ಅದೇ “ಸರೋಜಿನಿ ಮಹಿಷಿ” ವರದಿ.

ಅಸಲಿಗೆ 1986ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದ್ದ ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ 2020ರಲ್ಲಿ ಏಕೆ ಬಂದ್‌, ಪ್ರತಿಭಟನೆಗಳು ನಡೆಯುತ್ತಿವೆ? ಯಾರು ಈ ಸರೋಜಿನಿ ಮಹಿಷಿ? ಇವರು ನೀಡಿದ್ದ ವರದಿಯಲ್ಲಿ ಏನೇನು ಅಂಶಗಳಿವೆ? ಅದರ ಜಾರಿಗೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಯಾರು ಈ ಸರೋಜಿನಿ ಮಹಿಷಿ?

ಧಾರವಾಡದ ಶಿರಹಟ್ಟಿ ತಾಲೂಕಿನಲ್ಲಿ 1923ರ ಮಾರ್ಚ್ 3 ರಂದು ಬಿಂದುರಾವ್ ಮಹಿಷಿ ಹಾಗೂ ಕಮಲಾಬಾಯಿ ದಂಪತಿಗಳಿಗೆ ಜನಿಸಿದ ಸರೋಜಿನಿ ಮಹಿಷಿ, ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣವನ್ನು ಧಾರವಾಡದಲ್ಲೇ ಪೂರ್ಣಗೊಳಿಸಿದರು. ನಂತರ ಸಾಂಗ್ಲಿಯ ಮಿಲಿಂಗಟನ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತ ವಿಷಯದಲ್ಲಿ ಬಿಎ ಪದವಿ ಪಡೆದರು. ಮುಂಬೈನಲ್ಲಿ ಎಂ.ಎ. ಪದವಿ ಪಡೆದಿದ್ದಾರೆ.

ಹೋಮಿಯೋಪತಿ, ನಿಸರ್ಗ ಚಿಕಿತ್ಸೆ ಕಲಿಕೆಗಾಗಿ ಬೆಳಗಾವಿಯ ಆರ್‌ಎಲ್ಎಸ್ ಕಾಲೇಜಿನಲ್ಲಿ ಎಲ್.ಎಲ್.ಟಿ ಅಧ್ಯಯನ ಮಾಡಿ 1955ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಮೊದಲ ರ್‍ಯಾಂಕ್‌ನಲ್ಲಿ ಕಾನೂನು ಪದವಿ ಪಡೆದರು. ಅಲ್ಲದೆ, ಧಾರವಾಡದ ಜನತಾ ಲಾ ಕಾಲೇಜಿನಲ್ಲಿ ಕಾನೂನು ಪ್ರಾಧ್ಯಾಪಕಿಯಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ನಂತರ ವಕೀಲ ವೃತ್ತಿ ಪ್ರಾರಂಭಿಸಿ ಬಾರ್ ಕೌನ್ಸಿಲ್ ಪರೀಕ್ಷೆಯಲ್ಲಿ ಮೊದಲ ಸ್ಥಾನ ಗಳಿಸಿದ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು. ನಾಲ್ಕು ಬಾರಿ ಧಾರವಾಡದ ಸಂಸದೆಯಾಗಿದ್ದ ಇವರು 2 ಅವಧಿಗೆ ರಾಜ್ಯಸಭೆಗೂ ಆಯ್ಕೆಯಾಗಿದ್ದಾರೆ. ಮಹಿಳೆಯರ ಸಬಲೀಕರಣದ ಕುರಿತಾಗಿ ಸಾಕಷ್ಟು ಕೆಲಸ ಮಾಡಿದ ಇವರು ಸದ್ದು ಮಾಡಿದ್ದು, ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದ್ದು ಸ್ಥಳೀಯರಿಗೆ ಉದ್ಯೋಗ ಎಂಬ “ಮಣ್ಣಿನ ಮಗ” ನೀತಿಯನ್ನು ಪ್ರತಿಪಾದಿಸುವ ಸರೋಜಿನಿ ಮಹಿಷಿ ವರದಿ ನೀಡಿದ ನಂತರವೇ.

ಅಂತಾದ್ದೇನಿದೆ ಈ ಸರೋಜಿನಿ ಮಹಿಷಿ ವರದಿಯಲ್ಲಿ?

ಮಿಶ್ರ ಆರ್ಥಿಕ ನೀತಿಯಿಂದ ಮಾತ್ರ ಭಾರತವನ್ನು ಅಭಿವೃದ್ಧಿ ಪಥದಲ್ಲಿ ನಡೆಸಲು ಸಾಧ್ಯ ಎಂಬ ಪರ್ಯಾಯ ಆರ್ಥಿಕ ವ್ಯವಸ್ಥೆಯ ಜಾರಿಗೆ ತುದಿಗಾಲಲ್ಲಿ ನಿಂತಿದ್ದ 90ರ ದಶಕವದು. ಪಿ. ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಹೊಸ ಆರ್ಥಿಕ ನೀತಿಯನ್ನು ಜಾರಿಗೆ ತಂದಿತ್ತು. ಆದರೆ, ಮಿಶ್ರ ಆರ್ಥಿಕತೆ ಇಂದು ಮೇಲ್ನೋಟಕ್ಕೆ ಒಂದೇ ರೀತಿ ಕಂಡು ಬಂದರೂ ಮುಕ್ತ ಹಾಗೂ ಮಿಶ್ರ ಆರ್ಥಿಕ ನೀತಿಯ ಮಧ್ಯೆ ಭಿನ್ನತೆ ಇದೆ.

ಸರ್ಕಾರದ ಭಾಗವಹಿಸುವಿಕೆ ಇಲ್ಲದೆ ಇಂದು ಖಾಸಗಿ ಕಂಪನಿ ದೇಶದ ಯಾವುದೇ ಮೂಲೆಯಲ್ಲಿ ತಮ್ಮ ವ್ಯವಹಾರವನ್ನು ಆರಂಭಿಸುವಷ್ಟು ಸ್ವಾತಂತ್ರ್ಯವನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ನೀಡಲಾಗಿದೆ. ಒಂದು ಕಂಪನಿ ಯಾವುದೇ ರಾಜ್ಯದಲ್ಲಿ ತನ್ನ ಕಾರ್ಯಚಟುವಟಿಕೆ ಆರಂಭಿಸಿದರೆ ಅಲ್ಲಿನ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅಧಿಕಾರಿಗಳ ಆಜ್ಞೆಯನ್ನು ಪಾಲಿಸಬೇಕು.

ಆದರೆ, ಭಾರತದಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಸರ್ಕಾರವನ್ನೇ ನಿಯಂತ್ರಿಸಬಲ್ಲಷ್ಟು ಶಕ್ತಿ ಪಡೆದಿವೆ. ಇಲ್ಲಿ ಸರ್ಕಾರದ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಹಾಗಾಗಿ ರಾಜ್ಯದ ಯುವಜನತೆ ಕೆಲಸವಿಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಉದ್ಯೋಗ ಸೃಷ್ಠಿ ಹೊಸ ಆರ್ಥಿಕ ನೀತಿಯ ಮೊದಲ ಆದ್ಯತೆಯಾದರೂ ಸ್ಥಳೀಯರಿಗೆ ಮಣೆಹಾಕುವ ಯಾವುದೇ ನೀತಿ ಪ್ರಚಲಿತದಲ್ಲಿಲ್ಲ. ಇಂಗ್ಲೀಷ್ ಭಾಷೆ ಕಲಿತರೆ ಮಾತ್ರ ಇಲ್ಲಿನ ಐಟಿ-ಬಿಟಿ ಉದ್ಯಮಗಳಲ್ಲಿ ಕೆಲಸ ಪಡೆಯುವುದು ಸಾಧ್ಯ. ಹಾಗಾಗಿ ಪಾಲಕರು ತಮ್ಮ ಮಕ್ಕಳ ಭವಿಷ್ಯದ ಚಿಂತೆಯಿಂದ ಶಾಲಾ ದಿನಗಳಿಂದಲೇ ಇಂಗ್ಲೀಷ್ ಮಾಧ್ಯಮಕ್ಕೆ ಆದ್ಯತೆ ನೀಡುತ್ತಿದ್ದಾರೆ.

ಹಾಗಾಗಿ ಕನ್ನಡ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೆಲಸದಲ್ಲಿ ಶೇ.5ರಷ್ಟು ಮೀಸಲು ಸೌಲಭ್ಯ ನೀಡಿದಂತೆ, ರಾಜಧಾನಿಯಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳಲ್ಲೂ ಮೀಸಲಾತಿ ನೀಡಬೇಕು. ಕನ್ನಡ, ಯುವಜನರಿಗೆ ಉದ್ಯೋಗಾವಕಾಶ ಲಭಿಸಿದರೆ ಕನ್ನಡದಿಂದ ಅನ್ನ ಲಭಿಸಿದರೆ, ಸಾಮಾನ್ಯವಾಗಿ ಕನ್ನಡದ ಉಳಿವಿನ ಪ್ರಶ್ನೆ ತೆರೆಯ ಮರೆಗೆ ಸರಿಯಲಾರಂಭಿಸುತ್ತದೆ.

ಈ ನಿಟ್ಟಿನಲ್ಲಿ ಡಾ. ಸರೋಜಿನಿ ಮಹಿಷಿ ವರದಿ ಕರ್ನಾಟಕದ ಮಟ್ಟಿಗೆ ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಸಾರ್ವಜನಿಕ ಮತ್ತು ಖಾಸಗಿ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿಕೆಯಲ್ಲಿ ಆದ್ಯತೆ ಇರಬೇಕು. ಸರ್ಕಾರಿ ವಲಯದಲ್ಲಿ ಶೇ.90 ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಬೇಕು. ಬಹುರಾಷ್ಟ್ರೀಯ ಮತ್ತು ಖಾಸಗಿ ಉದ್ದಿಮೆಗಳಲ್ಲೂ ಮೊದಲು ಶೇ.5 ರಷ್ಟು ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕೆಲಸ ನೀಡಬೇಕು ಎಂಬುದು ವರದಿಯ ಮುಖ್ಯಾಂಶಗಳು.

ಆನಂತರ ಇದು ಹಂತ ಹಂತವಾಗಿ ಶೇ.100ರಷ್ಟು ಕನ್ನಡಿಗರಿಗೆ ಅವಕಾಶ ನೀಡಬೇಕು ಎಂಬುದನ್ನೂ ಸೇರಿದಂತೆ ಡಾ. ಸರೋಜಿನಿ ಮಹಿಷಿ ಆಯೋಗ 1986ರಲ್ಲೇ 58 ಶಿಫಾರಸ್ಸುಗಳನ್ನೊಳಗೊಂಡ ಸಮಗ್ರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.

ಅಂದಿನ ಸರ್ಕಾರ ಈ ವರದಿಯಲ್ಲಿನ 12 ಶಿಫಾರಸ್ಸುಗಳನ್ನು ತನಗೆ ಒಪ್ಪುವ ಅಧಿಕಾರವಲ್ಲವೆಂದು ಕೈಬಿಟ್ಟಿದ್ದು, ಉಳಿದ ಶಿಫಾರಸ್ಸುಗಳ ಅನುಷ್ಠಾನಕ್ಕೆ ತರಲು ಪ್ರಯತ್ನಿಸುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಬಹುರಾಷ್ಟ್ರೀಯ/ಖಾಸಗಿ ಕಂಪನಿಗಳಲ್ಲಿ ಈ ಶಿಫಾರಸ್ಸನ್ನು ಪಾಲಿಸಬೇಕು, ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಬೇಕು ಎನ್ನುವ ಪ್ರಮುಖ ಶಿಫಾರಸಿಗೆ ಈವರೆಗೆ ಯಾವುದೇ ಸರ್ಕಾರ ಒಪ್ಪಿಗೆ ನೀಡಿಲ್ಲ.

ಪರಿಣಾಮ ಸರೋಜಿನಿ ಮಹಿಷಿ ಕನ್ನಡಿಗರಿಗೆ ಕನ್ನಡ ಅನ್ನದ ಪ್ರಶ್ನೆಯಾಗಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಸಲ್ಲಿಸಿದ ವರದಿ ಮೂರು ದಶಕಗಳಾದರೂ ಇಂದಿಗೂ ಜಾರಿಗೆ ಬರಲಿ ಎಂಬ ಕೂಗು ಕೇಳಿಬರುತ್ತಲೇ ಇದೆಯೇ ಹೊರತು, ಕಾರ್ಯರೂಪಕ್ಕೆ ಬರುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಪರಿಣಾಮ ರಾಜ್ಯದ ಉದ್ಯೋಗಗಳು ಕನ್ನಡಿಗರಿಗೆ ಲಭ್ಯವಾಗದೆ ಅನ್ಯ ರಾಜ್ಯದವರ ಪಾಲಾಗುತ್ತಿದೆ.

ಒಂದೆಡೆ ನೆರೆಯ ತಮಿಳುನಾಡಿನಲ್ಲಿ ದಶಕದ ಹಿಂದೆಯೇ ಸರ್ಕಾರಿ ಕೆಲಸವನ್ನು ಶೇ.90 ರಷ್ಟು ಸ್ಥಳೀಯರಿಗೆ ನೀಡಬೇಕು ಎಂಬ ಕಾಯ್ದೆ ಚಾಲ್ತಿಯಲ್ಲಿದೆ. ಆಂಧ್ರ ಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸರ್ಕಾರಿ ಹುದ್ದೆಗಳು ಸ್ಥಳೀಯರಿಗೆ ಮಾತ್ರ ಎಂಬ ಕಾನೂನನ್ನು ಜಾರಿಗೆ ತಂದಿದ್ದರು. ಆದರೆ, ಖಾಸಗಿ ಕಂಪೆನಿಗಳಲ್ಲೂ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂಬ ಕುರಿತು ಯಾವ ರಾಜ್ಯದಲ್ಲೂ ಸ್ಪಷ್ಟ ಕಾನೂನು ಇಲ್ಲ. ಕೇಂದ್ರ ಸರ್ಕಾರ ಈ ಕುರಿತು ತಲೆ ಕೆಡಿಸಿಕೊಳ್ಳುವ ಗೋಜಿಗೂ ಹೋಗಿಲ್ಲ.

ಆದರೆ, ರಾಜ್ಯ ಮಟ್ಟದಲ್ಲಿ ಕರ್ನಾಟಕದಲ್ಲಿ ಈ ಹೋರಾಟಕ್ಕೆ ಜೀವ ತುಂಬಬೇಕಾದ ಕೆಲ ಕನ್ನಡಪರ ಸಂಘಟನೆಗಳೂ ಸಹ ಇದೀಗ ಹೋರಾಟದ ಕಣದಿಂದ ಹಿಂದೆ ಸರಿದಿರುವುದು ಭವಿಷ್ಯದ ಆತಂಕಕ್ಕೆ ಕಾರಣವಾಗಿದೆ. ಇವನ್ನೆಲ್ಲಾ ಗಮನಿಸಿದರೆ ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಒತ್ತಾಯಿಸಿ ಇನ್ನೂ ಹತ್ತಾರು ದಶಕಗಳ ನಂತರ ಹೋರಾಟ ನಡೆದರೂ ಅಚ್ಚರಿ ಇಲ್ಲ ಎಂದೆನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...