Homeಕರ್ನಾಟಕಬೇಜವಾಬ್ದಾರಿ ಕೋಮುವಾದಿ ಶಕ್ತಿಗಳು ಧಮ್ಕಿ ಹಾಕಿದ ಕೂಡಲೇ ಸರ್ಕಾರ ಬೆದರುವುದೆಂದರೆ ಏನರ್ಥ?: ಜಸ್ಟಿಸ್ ನಾಗಮೋಹನ್ ದಾಸ್

ಬೇಜವಾಬ್ದಾರಿ ಕೋಮುವಾದಿ ಶಕ್ತಿಗಳು ಧಮ್ಕಿ ಹಾಕಿದ ಕೂಡಲೇ ಸರ್ಕಾರ ಬೆದರುವುದೆಂದರೆ ಏನರ್ಥ?: ಜಸ್ಟಿಸ್ ನಾಗಮೋಹನ್ ದಾಸ್

ಇದರ ವಿರುದ್ಧ ನಾವು ಧ್ವನಿ ಎತ್ತಬೇಕು. ಇಂತಹದ್ದಕ್ಕೆಲ್ಲಾ ಶರಣಾಗುತ್ತಾ ಹೋದರೆ ನಮ್ಮ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಕಳೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಬೇಜವಾಬ್ದಾರಿ ಕೋಮುವಾದಿ, ಮೂಲಭೂತವಾದಿ ಶಕ್ತಿಗಳು, ‘ಅದು ಸರಿಯಿಲ್ಲ, ಇದು ಸರಿಯಿಲ್ಲ’ ಎಂದು ಹೇಳಿ, ಧಮ್ಕಿ ಹಾಕಿದ ಕೂಡಲೇ ಸರ್ಕಾರ ಅದಕ್ಕೆ ಬೆದರಿ ಕಾರ್ಯಕ್ರಮ ರದ್ದು ಮಾಡುವುದು ಅಂದರೆ ಏನರ್ಥ? ಸರ್ಕಾರ ಸಂವಿಧಾನದ ಪ್ರಕಾರ ನಡೆದುಕೊಳ್ಳಬೇಕೆ ಅಥವಾ ಇಂತಹ ಶಕ್ತಿಗಳಿಗೆ ಶರಣಾಗಬೇಕೆ? ಇದು ದುರದೃಷ್ಟಕರ ಘಟನೆ. ಇಂತಹ ಸರ್ಕಾರಗಳು ಅಧಿಕಾರದಲ್ಲಿ ಮುಂದುವರೆಯುವುದಕ್ಕೆ ಲಾಯಕ್ಕಿದೆಯೆ? ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌‌. ನಾಗಮೋಹನ ದಾಸ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಥಮ ಪ್ರಕಾಶನ ಬೆಂಗಳೂರು ಪ್ರಕಟಿಸಿದ್ದ “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ಯೋಜಿಸಲಾಗಿತ್ತು. ಆದರೆ ಸಂಘಪರಿವಾರದಿಂದ ವಿರೋಧ ವ್ಯಕ್ತವಾದ್ದರಿಂದ ನಿಗದಿಪಡಿಸಲಾಗಿದ್ದ ಸ್ಥಳ ಬದಲಾಯಿಸಿ, ಲೇಖಕರ ಮನೆಯಲ್ಲಿಯೇ ಗುರುವಾರ ಸಂಜೆ ಬಿಡುಗಡೆಗೊಳಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತಗೆ ಮಾತನಾಡಿದ ಜಸ್ಟಿಸ್ ನಾಗಮೋಹನದಾಸ್, “ನಾವು ಯಾವುದೇ ಕಾರಣಕ್ಕೂ ಇಂತಹ ಬೆದರಿಕೆಗೆ ಶರಣಾಗಬಾರದು. ಕೆಲವೇ ಜನರಿದ್ದರೂ ಸರಿ, ಇದರ ವಿರುದ್ಧ ನಾವು ಧ್ವನಿ ಎತ್ತಬೇಕು. ಇಂತಹದ್ದಕ್ಕೆಲ್ಲಾ ಶರಣಾಗುತ್ತಾ ಹೋದರೆ ನಮ್ಮ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಕಳೆದುಕೊಳ್ಳುತ್ತೇವೆ. ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಕಳೆದುಕೊಂಡದರೆ ಪ್ರಜಾಪ್ರಭುತ್ವವನ್ನು ಕಳೆದುಕೊಳ್ಳುತ್ತೇವೆ. ಪ್ರಜಾಪ್ರಭುತ್ವ ಕಳೆದುಕೊಂಡರೆ ನಾವು ಸಂವಿಧಾನ ಕಳೆದುಕೊಳ್ಳುತ್ತೇವೆ. ಈ ಪರಿಸ್ಥಿತಿ ಬಂದರೆ ನಾವು ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡು ಗುಲಾಮರಂತೆ ಬದುಕಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಸಂಘಪರಿವಾರದ ವಿರೋಧದ ನಡುವೆಯು ‘ಇಮ್ರಾನ್ ಖಾನ್ ಒಂದು ಜೀವಂತ ದಂತಕತೆ’ ಪುಸ್ತಕ ಬಿಡುಗಡೆ

“ಇಮ್ರಾನ್ ಖಾನ್ ರಾಜಕೀಯ ನಿಲುವುಗಳ ಬಗ್ಗೆ ನನ್ನ ಗಟ್ಟಿ ವಿರೋಧವಿದೆ. ಅಷ್ಟಕ್ಕೆ ಅವರ ವಿರುದ್ಧ ದ್ವೇಷ ಅಸೂಯೆ, ಅಸಹನೆಯನ್ನು ಬೆಳೆಸಿಕೊಳ್ಳಬೇಕೆ? ಇದು ಎಲ್ಲಿಗೆ ಕೊನೆಯಾಗುತ್ತದೆ?” ಎಂದು ಅವರು ಪ್ರಶ್ನಿಸಿದರು.

“ಅಮೆರಿಕಾದವರು ಪಾಕಿಸ್ತಾನಕ್ಕೆ ಆಹಾರ ಸರಬರಾಜು ಮಾಡುತ್ತದೆ. ಅಲ್ಲಿನ ಮಾಜಿ ಅಧ್ಯಕ್ಷ ಒಬಾಮ ಪುಸ್ತಕ ಭಾರತದಲ್ಲಿ ರಾರಾಜಿಸುತ್ತದೆ. ಟ್ರಂಪ್ ಬಗ್ಗೆಗಿನ ಪುಸ್ತಕಗಳು ಓಡಾಡುತ್ತಿದೆ. ಅವರಿಗೆ ಭಾರತದಲ್ಲಿ ದೇವಸ್ಥಾನವನ್ನೇ ಕಟ್ಟಿದ್ದಾರೆ. ಇವೆಲ್ಲಾ ಏನು? ಸಂಘಪರಿವಾರದ ಈ ನಡೆ ಸಪೂರ್ಣವಾಗಿ ಸರಿಯಲ್ಲ” ಎಂದು ಜಸ್ಟಿಸ್ ನಾಗಮೋಹನ್ ದಾಸ್ ಅವರು ತಿಳಿಸಿದರು.

ಸಂಘಪರಿವಾದ ವಿರೋಧದ ಬಗ್ಗೆ ಮಾತನಾಡಿದ ಜಸ್ಟಿಸ್ ನಾಗಮೋಹನ್ ದಾಸ್ ಅವರು,“ಬಲಪಂಥೀಯರು ದೂರು ನೀಡಿದ್ದ ಹಿನ್ನಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಕಲಾಗ್ರಾಮಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ರದ್ದಾಗಿದೆ ಎಂದು ಬೋರ್ಡ್‌ ಹಾಕಿದ್ದರು. ಈ ನಂತರ ಆಯೋಜಕರು ಲೇಖಕರ ಮನೆಯ ಅಂಗಳಲ್ಲೇ ಪುಸ್ತಕ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಎಷ್ಟು ಬೆಂಕಿ ಹಚ್ಚಬಲ್ಲಿರಿ ನೀವು?

“ಯಾರೂ ಪುಸ್ತಕ ಓದದೇ, ಅದರಲ್ಲಿನ ವಿಚಾರಗಳನ್ನು ತಿಳಿದುಕೊಳ್ಳದೆ, ಇಮ್ರಾನ್ ಖಾನ್ ಒಬ್ಬ ಮುಸ್ಲಿಂ ಮತ್ತು ಪಾಕಿಸ್ತಾನಿ ಎಂಬ ಕಾರಣಕ್ಕೆ ವಿರೋಧ ಮಾಡುವಂತದ್ದು ಸರಿಯಲ್ಲ. ಇದು ಮೂರ್ಖರು ಮಾಡುವ ಕೆಲಸ. ಪುಸ್ತಕದಲ್ಲಿ ರಾಜಕೀಯದ ಬಗ್ಗೆ, ಧರ್ಮದ ಬಗ್ಗೆ ಯಾವುದೇ ವಿಚಾರವಿಲ್ಲ. ಇಮ್ರಾನ್ ಖಾನ್ ಅವರ ತಾಯಿಗೆ ಕ್ಯಾನ್ಸರ್‌ ಬಂದು ತೀರಿಹೋಗುತ್ತಾರೆ. ಅವರ ಊರಿನಲ್ಲಿ ಕ್ಯಾನ್ಸರ್‌ ಆಸ್ಪತ್ರೆ ಇಲ್ಲದಿದ್ದಕ್ಕೆ ಅವರು ಜಗತ್ತಿನ ಇರುವ ತನ್ನ ಎಲ್ಲಾ ಸ್ನೇಹಿತರಿಂದ ಹಣವನ್ನು ದೇಣಿಗೆ ಪಡೆದು ಆಸ್ಪತ್ರೆ ಕಟ್ಟಿದ್ದಾರೆ. ಈ ಆಸ್ಪತ್ರೆ ಕಟ್ಟಲು ಭಾರತೀಯ ಕ್ರಿಕೆಟಿಗರು ಸಹಾಯ ಮಾಡಿದ್ದಾರೆ. ಚಿತ್ರ ನಟ ಅಮಿತಾಬ್ ಬಚ್ಚನ್ ಕೂಡಾ ಆ ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಕತೆಯನ್ನು ಪುಸ್ತಕ ಹೇಳಿದೆ” ಎಂದು ಅವರು ತಿಳಿಸಿದರು.

“ಇಮ್ರಾನ್ ಖಾನ್‌ ಅವರ ರಾಜಕೀಯ ವಿಚಾರಗಳು ಸೇರಿದಂತೆ ಅವರ ಹಲವಾರು ವಿಚಾರಗಳನ್ನು ನಾನು ಒಪ್ಪಲ್ಲ. ಅಷ್ಟಕ್ಕೆ ಅವರ ಮೇಲೆ ದ್ವೇಷ ಬೆಳೆಸಿಕೊಳ್ಳಬಹುದೆ? ನಮ್ಮ ದೇಶದಲ್ಲಿ ಧರ್ಮ, ಜಾತಿ, ಭಾಷೆ, ಆಹಾರ ಹೀಗೆ ಎಲ್ಲಾ ವಿಚಾರದಲ್ಲೂ ಅಸಹಿಷ್ಣುತೆ ಜಾಸ್ತಿಯಾಗುತ್ತಿದೆ. ಸಹಿಷ್ಣುತೆ ನಮ್ಮ ಸಂವಿಧಾನದ ಮೂಲ ಆಶಯವಾಗಿದೆ. ಸುಪ್ರಿಂಕೋರ್ಟ್‌‌ ನ್ಯಾಯಮೂರ್ತಿಗಳಾದ ಒ.ಚಿನ್ನಪ್ಪ ರೆಡ್ಡಿ 1993ರ ಒಂದು ತೀರ್ಪಿನಲ್ಲಿ, ‘ನಮ್ಮ ಸಂಪ್ರದಾಯ, ನಮ್ಮ ತತ್ವಗಳು, ನಮ್ಮ ಸಂವಿಧಾನ ಸಹಿಷ್ಣುತೆಯನ್ನು ಭೋಧಿಸುತ್ತದೆ ಮತ್ತು ಪಾಲಿಸುತ್ತದೆ, ಅದನ್ನು ದುರ್ಬಲಗೊಳಿಸಬಾರದು’ ಎಂದು ಬರೆಯುತ್ತಾರೆ” ಎಂದು ಅವರು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದರು.

ಮಾಜಿ ಕ್ರಿಕೆಟಿಗ, ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಬಗ್ಗೆಗಿನ, “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕವನ್ನು ಗುರುವಾರ ಬೆಂಗಳೂರಿನ ನಾಗರಬಾವಿಯಲ್ಲಿ ಬಿಡುಗಡೆ ಮಾಡಲಾಯಿತು. ಪುಸ್ತಕದ ಲೇಖಕರಾದ ಸುಧಾಕರ್‌ ಎಸ್‌.ಬಿ. ಅವರ ನಿವಾಸದಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌‌. ನಾಗಮೋಹನ ದಾಸ್‌ ಅವರು ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ‘ಭಗತ್‌ ಸಿಂಗ್ ಜೈಲ್ ಡೈರಿ’

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ, ಮಾಜಿ ಸಚಿವರಾದ ಡಾ.ಲೀಲಾದೇವಿ ಆರ್ ಪ್ರಸಾದ್, ಪುಸ್ತಕದ ಲೇಖಕ ಸುಧಾಕರ್ ಎಸ್ ಬಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ. ಪ್ರಕಾಶ್ ಟಿ.ಎನ್. ಕಮ್ಮರಡಿ, ಪ್ರೊ. ರಾಜಪ್ಪ ದಳವಾಯಿ, ವಿ.ಎನ್. ವೀರನಾಗಪ್ಪ ಹಾಗೂ ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ಅವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಂಘಿಗಳು ತೀವ್ರ ಮನೋವಿಕಾರಿಗಳು. ಇವರ ಅಪ್ಪಂದಿರು ಅಡ್ವಾಣಿ, ಮೋದಿಗಳೆಲ್ಲಾ ಪಾಕಿಸ್ತಾನಕ್ಕೆ ಹೋದವರೆ.ಮೋದಿ ಮಿತ್ರ ಆಜಿತ್ ಧೋವಲನ ಮಕ್ಕಳು ಸೌದಿಯಲ್ಲಿ ಪಾಕಿಸ್ತಾನಿಗಳ ಜೊತೆ ವ್ಯಾವಹಾರಿಕ ಪಾಲುದಾರರು ಎಂದು ಓದಿದ ನೆನಪು.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....