Homeಮುಖಪುಟಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

ಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

- Advertisement -
- Advertisement -

ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪಂಚ ಸದಸ್ಯರ ಪೀಠ ಅಯೋಧ್ಯ ಭೂವಿವಾದಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಿದೆ. ರಾಮ ಮಂದಿರ ನಿರ್ಮಾಣಕ್ಕೆ ಸಲ್ಲಬೇಕೊ,  ಬಾಬರಿ ಮಸೀದಿಯ ತಾಣವಾಗಿ ಉಳಿಯಬೇಕೊ ಎಂಬ ವಿವಾದಕ್ಕೆ ಕಾರಣವಾಗಿದ್ದ ಜಮೀನಿಗೆ ಸಂಬಂಧಪಟ್ಟಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಈ  ವಿವಾದಿತ 2.77 ಎಕರೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಸುನ್ನಿ ವಕ್ಫ್ ಬೋರ್ಡ್, ರಾಮ್ ಲಲ್ಲಾ ಮತ್ತು ನಿರ್ಮೋಹಿ ಅಖಾಡಗಳಿಗೆ ಸಮನಾಗಿ ಹಂಚಿತ್ತು. ಆದರೆ ಅದರ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ತೀರ್ಪು ಹೊರಬಿದ್ದಿದೆ.

ಸುಮಾರು 1045 ಪುಟಗಳಿರುವ ತೀರ್ಪಿನ ಪ್ರಮುಖ ಅಂಶಗಳು ಇಲ್ಲಿವೆ….

* ಅಯೋಧ್ಯೆಯ ವಿವಾದಿತ 2.77 ಎಕರೆ ಜಾಗವನ್ನು ಸಂಪೂರ್ಣವಾಗಿ ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಲಾಗಿದೆ.

* ಮಸೀದಿಯನ್ನು ನಿರ್ಮಿಸಲು ಸುನ್ನಿ ವಕ್ಫ್ ಬೋರ್ಡಿಗೆ ಅಯೋಧ್ಯೆಯ ಬೇರೆಡೆ ಪ್ರಮುಖ ಜಾಗದಲ್ಲಿ ಐದು ಎಕರೆ ಜಮೀನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

* ನಿಗದಿತ ಸ್ಥಳದಲ್ಲಿ ಮಂದಿರವನ್ನು ನಿರ್ಮಿಸುವ ಸಲುವಾಗಿ ಒಂದು ಟ್ರಸ್ಟ್ ಅನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿದೆ. ವಿವಾದಿತ ಜಾಗವನ್ನು ಟ್ರಸ್ಟ್ ಗೆ ವರ್ಗಾಯಿಸಲಾಗುವುದು. ಟ್ರಸ್ಟ್ ಅಸ್ತಿತ್ವಕ್ಕೆ ಬರುವವರೆಗೂ ಜಾಗ ಕೇಂದ್ರ ಸರ್ಕಾರದ ಒಡೆತನಕ್ಕೆ ಒಳಪಡಲಿದೆ.

* ಹಿಂದೂಗಳ ನಂಬಿಕೆಯ ಪ್ರಕಾರ ರಾಮನು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹುಟ್ಟಿದ್ದನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ನಂಬಿಕೆಗಳ ನಡುವೆ ನ್ಯಾಯಾಲಯ ಮಧ್ಯ ಪ್ರವೇಶಿಸಲಾಗದು ಎಂದಿದೆ. ಮಸೀದಿಯು ಮುಸ್ಲೀಮರಿಂದ ಪರಿತ್ಯಜಿಸಲ್ಪಟ್ಟಿರಲಿಲ್ಲ ಅಥವಾ ಅನಾಥಗೊಂಡಿರಲಿಲ್ಲ ಎಂಬುದನ್ನೂ ನ್ಯಾಯಾಲಯ ಎತ್ತಿ ಹಿಡಿದಿದೆ.

* “ವಿವಾದಿತ ಸ್ಥಳದಲ್ಲಿರುವ ಕಬ್ಬಿಣದ ಕಂಬಿಗಳನ್ನು 1856-1857ರಲ್ಲೇ ನಿರ್ಮಿಸಲಾಗಿತ್ತು, ಹಿಂದೂಗಳು ಈ ಜಾಗಕ್ಕೆ ಪ್ರಾರ್ಥಿಸಲು ಆಗಲೇ ಬರುತ್ತಿದ್ದರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

* “ಧ್ವಂಸಗೊಳಿಸಲ್ಪಟ್ಟ ಗುಮ್ಮಟದ ಕೆಳಗೆ ಇನ್ನೊಂದು ರಚನೆಯಿರುವುದನ್ನು ಭಾರತೀಯ ಪ್ರಾಚ್ಯ ಸರ್ವೇಕ್ಷಣಾ ಸಂಸ್ಥೆಯು (ಎ.ಎಸ್.ಐ) ದೃಢಪಡಿಸಿದೆ. ಆದರೆ ಮಸೀದಿಯನ್ನು ನಿರ್ಮಿಸಲು ಧ್ವಂಸಗೊಳಿಸಲಾದ ಮಂದಿರವೇ ಅದು ಎಂಬ ನಿರ್ಧಾರಕ್ಕೆ ಎ.ಎಸ್.ಐ ಬರಲಾಗಿಲ್ಲ” ಎಂದಿರುವ ಸರ್ವೋಚ್ಛ ನ್ಯಾಯಾಲಯ ಪ್ರಾಚ್ಯ ಸರ್ವೇಕ್ಷಣಾ ಪುರಾವೆಗಳನ್ನು ಕೇವಲ ಅಭಿಪ್ರಾಯಗಳಷ್ಟೇ ಎಂದು ಪರಿಗಣಿಸಿಬಿಟ್ಟರೆ ಅದು ಎ.ಎಸ್.ಐ.ಗೆ ದೊಡ್ಡ  ಅಪಚಾರ ಮಾಡಿದಂತೆ ಎಂದಿದೆ.

* ಸುನ್ನಿ ವಕ್ಫ್ ಬೋರ್ಡ್ ಹಕ್ಕು ಮಂಡಿಸಿದ್ದಂತೆ, ಆ ವಿವಾದಿತ ಜಾಗದ ಮೇಲೆ ತನಗೂ ಹಕ್ಕಿದೆ ಎಂದಿದ್ದ ಶಿಯಾ ವಕ್ಫ್ ಮಂಡಳಿಯ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

* ಅಯೋಧ್ಯ ವಿವಾದಿತ ಜಾಗದಲ್ಲಿ ತನ್ನ ಹಕ್ಕನ್ನು ಸಾಬೀತುಪಡಿಸುವ ಪುರಾವೆಗಳನ್ನು ಒದಗಿಸುವಲ್ಲಿ ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ವಿಫಲವಾಗಿದೆ; ವಿವಾದಿತ ಸ್ಥಳದ ಮೇಲೆ ತಮಗೆ ವಿಶೇಷ ಒಡೆತನವಿದೆ ಎಂಬುದನ್ನು ಸಾಬೀತುಪಡಿಸುವ ಸಾಕ್ಷ್ಯಾಧಾರಗಳನ್ನು ಮುಸ್ಲಿಮರು ಒದಗಿಸಿಲ್ಲ” ಎಂದಿದೆ ಸುಪ್ರೀಂ ಕೋರ್ಟ್.

* ಬಾಬರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಿಸಿದ ಕಟ್ಟಡವಲ್ಲ. ವಿವಾದಿತ ಕಟ್ಟಡದ ಕೆಳಗಿರುವ ಕಟ್ಟಡದ ರಚನೆಯು ಇಸ್ಲಾಂಮಿಕ್ ರಚನೆಯದ್ದಲ್ಲ” ಎಂದಿರುವ ಸುಪ್ರೀಂ ಕೋರ್ಟ್ “ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದು ಕೂಡಾ ಕಾನೂನು ಉಲ್ಲಂಘನೆಯಾಗಿದೆ” ಎಂದಿದೆ.

* ನಿರ್ಮೋಹಿ ಅಖಾರ ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲಾದ ಪಾರುಪತ್ಯೆ ಹಕ್ಕು ತನಗೆ ಸಲ್ಲಬೇಕೆಂದು ಮುಂದಿಟ್ಟಿದ್ದ ವಾದವನ್ನು ಕಾಲಮಿತಿ ಮೀರಿದ ವಾದವೆಂದು ನ್ಯಾಯಾಲಯ ತಳ್ಳಿಹಾಕಿದೆ. ಆದರೆ ಮಂದಿರ ನಿರ್ಮಾಣದ ಕುರಿತು ಕೇಂದ್ರ ಸರ್ಕಾರದ ಸ್ಥಾಪಿಸಲಿರುವ ಟ್ರಸ್ಟ್ ನಲ್ಲಿ ಅಖಾರದ ಪ್ರತಿನಿಧಿಗೆ ಅವಕಾಶ ಇರಬೇಕೆಂದು ಹೇಳಿದೆ.

* ಸರ್ವೋಚ್ಛ ನ್ಯಾಯಾಲಯವು `ಪ್ರಾರ್ಥನಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯನ್ನು ತೀರ್ಪಿನಲ್ಲಿ ಉಲ್ಲೇಖಿಸಿದೆ. ಎಲ್ಲಾ ಧರ್ಮಗಳು ಸಮಾನ ಎಂಬುದನ್ನು ಹೇಳಲು  ಈ ಕಾಯ್ದೆಯು ಯಾವುದೇ ಪ್ರಾರ್ಥನಾ ಸ್ಥಳವನ್ನು ಮಾರ್ಪಡಿಸುವ /ರೂಪಾಂತರಿಸುವುದನ್ನು ನಿಷೇಧಿಸುತ್ತದೆ.

* `ನಮ್ಮ ಸಂವಿಧಾನದ ಆತ್ಮವೇ ಸಮಾನತೆಗೆ ಬದ್ಧರಾಗಿರುವುದು. ನಮ್ಮ ಸಂವಿಧಾನ ಒಬ್ಬರ ನಂಬಿಕೆ, ಮತ್ತೊಬ್ಬರ ನಂಬಿಕೆ ನಡುವೆ ಯಾವುದೇ ಬೇಧ ಮಾಡುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...