Homeಮುಖಪುಟಮರ್ಕಝ್‌ನಲ್ಲಿ ನಡೆದದ್ದೇನು?: ತಬ್ಲೀಗ್ ಜಮಾಅತ್ ಸ್ಪಷ್ಟನೆ

ಮರ್ಕಝ್‌ನಲ್ಲಿ ನಡೆದದ್ದೇನು?: ತಬ್ಲೀಗ್ ಜಮಾಅತ್ ಸ್ಪಷ್ಟನೆ

ಅಸಲಿಗೆ ಈ ಧಾರ್ಮಿಕ ಕಾರ್ಯಕ್ರಮವನ್ನು ಮಾರ್ಚ್‌ 13ರಂದೇ ಆಯೋಜಿಸಲಾಗಿದೆ. ಹಾಗೂ ಆ ಹೊತ್ತಿಗಿನ್ನೂ ಕೊರೋನಾ ವಿರುದ್ಧ ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಯಾವುದೇ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರಲಿಲ್ಲ.

- Advertisement -
- Advertisement -

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಕಳೆದ 15 ದಿನಗಳಿಗೆ ಮುಂಚೆ ನಡೆದ ಸಭೆಯ ವಿಚಾರದಲ್ಲಿ ಎದ್ದಿರುವ ವಿವಾದಕ್ಕೆ ತಿರುವು ಸಿಕ್ಕಿದ್ದು, ಸದರಿ ಸಭೆಯ ಸಂಘಟಕರು ಸರ್ಕಾರೀ ಅಧಿಕಾರಿಗಳಿಗೆ ಅಲ್ಲಿದ್ದ ಜನರನ್ನು ಹೊರಕಳಿಸಲು ಮೊದಲೇ ಮನವಿ ಮಾಡಿದ್ದುದರ ಕುರಿತು ವಿವರಗಳನ್ನು ಒದಗಿಸಿದ್ದಾರೆ. ಸದರಿ ಧಾರ್ಮಿಕ ಸಭೆಯೊಂದರಲ್ಲಿ ಪಾಲ್ಗೊಂಡಿದ್ದರೆನ್ನಲಾದ 10 ಜನರು ಇದೀಗ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ 6 ಜನ ತೆಲಂಗಾಣದವರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸುಮಾರು 850ಕ್ಕೂ ಹೆಚ್ಚು ಜನರನ್ನು ಇದೀಗ ಆಸ್ಪತ್ರೆಗಳಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಈ ಪೈಕಿ 24 ಜನರಲ್ಲಿ ಸೋಂಕು ಪತ್ತೆಯಾಗಿದೆ. ಹಾಗಾಗಿ ಈ ಸಭೆಯನ್ನು ಆಯೋಜಿಸಿದ್ದವರು ಲಾಕ್‌ಡೌನ್ ಘೋಷಣೆಯಾದ ನಂತರವೂ ಮುಂದುವರೆಸಿದ್ದರು ಎಂದು ಬೆಳಗ್ಗಿನಿಂದ ಸುದ್ದಿಯಾಗಿತ್ತು. ಆದರೆ ದೀರ್ಘ ಉತ್ತರ ನೀಡಿರುವ ಆಯೋಜಕರು, ಲಾಕ್‌ಡೌನ್‌ ಆದ ತಕ್ಷಣವೇ ಸಭೆಯನ್ನು ನಿಲ್ಲಿಸಿ 1500 ಜನರನ್ನು ಅಲ್ಲಿಂದ ಕಳಿಸಲಾಯಿತೆಂದು ಹೇಳಿದ್ದಾರೆ. ಉಳಿದವರನ್ನು ಕಳಿಸಲು ಅಧಿಕಾರಿಗಳ ನೆರವು ಕೇಳಿದರೂ ಸಿಕ್ಕಿಲ್ಲ ಎಂಬುದಾಗಿ ಹೇಳಿದ್ದಾರೆ.

ಅದರ ವಿವರಗಳಿಗೆ ಹೋಗುವ ಮುಂಚೆ ಕೆಲವು ಅಂಶಗಳನ್ನು ನೋಡೋಣ.

ಮಾರ್ಚ್‌ 13 ರಿಂದ 15ರ ವರೆಗೆ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂಡೋನೇಷ್ಯಾ ಹಾಗೂ ಮಲೇಷ್ಯಾ ಸೇರಿದಂತೆ ಹಲವಾರು ದೇಶಗಳಿಂದ ಜನ ಆಗಮಿಸಿದ್ದಾರೆ. ಆದರೆ, ಇದೀಗ ಈ ಸಭೆಯಲ್ಲಿ ಪಾಲ್ಗೊಂಡಿದ್ದ 10 ಜನ ಮೃತಪಟ್ಟ ಹಿನ್ನೆಲೆಯಲ್ಲಿ ಈ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದ ಮೌಲಾನಾ ವಿರುದ್ಧ ದೆಹಲಿ ಸರ್ಕಾರ ಎಫ್‌ಐಆರ್ ದಾಖಲಿಸಿದೆ.

ಅಲ್ಲದೆ, ದೇಶದಾದ್ಯಂತ ಇದೀಗ ಮಾರಣಾಂತಿಕ ಕೊರೋನಾ ವೈರಸ್‌ ಅನ್ನು ಹರಡಿದವರು ಮುಸ್ಲಿಮರು ಎಂಬ ಹೊಸ ಆರೋಪವೊಂದು ಮುನ್ನೆಲೆಗೆ ಬರುತ್ತಿದೆ. ಈ ಮೂಲಕ ಮತ್ತೊಮ್ಮೆ ಮುಸ್ಲಿಂ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿರಿಸಿ ನೋಡುವ ಕೆಲಸಕ್ಕೆ ಆಡಳಿತರೂಢ ಸರ್ಕಾರ ಮತ್ತು ಮಾಧ್ಯಮಗಳು ಮುಂದಾಗಿವೆ. ಆದರೆ, ಈ ಘಟನೆಯ ಹಿಂದಿನ ನೈಜ ಸಂಗತಿಗಳ ಕಡೆಗೆ ಒಮ್ಮೆ ಗಮನ ನೀಡಿದರೆ ಬೇರೆಯದೇ ವಿಚಾರ ಬಯಲಾಗುತ್ತಿದೆ.

ಅಸಲಿಯತ್ತೇನು?:

ಅಸಲಿಗೆ ಈ ಧಾರ್ಮಿಕ ಕಾರ್ಯಕ್ರಮವನ್ನು ಮಾರ್ಚ್‌ 13ರಂದೇ ಆಯೋಜಿಸಲಾಗಿದೆ. ಹಾಗೂ ಆ ಹೊತ್ತಿಗಿನ್ನೂ ಕೊರೋನಾ ವಿರುದ್ಧ ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಯಾವುದೇ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರಲಿಲ್ಲ. ಬದಲಿಗೆ ಕೇಂದ್ರ ಸರ್ಕಾರವು ಕೊರೊನಾ ಇಲ್ಲೊಂದು ವೈದ್ಯಕೀಯ ಎಮರ್ಜೆನ್ಸಿ ಅಲ್ಲ ಎಂಬ ಹೇಳಿಕೆಯನ್ನು ನೀಡಿತ್ತು.

ಸ್ವತಃ ಪ್ರಧಾನಿ ನರೇಂದ್ರ ಮೋದಿ ದೇಶದ ಮೇಲೆ ಜನತಾ ಕರ್ಫ್ಯೂ ಹೇರುವ ಮೂಲಕ ಸಾಮಾಜಿಕ ಅಂತರದ ಬಗ್ಗೆ ಮಾತನಾಡಿದ್ದೇ ಮಾರ್ಚ್‌ 21 ರಂದು. ಇನ್ನು ದೇಶದಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ್ದು ಮಾರ್ಚ್‌ 25 ರಂದು. ಆದರೆ, ಮಾರ್ಚ್‌ 13ರಂದೇ ಈ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು ಆಯೋಜಕರ ಮೇಲೆ ಪ್ರಕರಣ ದಾಖಲಿಸಿರುವುದು ಎಷ್ಟು ಸರಿ ಎಂಬುದು ಮೊದಲ ಪ್ರಶ್ನೆ.

ದೇಶದಾದ್ಯಂತ ಲಾಕ್‌ಡೌನ್‌ ಘೋಷಿಸಿದ ನಂತರ ಹಾಗೂ ಸಾಮಾಜಿಕ ಅಂತರದ ಕುರಿತು ಅರಿವು ಮೂಡಿಸಿದ ನಂತರ ಕಾರ್ಯಕ್ರಮ ಆಯೋಜಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಎಲ್ಲರನ್ನೂ ಅವರವರ ರಾಜ್ಯಕ್ಕೆ ಸುರಕ್ಷಿತವಾಗಿ ತಲುಪಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದರೆ ಆಗ ಇವರ ಮನವಿಗೆ ಯಾವ ಸರ್ಕಾರವೂ ಸ್ಪಂದಿಸಿರಲಿಲ್ಲವೆಂದು ಸಂಘಟನೆಯು ಹೇಳುತ್ತಿದೆ.

ಆದರೆ ಈ ಸಭೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ 6 ಜನ ತೆಲಂಗಾಣ ಆಸ್ಪತ್ರೆಯಲ್ಲಿ ಸಾವನ್ನಪ್ಪುತ್ತಿದ್ದಂತೆ ದೇಶದ ಆಡಳಿತ ವರ್ಗ ಈ ಕಾರ್ಯಕ್ರಮ ಆಯೋಜಕರ ವಿರುದ್ಧ ತಿರುಗಿಬಿದ್ದಿದೆ. .

ಈ ಕುರಿತು ಸ್ವತಃ ಧಾರ್ಮಿಕ ಕಾರ್ಯಕ್ರಮ ಆಯೋಜಕರೂ ಸಹ ಸ್ಪಷ್ಟನೆ ನೀಡಿದ್ದಾರೆ. ಆ ಸ್ಪಷ್ಟನೆಯನ್ನು ಖ್ಯಾತ ವಕೀಲ ಪ್ರಶಾಂತ್ ಭೂಷಣ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದರ ಕನ್ನಡ ಅನುವಾದ ಇಲ್ಲಿದೆ.

“ದಿಲ್ಲಿಯ ತನ್ನ ಕೇಂದ್ರ ಕಚೇರಿಯಲ್ಲಿ ಸೇರಿರುವ ಜನಸಂದಣಿಯಿಂದ ಕೊರೋನ ಹರಡುತ್ತಿದೆ ಎಂಬ ವದಂತಿಗಳು ಹಾಗೂ ಕೆಲವು ಟಿವಿ ಚಾನಲ್ ಗಳ ವರದಿಗಳ ಬಗ್ಗೆ ತಬ್ಲೀಗ್ ಜಮಾಅತ್ ನ ಕೇಂದ್ರ ಕಚೇರಿ ಮರ್ಕಝ್ ನಿಝಾಮುದ್ದೀನ್ ಸ್ಪಷ್ಟನೆ ನೀಡಿದೆ.”

ಹಠಾತ್ತನೆ ಘೋಷಿಸಲಾದ ಜನತಾ ಕರ್ಫ್ಯೂ ಮತ್ತು ಅದರ ಬೆನ್ನಿಗೆ ಪ್ರಕಟವಾದ ದಿಲ್ಲಿ ಸಿಎಂ ಅವರ ಲಾಕ್ ಡೌನ್ ಹಾಗೂ ಬಳಿಕ ಪ್ರಧಾನಿಯವರು ಘೋಷಿಸಿದ ಲಾಕ್ ಡೌನ್ ನಿಂದ ಮೊದಲೇ ಮರ್ಕಝ್ ನಲ್ಲಿದ್ದ ಜನರು ಅಲ್ಲಿಂದ ತಮ್ಮ ಸ್ಥಳಗಳಿಗೆ ವಾಪಸ್ ಹೋಗಲು ಸಾಧ್ಯವಾಗದೆ ಅನಿವಾರ್ಯವಾಗಿ ಉಳಿಯಬೇಕಾಯಿತು . ಆದರೂ ಸುಮಾರು 1500 ಜನರು ಸಾಧ್ಯವಿದ್ದ ವಾಹನಗಳಲ್ಲಿ ತಕ್ಷಣ ಕೇಂದ್ರ ಕಚೇರಿಯನ್ನು ಬಿಟ್ಟು ತೆರಳಿದ್ದಾರೆ. ಅನಿವಾರ್ಯವಾಗಿ ಹೋಗಲಾಗದೆ ಉಳಿದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿಕೊಂಡು ಇಲ್ಲಿ ಉಳಿದಿದ್ದಾರೆ. ಅವರನ್ನೂ ಕಳಿಸಲು ಕೇಂದ್ರ ಕಚೇರಿಯೇ ವಾಹನ ವ್ಯವಸ್ಥೆ ಮಾಡಿ ಅದಕ್ಕೆ ಪಾಸ್ ನೀಡುವಂತೆ ವಿನಂತಿಸಿದರೂ ಈವರೆಗೆ ಅದು ಈವರೆಗೆ ಸಿಕ್ಕಿಲ್ಲ. ಸಿಕ್ಕಿದ್ದರೆ ಉಳಿದವರೂ ಇಲ್ಲಿಂದ ವಾಪಸ್ ಹೋಗಬಹುದಿತ್ತು. ಇಲ್ಲಿ ಉಳಿದವರು ವಾಪಸ್ ಹೋಗಲು ನಗರದ  ಅಲ್ಲಲ್ಲಿ ಬಸ್ ಸ್ಟಾಂಡ್ ಇತ್ಯಾದಿಗಳಲ್ಲಿ ಗುಂಪು ಸೇರದಂತೆ ಖಾತರಿಪಡಿಸಲು ಅವರನ್ನು ಇಲ್ಲೇ ಎಲ್ಲ ವೈದ್ಯಕೀಯ ನಿರ್ದೇಶನಗಳನ್ನು ಪಾಲಿಸುತ್ತಾ ಉಳಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮರ್ಕಝ್ ನಿಝಾಮುದ್ದೀನ್ ಸುಮಾರು 100 ವರ್ಷಗಳಿಂದ  ತಬ್ಲೀಗ್ ಜಮಾಅತ್ ನ ಅಂತರ್ ರಾಷ್ಟ್ರೀಯ ಕೇಂದ್ರ ಕಚೇರಿಯಾಗಿದೆ. ಇಲ್ಲಿ ವಿಶ್ವದೆಲ್ಲೆಡೆಯಿಂದ ಸಂದರ್ಶಕರು, ಅತಿಥಿಗಳು ಮುಂತಾದವರು ಪೂರ್ವ ನಿಗದಿತ ಗರಿಷ್ಠ ಐದು ದಿನಗಳ ಕಾರ್ಯಕ್ರಮಕ್ಕಾಗಿ ಬರುತ್ತಾರೆ. ಈ ಕಾರ್ಯಕ್ರಮಗಳು ಒಂದು ವರ್ಷ ಮೊದಲೇ ನಿಗದಿಯಾಗಿರುತ್ತವೆ. ಪ್ರಧಾನ ಮಂತ್ರಿಯವರು ಮಾರ್ಚ್ 22ರಂದು ಜನತಾ ಕರ್ಫ್ಯೂ ಘೋಷಿಸಿದಾಗ ಮರ್ಕಝ್ ನಲ್ಲಿ ಚಾಲ್ತಿಯಲ್ಲಿದ್ದ ಕಾರ್ಯಕ್ರಮವನ್ನು ತಕ್ಷಣ ನಿಲ್ಲಿಸಲಾಗಿದೆ. ಆದರೆ ಮಾರ್ಚ್ 21ರಂದು ಹಠಾತ್ತನೆ ರೈಲ್ವೆ ಸೇವೆ ಸ್ಥಗಿತಗೊಂಡಾಗ ದೊಡ್ಡ ಸಂಖ್ಯೆಯ ಸಂದರ್ಶಕರು ಅನಿವಾರ್ಯವಾಗಿ ಇಲ್ಲೇ ಉಳಿಯಬೇಕಾಯಿತು. ಮರ್ಕಝ್‌ನಲ್ಲಿ ಪ್ರಧಾನಿ ಮನವಿಯಂತೆ ಜನತಾ ಕರ್ಫ್ಯೂವನ್ನು ಪಾಲಿಸಲಾಗಿದೆ. ಆದರೆ ಅದು ಮುಗಿಯುವ ಮೊದಲೇ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಾರ್ಚ್ 23ರ ಬೆಳಗ್ಗೆ 6ರಿಂದ ಮಾರ್ಚ್ 31ರವರೆಗೆ ದಿಲ್ಲಿ ಲಾಕ್ ಡೌನ್‌ಗೆ ಆದೇಶಿಸಿದರು. ಇದರಿಂದ ಮರ್ಕಝ್‌ನಲ್ಲಿದ್ದ ಸಂದರ್ಶಕರಿಗೆ ತಮ್ಮ ಊರುಗಳಿಗೆ ಮರಳುವುದು ಅಸಾಧ್ಯವಾಯಿತು. ಆದರೂ ಸುಮಾರು 1500 ಮಂದಿ ಇದ್ದ ವ್ಯವಸ್ಥೆಯಲ್ಲಿ ಅಲ್ಲಿಂದ ಹೊರಟು ಹೋಗಿದ್ದಾರೆ. ಮಾರ್ಚ್ 23ರಂದು ಪ್ರಧಾನಿಯಿಂದ ದೇಶವ್ಯಾಪಿ ಲಾಕ್ ಡೌನ್ ಘೋಷಣೆಯಾಯಿತು. ಯಾರು ಎಲ್ಲಿದ್ದಾರೆ ಅಲ್ಲೇ ಇರಬೇಕು ಎಂದು ಪ್ರಧಾನಿಯವರು ಸ್ಪಷ್ಟವಾಗಿ ಹೇಳಿದ್ದರು. ಹಾಗಾಗಿ ಅನಿವಾರ್ಯವಾಗಿ ಮರ್ಕಝ್‌ನಲ್ಲಿದ್ದವರನ್ನು ಪ್ರಯಾಣಕ್ಕೆ ಅನುಮತಿ ಸಿಗುವವರೆಗೆ ಸೂಕ್ತ ವೈದ್ಯಕೀಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿಕೊಂಡು ಅಲ್ಲೇ ಉಳಿಸಿಕೊಳ್ಳಬೇಕಾಯಿತು.

ಮಾರ್ಚ್ 24ರಂದು ಮರ್ಕಝ್ ಅನ್ನು ಬಂದ್ ಮಾಡುವಂತೆ ಹಠಾತ್ತನೆ ಹಜ್ರತ್ ನಿಝಾಮುದ್ದೀನ್ ಪೊಲೀಸ್ ಠಾಣೆಯಿಂದ ನೋಟಿಸ್ ಬಂತು. ಅದಕ್ಕೆ ಅದೇ ದಿನ ಪ್ರತಿಕ್ರಿಯೆ ನೀಡಿ ಈಗಾಗಲೇ 1500 ಮಂದಿ ಹೊರಟು ಹೋಗಿರುವ ಮಾಹಿತಿ ನೀಡಿ, ಉಳಿದವರು ಹೋಗಲು 17 ವಾಹನಗಳ ಪಟ್ಟಿ ನೀಡಿ ಪಾಸ್ ನೀಡುವಂತೆ ಕೇಳಿಕೊಂಡೆವು. ಆದರೆ ಈವರೆಗೆ ಪಾಸ್‌ಗಳು ಸಿಕ್ಕಿಲ್ಲ. ಮಾರ್ಚ್ 25ರಂದು ಮರ್ಕಝ್‌ಗೆ ಭೇಟಿ ನೀಡಿದ ತಹಸೀಲ್ದಾರ್ ಹಾಗು ವೈದ್ಯಕೀಯ ತಂಡಕ್ಕೆ ಪೂರ್ಣ ಸಹಕಾರ ನೀಡಲಾಗಿದೆ. ಮಾರ್ಚ್ 26ರಂದು ಮರ್ಕಝ್‌ಗೆ ಭೇಟಿ ನೀಡಿದ ಎಸ್ ಡಿ ಎಂ ಅವರು ನಮ್ಮನ್ನು ಕರೆದಾಗ ಅವರನ್ನು ಹೋಗಿ ಮಾತನಾಡಿ ವಾಹನಗಳಿಗೆ ಪಾಸ್ ಕೊಡಿಸುವಂತೆ ಮತ್ತೆ ಕೇಳಿಕೊಂಡೆವು. ಮಾರ್ಚ್ 27ರಂದು ಮರ್ಕಝ್‌ನಿಂದ 6 ಮಂದಿಯನ್ನು ಅರೋಗ್ಯ ತಪಾಸಣೆಗಾಗಿ ಕರೆದೊಯ್ಯಲಾಯಿತು. ಮಾರ್ಚ್ 28ರಂದು ಎಸ್ ಡಿ ಎಂ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ತಂಡ ಬಂದು 33 ಮಂದಿಯನ್ನು ಅರೋಗ್ಯ ತಪಾಸಣೆಗೆಂದು ಕರೆದುಕೊಂಡು ಹೋಯಿತು. ಮರ್ಕಝ್ ತನ್ನಿಂದ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ  ಅದೇ ದಿನ ಇದ್ದಕ್ಕಿದ್ದಂತೆ  ಲಜಪತ್ ನಗರ ಎಸಿಪಿ ಕಚೇರಿಯಿಂದ ನೋಟಿಸ್ ಜಾರಿ ಮಾಡಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಯಿತು.

ಮಾರ್ಚ್ 30ರಂದು ಮರ್ಕಝ್‌ನಲ್ಲಿ ಕೊರೋನ ಸೋಂಕಿತರು ಇದ್ದಾರೆ ಮತ್ತು ಇದರಿಂದ ಕೆಲವು ಮೃತಪಟ್ಟಿದ್ದಾರೆ ಎಂದು ವದಂತಿಗಳು ಹರಡಲು ಪ್ರಾರಂಭವಾದವು. ಮರ್ಕಝ್ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದೇನೆ ಎಂದು ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಹೇಳಿದ ವರದಿ ಪ್ರಕಟವಾಯಿತು. ಲಾಕ್‌ಡೌನ್ ಘೋಷಣೆಯಾದ ದಿನದಿಂದ ಮರ್ಕಝ್ ಕೈಗೊಂಡ ಕ್ರಮಗಳು ಹಾಗು ನಂತರದ ಬೆಳವಣಿಗೆಗಳನ್ನು ಸಿಎಂ ಅವರ ಕಚೇರಿ ಕೇಳಿ ತಿಳಿದುಕೊಂಡಿದ್ದರೆ ಹಾಗೆ ಹೇಳುವ ಪ್ರಮೇಯವೇ ಬರುತ್ತಿರಲಿಲ್ಲ.

ಮರ್ಕಝ್ ತನ್ನ ನೂರು ವರ್ಷಗಳ ಇತಿಹಾಸದಲ್ಲಿ ಸದಾ ದೇಶದ ಕಾನೂನನ್ನು ಪಾಲಿಸುತ್ತಾ ಬಂದಿದೆ. ಈಗಲೂ ಕೊರೋನ ನಿಯಂತ್ರಣಕ್ಕೆ ಸರಕಾರದ ಎಲ್ಲ ಕ್ರಮಗಳನ್ನು ಅದು ಸಂಪೂರ್ಣ ಬೆಂಬಲಿಸುತ್ತದೆ. ಮರ್ಕಝ್ ಕೇಂದ್ರ ಕಚೇರಿಯನ್ನು ಕೊರೋನ ನಿಯಂತ್ರಣಕ್ಕೆ ಬೇಕಾದ ಐಸೋಲೇಷನ್ ಕೇಂದ್ರವಾಗಿ ಬೇಕಾದರೂ ಸರಕಾರ ಬಳಸಬಹುದು ಎಂದು ಮರ್ಕಝ್ ಪ್ರಕಟಣೆಯಲ್ಲಿ ಹೇಳಿದೆ.

ಇದು ನಡೆದ ಘಟನಾವಳಿ. ಈ ಪ್ರಕರಣ ಯಾವ ತಿರುವು ತೆಗೆದುಕೊಳ್ಳುವುದೋ ಎನ್ನುವುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಸಬೆಯಿಂದಲೇ ಭಾರತದಲ್ಲಿ ಕರೋನ ಹರಡುವಿಕೆ ಹೆಚ್ಚಾಗಿದೆ, ಎಂದು ಬಿಂಬಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...