Homeಕರ್ನಾಟಕಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

- Advertisement -
- Advertisement -

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು? ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಮಾಫಿಯಾ ನಿಯಂತ್ರಿಸುವುದು ಅಸಾಧ್ಯ ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

’ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. ‘ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ,’ ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚನ್ನಾಗಿರುತ್ತಿತ್ತು’ ಎಂದಿದ್ದಾರೆ.

ವಿಧಾನಸಭೆಯಲ್ಲಿ ಭೂ ಮಾಫಿಯಾ ಬಗ್ಗೆ ಮಾತನಾಡಿದ್ದ ಸಚಿವ ಆರ್‌.ಅಶೋಕ್, ‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ. ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ’ ಎಂದಿದ್ದರು.

ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಮತ್ತು ಕಂದಾಯ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಮಾಫಿಯ ತಡೆಯಲಾಗದು ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ ಎಂದಿದ್ದಾರೆ.

’ಇಂದು ಭೂ ಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ ‘ನಿಯಂತ್ರಿಸಲಾಗುತ್ತಿಲ್ಲ,’ ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,’ ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ ಏನು ಮಾಡಲು ಸಾಧ್ಯ..? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು?’ ಎಂದು ಸರ್ಕಾರ ಮತ್ತು ಕಂದಾಯ ಇಲಾಖೆಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

0
ಪ್ರಸ್ತುತ ಸುಪ್ರೀಂಕೋರ್ಟ್‌ ಅಂಗಳದಲ್ಲಿರುವ 'ತಪ್ಪು ದಾರಿಗೆಳೆಯುವ ಜಾಹೀರಾತುಗಳ' ಕುರಿತು ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸ ಸಾರ್ವಜನಿಕ ಕ್ಷಮೆಯಾಚನೆಯನ್ನು ಪ್ರಕಟಿಸಿದೆ. ನಿನ್ನೆ ಸುಪ್ರೀಂಕೋರ್ಟ್‌, ಪತ್ರಿಕೆಗಳಲ್ಲಿ ಮುದ್ರಿತ ಹಿಂದಿನ ಸಾರ್ವಜನಿಕ...