Homeಕರ್ನಾಟಕಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ರಾಜ್ಯದ 25 ಸಂಸದರು ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ.

- Advertisement -
- Advertisement -

ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಜಿಎಸ್‌ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿಗಳು ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಅವರು ಟ್ವೀಟ್‌ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ ಜಿಎಸ್‌ಟಿಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರದ ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ನಾಲ್ಕು ತಿಂಗಳ ಒಟ್ಟು ಜಿಎಸ್‌ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ ಎಂದಿರುವ ಅವರು, ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ. ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್‌ಬಿಐ ನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು‌ ಕಡಿತಗೊಳ್ಳುತ್ತಲೇ ಬಂದಿದೆ. 14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7 ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ. ಈಗ ಇನ್ನೊಂದು ಅನ್ಯಾಯ ಎಂದು ಅವರು ಹೇಳಿದ್ದಾರೆ.

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 71 ರಷ್ಟಾಗಿದೆ ಎಂದು ಹೇಳಿದ್ದಾರೆ. ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಬಿಜೆಪಿ ಹೇಳಿತ್ತು. ಇದನ್ನು ನಂಬಿದ ಜನತೆ 25 ಸಂಸದರನ್ನು ಆರಿಸಿ ಕಳಿಸಿದರು. ಇವರೆಲ್ಲ ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ ಎಂದು ರಾಜ್ಯದ ಬಿಜೆಪಿ ಸಂಸದರನ್ನು ವ್ಯಂಗ್ಯವಾಡಿದ್ದಾರೆ.


ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ...

0
"ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ...