Homeಮುಖಪುಟ‘3 ವರ್ಷಗಳಿಂದ ಏನು ಮಾಡುತ್ತಿದ್ದರು?’: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ

‘3 ವರ್ಷಗಳಿಂದ ಏನು ಮಾಡುತ್ತಿದ್ದರು?’: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ

- Advertisement -
- Advertisement -

ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತೆರವುಗೊಳಿಸುವಲ್ಲಿ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ವಿಳಂಬ ಮಾಡುತ್ತಿರುವ ಕುರಿತು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಸೋಮವಾರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪುನರಾರಂಭಿಸುತ್ತಿದ್ದಂತೆ ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ಶಾಸಕಾಂಗ ಸಭೆಯ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿಪಡಿಸಿದ್ದಾರೆ” ಎಂದು ಆರೋಪಿಸಿ ರಾಜ್ಯಪಾಲ ರವಿ ಅವರ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ರವಿ ಅವರು ಹಲವು ಬಿಲ್‌ಗಳನ್ನು ಬಾಕಿ ಇರಿಸಿರುವುದು ಮಾತ್ರವಲ್ಲದೆ ಹಲವು ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ರಾಜ್ಯ ಸರ್ಕಾರ ತನ್ನ ಅರ್ಜಿಯಲ್ಲಿ ಆರೋಪಿಸಿದೆ.

ತನ್ನ ಒಪ್ಪಿಗೆಗಾಗಿ ಮಂಡಿಸಿದ ಮಸೂದೆಗಳ ಬಗ್ಗೆ ರಾಜ್ಯಪಾಲರ ನಿಷ್ಕ್ರಿಯತೆ ಗಂಭೀರ ಕಾಳಜಿಯ ವಿಷಯವಾಗಿದೆ ಎಂದು ನವೆಂಬರ್ 10 ರಂದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಗಮನಿಸಿತು. ತಮಿಳುನಾಡು ವಿಧಾನಸಭೆಯು ರವಿ ಅವರು ಹಿಂದಿರುಗಿಸಿದ 10 ಮಸೂದೆಗಳ ಕುರಿತು ಶನಿವಾರ ಸುಪ್ರೀಂಗೆ ತಿಳಿಸಿದೆ.

”ಈ ಮಸೂದೆಗಳು 2020ರಿಂದ ಬಾಕಿ ಇವೆ. ಮೂರು ವರ್ಷ ಅವರೇನು ಮಾಡುತ್ತಿದ್ದರು?” ಎಂದು ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ರಾಜ್ಯಪಾಲ ಸಿ ಎನ್‌ ರವಿ ಅವರು ತಮ್ಮ ಬಳಿ ಬಾಕಿ ಇದ್ದ 10 ಮಸೂದೆಗಳನ್ನು ವಾಪಸ್‌ ಕಳುಹಿಸಿದ ವಿದ್ಯಮಾನದ ಕುರಿತಂತೆ ಸುಪ್ರೀಂ ಕೋರ್ಟ್‌ ಈ ಪ್ರಶ್ನೆಯನ್ನೆತ್ತಿದೆ. ಈ 10 ಮಸೂದೆಗಳಲ್ಲಿ ಎರಡು ಮಸೂದೆಗಳನ್ನು ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಎಐಎಡಿಎಂಕೆ ಸರ್ಕಾರದ ಅವಧಿಯ ವೇಳೆ ವಿಧಾನಸಭೆ ಅಂಗೀಕರಿಸಿತ್ತು.

ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ ಪರ್ಡಿವಾಲ ಹಾಗೂ ಮಜೋಜ್‌ ಮಿಶ್ರಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಕೇರಳ ಸರ್ಕಾರದ ಪರ ಹಿರಿಯ ವಕೀಲ ಕೆ.ಕೆ ವೇಣುಗೋ‍‍ಪಾಲ್ ಅವರು ಹಾಜರಾದರು.

ಇದೊಂದು ವ್ಯಾಧಿಯಾಗಿಬಿಟ್ಟಿದೆ. ಸಂವಿಧಾನದ 168 ನೇ ವಿಧಿಯ ಅಡಿಯಲ್ಲಿ ಶಾಸಕಾಂಗದ ಭಾಗವಾಗಿದ್ದಾರೆಂದು ರಾಜ್ಯಪಾಲರು ತಿಳಿದುಕೊಂಡಿರುವುದಿಲ್ಲ ಎಂದು ವೇಣುಗೋಪಾಲ್ ಹೇಳಿದರು. ಸಂವಿಧಾನದ 162ನೇ ವಿಧಿಯನ್ವಯ ರಾಜ್ಯಪಾಲರು ಶಾಸಕಾಂಗ ಭಾಗ. ಮೂರು ಸುಗ್ರೀವಾಜ್ಞೆಗಳಿಗೆ ಒಪ್ಪಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಬಳಿಕ ಅದರ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ. ಸುಮಾರು 8 ಮಸೂದೆಗಳು ಕಳೆದ 7–21 ತಿಂಗಳಿನಿಂದ ರಾಜ್ಯಪಾಲರ ಬಳಿಯೇ ಇದೆ ಎಂದು ಕೆ.ಕೆ ವೇಣುಗೋಪಾಲ್ ಕೋರ್ಟ್‌ನ ಗಮನಕ್ಕೆ ತಂದರು.

ಕೇಂದ್ರ ಹಾಗೂ ರಾಜ್ಯಪಾಲರ ಕಚೇರಿಯ ಜತೆಗೆ, ವಿಚಾರಣೆ ಸಂಬಂಧ ನೀವು ಅಥವಾ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ಅವರು ಸಹಾಯ ಮಾಡಬೇಕು ಎಂದು ಅಟಾರ್ನಿ ಜನರಲ್ ವಿ. ವೆಂಕಟರಮಣಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿತು. ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು. ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವ ಮೂಲಕ ರಾಜ್ಯಪಾಲರು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿತ್ತು.

ತೆಲಂಗಾಣ, ಪಂಜಾಬ್ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಶಾಸಕಾಂಗ ಮತ್ತು ಕಾರ್ಯಾಂಗದ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ.

ಏಳು ತಿಂಗಳಿಂದ ಎರಡು ವರ್ಷಗಳ ಅವಧಿಗೆ ತಮ್ಮ ಬಳಿ ಬಾಕಿ ಇರುವ ಎಂಟು ಮಸೂದೆಗಳನ್ನು ಪರಿಗಣಿಸಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ವಿಳಂಬ ಮಾಡಿದ ವಿರುದ್ಧ ಕೇರಳ ಸರ್ಕಾರದ ಮನವಿಯ ಕುರಿತು ಪೀಠವು ಸೋಮವಾರ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯವು ಡಿಸೆಂಬರ್ 1 ರಂದು ತಮಿಳುನಾಡು ಸರ್ಕಾರದ ಮನವಿಯನ್ನು ಮತ್ತು ಶುಕ್ರವಾರ ಕೇರಳ ಸರ್ಕಾರದ ಮನವಿಯನ್ನು ಆಲಿಸಲಿದೆ.

ಇದನ್ನೂ ಓದಿ: ಮಸೂದೆಗಳಿಗೆ ಅಂಕಿತ ಹಾಕಲು ವಿಳಂಬ: ಕೇರಳ ಗವರ್ನರ್‌, ಕೇಂದ್ರಕ್ಕೆ ಸುಪ್ರೀಂ ನೊಟೀಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್-ಯುಜಿ ಪರಿಷ್ಕೃತ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ, ಹಳೆಯ ಲಿಂಕ್ ಅನ್ನು ಹಂಚಿಕೊಳ್ಳಲಾಗುತ್ತಿದೆ: ಕೇಂದ್ರ

0
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯು ಇಂದು ಪರಿಷ್ಕೃತ ನೀಟ್ ಯುಜಿ 2024 ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ ಎಂಬ ಊಹಾಪೋಹದ ನಂತರ, ಆರಂಭದಲ್ಲಿ ನೀಡಲಾದ ಪರಿಹಾರದ ಅಂಕಗಳನ್ನು ಹಿಂತೆಗೆದುಕೊಳ್ಳುವ ಸುಪ್ರೀಂ ಕೋರ್ಟ್ ತೀರ್ಪಿನ ನಂತರ,...