Homeಮುಖಪುಟಅದಾನಿಗೂ ಪ್ರಧಾನಿ ಮೋದಿಗೂ ಇರುವ ಸಂಬಂಧವೇನು? ಸಂಸತ್ತಿನಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ಅದಾನಿಗೂ ಪ್ರಧಾನಿ ಮೋದಿಗೂ ಇರುವ ಸಂಬಂಧವೇನು? ಸಂಸತ್ತಿನಲ್ಲಿ ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಈ 8 ವರ್ಷಗಳಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಗೌತಮ್ ಅದಾನಿ ಬೆಳೆಯಲು ಹೇಗೆ ಸಾಧ್ಯ? ಅದಾನಿಗೂ ಪ್ರಧಾನಿ ಮೋದಿಗೂ ಇರುವ ಸಂಬಂಧವೇನು? ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ಭಾಷಣದಲ್ಲಿ ಮಾತನಾಡಿದ ಅವರು, “2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಸಮೂಹದ ಹಲವು ವ್ಯವಹಾರಗಳಿಗೆ ಅನುಕೂಲವಾಗಲೆಂದು ಭಾರತದ ಆರ್ಥಿಕ ನೀತಿಗಳನ್ನು ಬದಲಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ವಿಮಾನವೊಂದರಲ್ಲಿ ಅದಾನಿ ಮತ್ತು ಪ್ರಧಾನಿ ಮೋದಿ ಒಟ್ಟಿಗೆ ಕುಳಿತಿರುವ ಫೋಟೊವೊಂದನ್ನು ಪ್ರದರ್ಶಿಸಿದ ಅವರು, ಈ ನಾಲ್ಕೈದು ತಿಂಗಳಲ್ಲಿ ನನ್ನ ಯಾತ್ರೆಯ ಉದ್ದಕೂ ಕೇಳಿದ ಒಬ್ಬರೆ ಉದ್ಯಮಿಯ ಹೆಸರು ಅದು ಅದಾನಿಯಾಗಿದೆ. ಅವರೊಬ್ಬರಿಗಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

“ವಿಮಾನ ನಿಲ್ದಾಣಗಳ ನಿರ್ವಹಣೆಯ ಅನುಭವ ಇರುವ ಕಂಪನಿಗಳಿಗೆ ಮಾತ್ರ ವಿಮಾನ ನಿಲ್ದಾಣಗಳ ನಿರ್ವಹಣೆಯ ಗುತ್ತಿಗೆ ನೀಡಬೇಕೆಂದು ಕಾನೂನು ಹೇಳುತ್ತದೆ. ಅದನ್ನು ಬದಲಿಗೆ ಯಾವುದೇ ಜ್ಞಾನವಿಲ್ಲದ ಅದಾನಿಗೆ ಕೈಗೆ ದೇಶದ 6 ವಿಮಾಣ ನಿಲ್ದಾಣಗಳನ್ನು ನೀಡಲಾಗಿದೆ. ಅಷ್ಟು ಮಾತ್ರವಲ್ಲದೆ ಅದಾನಿ ಅನುಕೂಲವಾಗಲೆಂದು ವಿದೇಶಾಂಗ ನೀತಿಗಳನ್ನೆ ಮಾರ್ಪಡಿಸಲಾಗಿದೆ” ಎಂದು ಆರೋಪಿಸಿದರು.

ಮೋದಿಯವರು ಗುಜರಾತಿನ ಸಿಎಂ ಆಗಿದ್ದ ಸಂದರ್ಭದಲ್ಲಿ ಅದಾನಿ ಅವರಿಗೆ ಸಹಾಯ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಮೋದಿ ಪ್ರಧಾನಿಯಾದ ನಂತರ ಅದಾನಿಯವರ ಅದೃ‍ಷ್ಟವನ್ನೆ ಬದಲಿಸಿದ್ದಾರೆ. ಕಾನೂನುಬಾಹಿರವಾಗ ಅವರ ವ್ಯವಹಾರ ಬೆಳೆಯಲು ಸಹಕರಿಸಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ಆಸ್ಟ್ರೇಲಿಯಕ್ಕೆ ಹೋಗಿ ಮ್ಯಾಜಿಕ್ ಮಾಡಿದರು. ಆಗ ಎಸ್‌ಬಿಐ ಅದಾನಿಗೆ 1 ಬಿಲಿಯನ್ ಡಾಲರ್ ಸಾಲ ನೀಡಿದೆ. ನಂತರ ಮೋದಿ ಬಾಂಗ್ಲಾದೇಶಕ್ಕೆ ಹೋಗುತ್ತಾರೆ ಮತ್ತು ಬಾಂಗ್ಲಾದೇಶ ವಿದ್ಯುತ್ ಅಭಿವೃದ್ಧಿ ಮಂಡಳಿಯು ಅದಾನಿಯೊಂದಿಗೆ 25 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕುತ್ತದೆ ಎಂದರೆ ಏನರ್ಥ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...