Homeಕರ್ನಾಟಕತೆರದಾಳ ಪ್ರಕರಣ: ಮುಖ್ಯಮಂತ್ರಿಗಳೇ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ-ಡಿಕೆಶಿ...

ತೆರದಾಳ ಪ್ರಕರಣ: ಮುಖ್ಯಮಂತ್ರಿಗಳೇ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ-ಡಿಕೆಶಿ ಪ್ರಶ್ನೆ

ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳಾಗಲಿ, ಮಹಿಳಾ ಸಚಿವರಾಗಲಿ, ಶೋಭಾ ಕರಂದ್ಲಾಜೆ ಅವರಾಗಲಿ, ದೇಶದಲ್ಲಿರುವ ಮಹಿಳಾ ಸಂಘಟನೆಗಳಾಗಲಿ ಯಾರೊಬ್ಬರೂ ಈ ಬಗ್ಗೆ ಬಾಯಿ ಬಿಟ್ಟಿಲ್ಲ. ಇದು ಕೇವಲ ದೇಶ ಮಟ್ಟದಲ್ಲ, ಅಂತಾರಾಷ್ಟ್ರೀಯ ಮಟ್ಟದ ಪ್ರಕರಣ ಎಂದರು.

- Advertisement -
- Advertisement -

ತೆರದಾಳದ ಪುರಸಭೆಯ ಮಹಿಳಾ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣದಲ್ಲಿ ಮುಖ್ಯಮಂತ್ರಿಗಳಾಗಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಲಿ, ಬಿಜೆಪಿ ಮಹಿಳಾ ಸಂಘಟನೆಗಳಾಗಲಿ ಮೌನ ವಹಿಸಿರುವುದೇಕೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, “ಭ್ರೂಣ ಹತ್ಯೆ ಎಂದರೆ ಕೊಲೆಗೆ ಸಮ. ಜತೆಗೆ ಮಹಿಳೆಯರ ಮೇಲೆ ಹಲ್ಲೆ, ದೌರ್ಜನ್ಯ ನಡೆದಿದೆ. ಇದು ಮಾನಭಂಗ ಹಾಗೂ ದೌರ್ಜನ್ಯದ ಪ್ರಕರಣ. ಮಹಾಭಾರತದಲ್ಲಿ ದುಶ್ಶಾಸನನ ದೌರ್ಜನ್ಯ ಕಣ್ಣೆದುರು ಕಂಡಂತೆ ಈ ಪ್ರಕರಣವನ್ನು ಮಾಧ್ಯಮಗಳು ತೋರಿಸಿವೆ. ಆದರೂ ಈವರೆಗೂ ಪೊಲೀಸರು ಪ್ರಕರಣ ದಾಖಲಿಸಿ, ಯಾರೊಬ್ಬರನ್ನೂ ಬಂಧಿಸಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪುರಸಭಾ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ ಸಿದ್ದು ಸವದಿ

“ಮುಖ್ಯಮಂತ್ರಿಗಳಾಗಲಿ, ಮಹಿಳಾ ಸಚಿವರಾಗಲಿ, ಶೋಭಾ ಕರಂದ್ಲಾಜೆ ಅವರಾಗಲಿ, ದೇಶದಲ್ಲಿರುವ ಮಹಿಳಾ ಸಂಘಟನೆಗಳಾಗಲಿ ಯಾರೊಬ್ಬರೂ ಈ ಬಗ್ಗೆ ಬಾಯಿ ಬಿಟ್ಟಿಲ್ಲ. ಇದು ಕೇವಲ ದೇಶ ಮಟ್ಟದಲ್ಲ, ಅಂತಾರಾಷ್ಟ್ರೀಯ ಮಟ್ಟದ ಪ್ರಕರಣ. ಬಿಜೆಪಿಯವರು ದೌರ್ಜನ್ಯ ಎಸಗಿದ ತಮ್ಮ ಶಾಸಕನ ರಕ್ಷಣೆಗಾಗಿ ನಿಂತಿರುವುದು ನಾಚಿಕೆಗೇಡಿನ ವಿಚಾರ. ಮುಖ್ಯಮಂತ್ರಿಗಳೇ ಇದೇ ಪರಿಸ್ಥಿತಿ ನಿಮ್ಮ ಮನೆಯ ಹೆಣ್ಣುಮಕ್ಕಳಿಗೆ ಬಂದಿದ್ದರೆ, ಶೋಭಾ ಕರಂದ್ಲಾಜೆ ಹಾಗೂ ಶಶಿಕಲಾ ಜೊಲ್ಲೆ ಅವರೇ ನಿಮಗೆ ಈ ರೀತಿ ಆಗಿದ್ದರೆ ಏನು ಮಾಡುತ್ತಿದ್ದಿರಿ” ಎಂದು ಪ್ರಶ್ನಿಸಿದರು.

“ಈ ವಿಚಾರವಾಗಿ ನಾನು, ನಮ್ಮ ವಿರೋಧ ಪಕ್ಷದ ನಾಯಕರು ಹಾಗೂ ಮಹಿಳಾ ಶಾಸಕರು ಇಂದು ತೆರದಾಳಕ್ಕೆ ಹೋಗಿ ಸಂತ್ರಸ್ತರ ಪರ ನಿಲ್ಲಲು ನಿರ್ಧರಿಸಿದ್ದೇವೆ. ಅಧಿವೇಶನದಲ್ಲೂ ಈ ವಿಚಾರವಾಗಿ ನಮ್ಮ ಹೋರಾಟ ಮುಂದುವರಿಸುತ್ತೇವೆ. ಇದು ಮಾನವೀಯತೆ ಹಾಗೂ ಹೆಣ್ಣಿನ ಕುಲಕ್ಕೆ ಮಾಡಿರುವ ಅಪಮಾನ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯೇ ಆ ಘಟನೆಗೆ ಕಾರಣರಾದವರ ಬಗ್ಗೆ ಹೇಳಿದ ನಂತರವೂ ಇನ್ನು ಅವರನ್ನು ಬಂಧಿಸಿಲ್ಲ ಎಂದರೆ, ಈ ಸರ್ಕಾರದಲ್ಲಿ ಮಹಿಳೆಯರಿಗೆ ಯಾವ ರೀತಿಯ ರಕ್ಷಣೆ, ಗೌರವ ಸಿಗುತ್ತದೆ ಎಂಬುದು ಗೊತ್ತಾಗುತ್ತದೆ” ಎಂದು ಹೇಳಿದರು.

ಬಾಗಲಕೋಟೆಯ ಮಹಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವೇಳೆ ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿಯಾದ ಸವಿತಾ ಹುರಕಡ್ಲಿ ಅವರನ್ನು ಪೊಲೀಸರ ಸಮ್ಮುಖದಲ್ಲೇ ಎಳೆದಾಡಿ ಅಮಾನವೀಯವಾಗಿ ನಡೆಸಿಕೊಳ್ಳಲಾಗಿತ್ತು.ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...