Homeಮುಖಪುಟಉಡುಪುಗಳು ಮಹಿಳೆಯರ ಆಯ್ಕೆಯಾಗಿದೆ: ಹಿಜಾಬ್ ಬೆಂಬಲಿಸಿದ ರಾಹುಲ್ ಗಾಂಧಿ

ಉಡುಪುಗಳು ಮಹಿಳೆಯರ ಆಯ್ಕೆಯಾಗಿದೆ: ಹಿಜಾಬ್ ಬೆಂಬಲಿಸಿದ ರಾಹುಲ್ ಗಾಂಧಿ

- Advertisement -
- Advertisement -

ಉಡುಪುಗಳು ಮಹಿಳೆಯರ ಆಯ್ಕೆಯಾಗಿದೆ, ಹಿಜಾಬ್ ಸೇರಿದಂತೆ ಮಹಿಳೆಯರ ಆಯ್ಕೆಯ ಉಡುಪುಗಳನ್ನು ಗೌರವಿಸಬೇಕು, ಅದನ್ನು ಒಬ್ಬ ವ್ಯಕ್ತಿ ನಿರ್ದೇಶಿಸಬಾರದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ಉತ್ತರಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಭಾಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದದ ವೇಳೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಸಂವಾದದ ಸಮಯದಲ್ಲಿ ವಿದ್ಯಾರ್ಥಿನಿಯೋರ್ವರು ಕರ್ನಾಟಕದಲ್ಲಿನ ಇತ್ತೀಚಿನ ಹಿಜಾಬ್ ವಿವಾದವನ್ನು ಪ್ರಸ್ತಾಪಿಸಿದ್ದಾರೆ. ಮತ್ತು ರಾಹುಲ್‌ ಗಾಂಧಿ ಅವರಲ್ಲಿ ಪ್ರಧಾನಿಯಾಗಿದ್ದರೆ ಅದರ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕೇಳಿದ್ದಾರೆ.

ಮಹಿಳೆ ಏನು ಧರಿಸಬೇಕೆಂದು ಬಯಸುತ್ತಾಳೆ. ಆಕೆಗೆ ಅವಕಾಶ ನೀಡಬೇಕು. ಇದು ನನ್ನ ಅಭಿಪ್ರಾಯ. ನೀವು ಏನು ಧರಿಸುತ್ತೀರಿ ಎಂಬುವುದು ನಿಮ್ಮ ಜವಾಬ್ದಾರಿ. ಏನು ಧರಿಸಬೇಕು ಎಂಬುವುದು ನಿಮ್ಮ ನಿರ್ಧಾರ. ನೀವು ಏನು ಧರಿಸಬೇಕೆಂದು ಬೇರೆಯವರು ನಿರ್ಧರಿಸಬೇಕು ಎಂದು ನಾನು ಭಾವಿಸುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಹಿಜಾಬ್ ವಿವಾದ:

2022ರ ಜನವರಿಯಲ್ಲಿ ಕರ್ನಾಟಕದ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿದ್ದಕ್ಕಾಗಿ ಕಾಲೇಜಿನ ಸಮವಸ್ತ್ರ ನೀತಿಯ ಉಲ್ಲಂಘನೆಯನ್ನು ಉಲ್ಲೇಖಿಸಿ ಪ್ರವೇಶವನ್ನು ನಿರಾಕರಿಸಿದಾಗ ಹಿಜಾಬ್‌ ಸಮಸ್ಯೆ ಸ್ಫೋಟಗೊಂಡಿತ್ತು. ಈ ಘಟನೆ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಆಗಿನ ಬಿಜೆಪಿ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸಿತ್ತು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸಿತ್ತು. ಈ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಯಿತು ಮತ್ತು ಮಾರ್ಚ್ 15, 2022ರಂದು ಕರ್ನಾಟಕ ಹೈಕೋರ್ಟ್ ನಿಷೇಧವನ್ನು ಎತ್ತಿಹಿಡಿದಿತ್ತು. ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಮತ್ತು ಆದ್ದರಿಂದ ಒಬ್ಬರ ಧರ್ಮವನ್ನು ಮುಕ್ತವಾಗಿ ಆಚರಿಸುವ ಮೂಲಭೂತ ಹಕ್ಕನ್ನು ಖಾತರಿಪಡಿಸುವ ಭಾರತೀಯ ಸಂವಿಧಾನದ 25ನೇ ವಿಧಿಯ ರಕ್ಷಣೆಯ ಅಡಿಯಲ್ಲಿ ಬರುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿತ್ತು.

ಅಕ್ಟೋಬರ್ 2022ರಲ್ಲಿ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗಳ ಮೇಲಿನ ನಿಷೇಧವನ್ನು ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಪೀಠ ವಿಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಒಬ್ಬ ನ್ಯಾಯಾಧೀಶರು ಶಾಲೆಗಳಲ್ಲಿ ಏಕರೂಪದ ಡ್ರೆಸ್ ಕೋಡ್ ಜಾರಿಯನ್ನು ಬೆಂಬಲಿಸಿದರೆ, ಮತ್ತೊಬ್ಬ ನ್ಯಾಯಾಧೀಶರು ಹಿಜಾಬ್ ಧರಿಸುವುದು ವೈಯಕ್ತಿಕ ಆಯ್ಕೆಯ ವಿಷಯ ಎಂದು ವಾದಿಸಿದರು ಮತ್ತು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ನ್ನು ನಿಷೇಧಿಸುವ ಆದೇಶವನ್ನು ತಮ್ಮ ಸರ್ಕಾರ ಹಿಂಪಡೆಯುವುದಾಗಿ ಘೋಷಿಸಿದ್ದರು.

ಇದನ್ನು ಓದಿ: ಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...