Homeಮುಖಪುಟಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಸಿಖ್‌ ದಲಿತ ವ್ಯಕ್ತಿಯನ್ನು ಪಂಜಾಬ್‌‌ ಮುಖ್ಯಮಂತ್ರಿಯನ್ನಾಗಿ ನೇಮಿಸಿರುವಲ್ಲಿ ಈ ಎರಡು ಕಾರಣಗಳು ಮುಖ್ಯವಾಗಿವೆ.

- Advertisement -
- Advertisement -

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಂಜಾಬ್‌ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಕುತೂಹಲ ಎಲ್ಲರಲ್ಲೂ ಇತ್ತು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಯಾವ ಹೆಜ್ಜೆ ಇಡಬಹುದು ಎಂಬ ಕುತೂಹಲ ರಾಜಕೀಯ ಪಡಸಾಲೆಯಲ್ಲಿ ನೆಲೆಸಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಪಕ್ಷವು ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪಂಜಾಬ್‌ನಲ್ಲಿ ಅತಿಹೆಚ್ಚಿರುವ ದಲಿತ ಸಮುದಾಯದ ಮೊದಲ ಮುಖ್ಯಮಂತ್ರಿಯೂ ಅವರಾಗಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಿರುವುದರ ಹಿಂದೆ ರಾಜಕೀಯ ಲೆಚ್ಚಾಚಾರಗಳಿವೆ. ಜಾತಿ ಧ್ರುವೀಕರಣದ ಯೋಚನೆ ಇದೆ. ಪಂಜಾಬ್‌‌ನಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಇಟ್ಟಿರುವ ಹೆಜ್ಜೆಗಳು ಇದಕ್ಕೆ ಕಾರಣವಾಗಿದೆ.

ನವಜೋತ್‌ ಸಿಂಗ್‌ ಸಿಧು ಅವರೊಂದಿಗೆ ನಿಂತು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರುದ್ಧ ಸಮರ ಸಾರಿ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾರಣರಾದವರಲ್ಲಿ ಚಮ್‌ಕೌರ್‌‌ ಸಾಹಿಬ್‌ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಿ ಕೂಡ ಒಬ್ಬರಾಗಿದ್ದಾರೆ. ಗುರುದಾಸ್‌ಪುರ ಪ್ರಾಂತ್ಯದ ದೆರಾ ಬಾಬಾ ನಾಯಕ್‌ ವಿಧಾನಸಭಾ ಕ್ಷೇತ್ರದ ಸುಖ್‌ಜಿಂದರ್‌ ಸಿಂಗ್‌ ರಾಂದ್ವಾ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುತ್ತಿರುವಾಗಲೇ ಚನ್ನಿ ಹೆಸರು ಘೋಷಣೆಯಾಗಿದ್ದು ಅಚ್ಚರಿಯೇ ಸರಿ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ಹಾಗಿದ್ದರೆ ಚನ್ನಿ ಅವರ ಆಯ್ಕೆ ಹಿಂದಿನ ಲೆಕ್ಕಾಚಾರವೇನು?

‘ದಿ ವೈರ್‌’ ಜಾಲತಾಣದಲ್ಲಿ ಲೇಖಕ ವಿವೇಕ್‌ ಗುಪ್ತಾ ಅವರು ಹೀಗೆ ವಿವರಿಸುತ್ತಾರೆ:

1. ಮಜ್ಹಾ ಪ್ರದೇಶದ ಸುಖ್‌ಜಿಂದರ್‌ ರಾಂಧ್ವಾ ಆಯ್ಕೆಗಿಂತ ನಜಜೋತ್‌ ಸಿಧು ಅವರು ಚನ್ನಿ ಅವರ ಆಯ್ಕೆಯನ್ನು ಬಯಸಿದ್ದರು. ಮುಂದಿನ ಚುನಾವಣೆಯ ನಾಯಕತ್ವವನ್ನು ನಿಭಾಯಿಸಬೇಕಾಗಿರುವುದರಿಂದ ಮುಖ್ಯಮಂತ್ರಿ ಪಟ್ಟವನ್ನು ಸಿಧು ಬಯಸಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಕುಳಿತರೆ ಚುನಾವಣೆ ಮಂಕಾಗಬಹುದು ಎಂಬುದು ಸಿಧು ಅವರ ಆಲೋಚನೆಯಾಗಿತ್ತು. ಅಂದರೆ ಸಿಧು ಮುಂದಿನ ಚುನಾವಣೆಯ ನಾಯಕತ್ವ ವಹಿಸುವುದು ಖಚಿತ. ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ, ಮುಂದೆ ಸಿಧು ಮಹೋನ್ನತ ಸ್ಥಾನವನ್ನು ಪಡೆಯಲಿದ್ದಾರೆ. ಸಿಧು ಉನ್ನತಿಗೆ ಚನ್ನಿ ಅವರು ತೊಡಕಾಗುವುದಿಲ್ಲ. ಪ್ರಭಾವಿ ವ್ಯಕ್ತಿಯಾದ ಸುಖ್‌ಜಿಂದರ್‌ ಆಯ್ಕೆಯಾದರೆ ಸಿಧು ಅವರ ನಾಯಕತ್ವಕ್ಕೆ ತೊಡಕಾಗುತ್ತಿತ್ತು ಎಂಬ ಲೆಕ್ಕಾಚಾರ ಇಲ್ಲಿದೆ.

2. ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರೆ ಪಂಜಾಬ್‌ನಲ್ಲಿ ದಲಿತ ಮತಗಳು ಚದುರಿ ಹೋಗುವುದಿಲ್ಲ ಎಂಬ ಲೆಕ್ಕಾಚಾರವಿದೆ. ರಾಜ್ಯದ ಮೂರು ಕೋಟಿ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ದಲಿತರಿದ್ದಾರೆ. ಅತಿ ಹೆಚ್ಚು ದಲಿತರಿರುವ ರಾಜ್ಯ ಪಂಜಾಬ್‌ ಆಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 32ರಷ್ಟು ದಲಿತರಿದ್ದಾರೆ ಎಂದು 2011ರ ಜನಗಣತಿ ಹೇಳುತ್ತದೆ.

ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಶಿರೋಮಣಿ ಅಕಾಲಿ ದಳ ಪಕ್ಷವು, ದಲಿತರೊಂದಿಗೆ ಗುರುತಿಸಿಕೊಂಡಿರುವ ಬಹುಜನ ಸಮಾಜ ಪಾರ್ಟಿ (ಬಿಎಸ್‌‌ಪಿ) ಜೊತೆ ಪಂಜಾಬ್‌ನಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ಪಂಜಾಬ್‌‌ನಲ್ಲಿ ದಲಿತ ರಾಜಕಾರಣವು ಗಮನ ಸೆಳೆದಿದೆ. ಸರ್ಕಾರವನ್ನು ರಚಿಸಬೇಕಾದರೆ ದಲಿತರ ಮತಗಳು ಅಗತ್ಯ. ಹೀಗಾಗಿ ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲಾಗಿದೆ.

“ಪಂಜಾಬ್‌ ಕಾಂಗ್ರೆಸ್ ಮುಖ್ಯಸ್ಥನಾಗಿ ಜಾಟ್‌ ಸಿಖ್‌ (ಸಿಧು), ಮುಖ್ಯಮಂತ್ರಿಯಾಗಿ ಸಿಖ್‌ ದಲಿತ ವ್ಯಕ್ತಿ ಎಂಬ ರಾಜಕೀಯ ತಂತ್ರವನ್ನು ರೂಪಿಸಿ 2022ರ ಚುನಾವಣೆಯನ್ನು ಎದುರಿಸುವುದು ಕಾಂಗ್ರೆಸ್‌ನ ನಡೆಯಾಗಿದೆ” ಎಂದು ರಾಜಕೀಯ ವಿಶ್ಲೇಷಕ ಹರ್‌ಜೇಶ್ವರ್‌ ಪಾಲ್‌ ಸಿಂಗ್‌ ಹೇಳುತ್ತಾರೆ.

ರಾಜಕೀಯ ವಿಶ್ಲೇಷಕ ಖಾಲಿದ್ ಮೊಹಮ್ಮದ್ ಅವರ ಪ್ರಕಾರ, ಚನ್ನಿಯವರ ನೇಮಕಾತಿಯು ಕೇವಲ ಸಿಧು ಅವರ ಆಜ್ಞೆಯ ಮೇರೆಗೆ ಮಾಡಿದ ಒಂದು ಮಧ್ಯಂತರ ವ್ಯವಸ್ಥೆಯಾಗಿದೆ.

Photo Courtesy: The Tribune (ಪೋಟೋ: ಚರಣ್‌ಜಿತ್‌ ಸಿಂಗ್‌‌ ಚನ್ನಿ)

“ಮುಖ್ಯಮಂತ್ರಿ ಆಯ್ಕೆಯಲ್ಲಿ ಸಿಧು ಅವರು ಗಾಂಧಿ ಕುಟುಂಬದ ಮೇಲೆ ಪ್ರಭಾವ ಬೀರಿದ್ದಾರೆ. ಚುನಾವಣೆ ಮುಂದಾಳತ್ವ ವಹಿಸಬೇಕಾದರೆ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ತನಗಿಂತ ಪ್ರಭಾವಿಯಾಗಿರಬಾರದು ಎಂಬ ಸಿಧು ಅವರ ಲೆಕ್ಕಾಚಾರದ ಮೇರೆಗೆ ಮುಖ್ಯಮಂತ್ರಿಯರನ್ನು ನೇಮಿಸಲಾಗಿದೆ. ಸಿಧು ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ, ಜೊತೆಗೆ ಅಮರಿಂದರ್‌ ಸಿಂಗ್‌ ಅವರ ನಾಯಕತ್ವದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗದಿದ್ದ ನಿರ್ಧಾರಗಳ ಮೇಲೂ ಈಗ ಸರ್ಕಾರದಲ್ಲಿ ಸಿಧು ಪ್ರಭಾವ ಬೀರಲಿದ್ದಾರೆ” ಎನ್ನುತ್ತಾರೆ ಖಾಲಿದ್‌ ಮೊಹಮ್ಮದ್‌. ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರೂ ಚನ್ನಿ ಅವರ ಆಯ್ಕೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...