Homeಮುಖಪುಟ'ಎಂತಹ ಹುಚ್ಚುತನ..'; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

‘ಎಂತಹ ಹುಚ್ಚುತನ..’; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

- Advertisement -
- Advertisement -

ಭಾರತದಲ್ಲಿ ನಡೆಯುತ್ತಿರುವ “ವೋಟ್ ಚೋರಿ” (ಮತ ಕಳ್ಳತನ) ವಿವಾದದಲ್ಲಿ ತಮ್ಮ ಹಳೆಯ ಫೋಟೋವನ್ನು ಬಳಸಲಾಗಿದೆ ಎಂದು ಬ್ರೆಜಿಲಿಯನ್ ಮಾಡೆಲ್ ಲಾರಿಸ್ಸಾ ರೋಚಾ ಸಿಲ್ವಾ ಆಘಾತ ವ್ಯಕ್ತಪಡಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಬ್ರೆಜಿಲಿಯನ್ ಮಾಡೆಲ್ ಸಿಲ್ವಾ, ಭಾರತೀಯ ರಾಜಕೀಯದಲ್ಲಿ ತಮ್ಮ ಹದಿಹರೆಯದ ಫೋಟೋವನ್ನು ಬಳಸಲಾಗುತ್ತಿರುವುದನ್ನು ನೋಡಿ ತಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ಹೇಳಿದರು. “ಗೈಸ್, ಈ ಜನರು ಗಾಸಿಪ್ ಮಾಡುತ್ತಿದ್ದಾರೆ ಎಂದು ನನಗೆ ನಂಬಲು ಸಾಧ್ಯವಿಲ್ಲ. ಅವರು ನನ್ನ ಹಳೆಯ ಫೋಟೋವನ್ನು ಬಳಸುತ್ತಿದ್ದಾರೆ… ಆ ಚಿತ್ರದಲ್ಲಿ ನನಗೆ 18 ಅಥವಾ 20 ವರ್ಷ ವಯಸ್ಸಾಗಿತ್ತು. ಜನರನ್ನು ವಂಚಿಸಲು ನನ್ನನ್ನು ಭಾರತೀಯ ಎಂದು ಚಿತ್ರಿಸುತ್ತಿದ್ದಾರೆ. ಎಂತಹ ಹುಚ್ಚುತನ! ಇದು ಎಂತಹ ಹುಚ್ಚುತನ, ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಯ ಪ್ರಕಾರ, ಹರಿಯಾಣದಲ್ಲಿ ಮತದಾರರ ಗುರುತಿನ ಚೀಟಿಗಳಲ್ಲಿ ಸೀಮಾ ಮತ್ತು ಸರಸ್ವತಿ ಮುಂತಾದ ವಿವಿಧ ಹೆಸರುಗಳಲ್ಲಿ ಬಳಸಲಾದ ಲಾರಿಸ್ಸಾ ರೋಚಾ ಸಿಲ್ವಾ ಚಿತ್ರವನ್ನು 22 ಬಾರಿ ತೋರಿಸಲಾಗಿದೆ. “ಕಾಂಗ್ರೆಸ್ ಚುನಾವಣೆಯಲ್ಲಿ 22,000 ಮತಗಳಿಂದ ಸೋತಿದೆ. ಆದರೆ ಈ ಮಹಿಳೆ ಯಾರು? ಅವರು ಹರಿಯಾಣದಲ್ಲಿ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ. ಅವರಿಗೆ ಬಹು ಹೆಸರುಗಳಿವೆ” ಎಂದು ರಾಹುಲ್ ಗಾಂಧಿ ತಮ್ಮ ಸುದ್ದಿಗೋಷ್ಠಿಯಲ್ಲಿ ಸಿಲ್ವಾ ಅವರ ಚಿತ್ರವನ್ನು ಪರದೆಯ ಮೇಲೆ “ಯೇ ಕೌನ್ ಹೈ?” ಎಂಬ ಶೀರ್ಷಿಕೆಯೊಂದಿಗೆ ಪ್ರದರ್ಶಿಸಿದರು.

ವೈರಲ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಿಲ್ವಾ, ಭಾರತೀಯ ರಾಜಕೀಯ ವಿಷಯದಲ್ಲಿ ನನ್ನ ಫೋಟೋ ಏಕೆ ಪ್ರಸಾರವಾಗುತ್ತಿದೆ ಎಂದು ತನಗೆ ತಿಳಿದಿಲ್ಲ ಎಂದು ಹೇಳಿದರು. “ನೀವು ಮತದಾನಕ್ಕೆ ಸಂಬಂಧಿಸಿದ ಯಾವುದೋ ವಿಷಯಕ್ಕೆ ನನ್ನ ಚಿತ್ರವನ್ನು ಬಳಸುತ್ತಿದ್ದೀರಿ… ಅದು ಚುನಾವಣೆಯೋ ಇಲ್ಲವೋ ನನಗೆ ತಿಳಿದಿಲ್ಲ. ಭಾರತದಲ್ಲಿ, ಜನರು ಪರಸ್ಪರ ಜಗಳವಾಡಲು ನನ್ನನ್ನು ಭಾರತೀಯನೆಂದು ತೋರಿಸುತ್ತಿದ್ದಾರೆ. ಇದು ಎಷ್ಟು ಹುಚ್ಚುತನ ನೋಡಿ! ನಾವು ಎಂತಹ ಅವ್ಯವಸ್ಥೆಯಲ್ಲಿ ವಾಸಿಸುತ್ತಿದ್ದೇನೆ” ಎಂದು ಅವರು ಹೇಳಿದರು.

ಈ ಘಟನೆಯ ಬಗ್ಗೆ ಪತ್ರಕರ್ತರು ತಮ್ಮನ್ನು ಸಂಪರ್ಕಿಸಲು ಪ್ರಾರಂಭಿಸಿದ್ದಾರೆ ಎಂದು ಮಾಡೆಲ್ ಹೇಳಿದರು. “ಒಬ್ಬ ವರದಿಗಾರ ನನ್ನ ಕೆಲಸದ ಸ್ಥಳಕ್ಕೆ ಕರೆ ಮಾಡಿ ಸಂದರ್ಶನ ಕೇಳಿದ್ದ. ನಾನು ಅವರಿಗೆ ನನ್ನ ನಂಬರ್ ನೀಡಬೇಡಿ ಎಂದು ಹೇಳಿದೆ. ಆದರೆ ಅವರು ನನ್ನನ್ನು ಇನ್‌ಸ್ಟಾಗ್ರಾಮ್‌ ಹುಡುಕಿದ್ದಾರೆ. ನಂತರ ಬೇರೆ ನಗರದ ಸ್ನೇಹಿತರೊಬ್ಬರು ನನಗೆ ಚಿತ್ರವನ್ನು ಕಳುಹಿಸಿ, ‘ನೋಡಿ, ನೀವು ಇದನ್ನು ನಂಬುವುದಿಲ್ಲ!’ ಎಂದು ಹೇಳಿದರು” ಎಂದು ಸಿಲ್ವಾ ಬರೆದಿದ್ದಾರೆ.

ಪಶ್ಚಿಮ ಬಂಗಾಳ ‘ಎಸ್‌ಐಆರ್‌’: ಎರಡು ದಿನಗಳಲ್ಲಿ 1.10 ಕೋಟಿ ಜನರಿಗೆ ಗಣತಿ ನಮೂನೆ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...