Homeಕರ್ನಾಟಕಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

ಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

- Advertisement -
- Advertisement -

“ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೂ (ಆರ್‌ಡಿಪಿಆರ್‌) ವೇದಗಣಿತದ ಕಲಿಕೆಗೂ ಸಂಬಂಧವೇನು?” ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

ರಾಜ್ಯದ ಹಲವಾರು ಶಾಲೆಗಳಲ್ಲಿನ 5ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯಿತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯಿತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP, TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಡಿಪಿಆರ್‌ ಏಕೆ ವೇದಗಣಿತವನ್ನು ಕಲಿಸಲು ಹೊರಟಿದೆ? ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಟ್ಟಡಗಳು, ಅಂಗನವಾಡಿಗಳೆಲ್ಲ ಚೆನ್ನಾಗಿ ಅಭಿವೃದ್ಧಿಯಾಗಿವೆಯೇ? ಇವುಗಳನ್ನು ಆರ್‌ಡಿಪಿಆರ್‌‌ ದುರಸ್ತಿ ಮಾಡಬೇಕಾಲ್ಲವೇ? ಅಂಗನವಾಡಿ, ಶಾಲೆಗಳು ಸೋರುತ್ತಿವೆ ಎಂಬ ವಿಷಯ ಸದನದಲ್ಲಿ ಚರ್ಚೆಯಾಗುತ್ತಲೇ ಇದೆ. ಇದರ ಬಗ್ಗೆ ಆರ್‌ಡಿಪಿಆರ್‌ ಗಮನ ಹರಿಸುವುದನ್ನು ಬಿಟ್ಟು ವೇದಗಣಿತದ ಬಗ್ಗೆ ಆಸಕ್ತಿ ತೋರಿಸುತ್ತಿರುವುದು ಏತಕ್ಕೆ?” ಎಂದು ಕೇಳಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಆರ್‌ಡಿಪಿಆರ್‌ ಹಣವನ್ನು ಯಾವ ಕಾನೂನಿನ ಅಡಿಯಲ್ಲಿ ವೇದಗಣಿತ ಕಲಿಸಲು ಬಳಸಲು ಮುಂದಾಗಿದ್ದಾರೆ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಏನನ್ನು ಹೇಳುತ್ತದೆ? ಆರ್‌ಡಿಪಿಆರ್‌ನವರು ಶಿಕ್ಷಣವನ್ನು ನೀಡಬಹುದಾ? ಹಾಗಾದರೆ ನಾಳೆ ಶಿಕ್ಷಣ ಇಲಾಖೆಯವರು ರಸ್ತೆ ನಿರ್ಮಾಣ ಕೆಲಸ ಮಾಡುತ್ತಾರೆಯೇ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ 29,000 ಕೋಟಿ ರೂ. ಮೀಸಲಾಗಿದೆ. ಇಷ್ಟು ದೊಡ್ಡ ಬಜೆಟ್‌ನಲ್ಲಿ ದಲಿತ ಮಕ್ಕಳ ಭವಿಷ್ಯವನ್ನು ಬದಲಿಸುವುದನ್ನು ಬಿಟ್ಟು ಇಂಥವನ್ನೆಲ್ಲ ಮಾಡುವುದರಿಂದ ಏನು ಪ್ರಯೋಜನ? ಒಂದು ವೇಳೆ ಶಿಕ್ಷಣ ಇಲಾಖೆಯೇ ವೇದಗಣಿತ ಕಲಿಸುತ್ತೇನೆಂದರೂ ಇದರ ಹಿಂದಿನ ಉದ್ದೇಶವೇನು?” ಎಂದು ಪ್ರಶ್ನಿಸಿದರು.

“ವೈಜ್ಞಾನಿಕ ಮನೋಭಾವನೆ ಇಲ್ಲದೆ ಐದು ಟ್ರಿಲಿಯನ್‌ ಆರ್ಥಿಕತೆ ಸೃಷ್ಟಿಸಲು ಸಾಧ್ಯವೇ? ಶ್ರೇಷ್ಠ ಭಾರತ ಕಟ್ಟಲು ಸಾಧ್ಯವೇ? ಪುರಾಣ ಗ್ರಂಥಗಳನ್ನು ಅಧ್ಯಯನ ಮಾಡಿ. ಆದರೆ ಪುರಾಣಗಳನ್ನೇ ಇತಿಹಾಸ ಎನ್ನುವುದು ಸರಿಯೇ? ರಾಮಾಯಣದಲ್ಲಿ ಹನುಮಾನ್‌ ಸಂಜೀವಿನಿ ಬೆಟ್ಟವನ್ನು ಹೊತ್ತು ತಂದ ಎಂದು ಹೇಳಲಾಗುತ್ತದೆ. ವೈಜ್ಞಾನಿಕವಾಗಿ ಇದು ಸಾಧ್ಯವಿಲ್ಲ. ಆದರೆ ವಿಜ್ಞಾನಕ್ಕೂ ಪುರಾಣಕ್ಕೂ ಹೋಲಿಕೆ ಮಾಡುವುದು ಸರಿಯೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

“ವೈಜ್ಞಾನಿಕ ಮನೋಭಾವನೆಯನ್ನು ಇಟ್ಟುಕೊಂಡು ವೇದಗಣಿತವನ್ನು ಕಲಿಸುವುದಾದರೆ ಪಠ್ಯಕ್ರಮದಲ್ಲೇ ಅಳವಡಿಸಬಹುದಿತ್ತಲ್ಲ? ಹೀಗಾಗಲೇ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಹಿಂದುಳಿದ ವರ್ಗ ಹಾಗೂ ಸಮುದಾಯದ ವಿದ್ಯಾರ್ಥಿಗಳು ವಿಜ್ಞಾನ, ಗಣಿತದಂತಹ ವಿಷಯಗಳಲ್ಲಿ ವೀಕ್‌ ಇರುತ್ತಾರೆ. ಶಿಕ್ಷಣ ಇಲಾಖೆಯು ನಿಗದಿಪಡಿಸಿದ ಪಠ್ಯಕ್ರಮವನ್ನು ಶಾಲೆಗಳಲ್ಲಿ ಬೋಧಿಸಲಾಗುತ್ತಿದೆ. ಹೀಗಿರುವಾಗ ಪರ್ಯಾಯವಾಗಿ ಬೇರೊಂದು ಗಣಿತವನ್ನು ಕಲಿಸುವುದರಿಂದ ಏನು ಪ್ರಯೋಜನ?” ಎಂದು ಟೀಕಿಸಿದರು.

“ಬಡ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿವೇತನವನ್ನೇ ಸರ್ಕಾರ ಸರಿಯಾಗಿ ನೀಡುತ್ತಿಲ್ಲ. ಶಾಲಾ ಮಕ್ಕಳಿಗೆ ಸರಿಯಾಗಿ ಶೂ ಸಾಕ್ಸ್‌ ಕೊಡಲೂ ಆಗದವರು ವೇದಗಣಿತ ಹೇಳಿಕೊಡುತ್ತಾರಂತೆ” ಎಂದು ವ್ಯಂಗ್ಯವಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಮಕ್ಕಳಿಗೆ ಬೇಕಾಗಿರುವುದು ಗಣಿತವೇ ಹೊರತು ವೇದಗಣಿತ ಅಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಮೀಸಲಿಟ್ಟ ಹಣವನ್ನು ವೇದಗಣಿತ ಕಲಿಸಲು ಬಳಸುವುದು ಅಕ್ಷಮ್ಯ.

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...