Homeಮುಖಪುಟವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

ವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

- Advertisement -
- Advertisement -

ಕೇವಲ ವಾಟ್ಸಾಪ್ ಗುಂಪಿನಲ್ಲಿ ಇದ್ದೇನೆ ಎಂದ ಮಾತ್ರಕ್ಕೆ ಅದನ್ನು ತಪ್ಪಿನ ಪುರಾವೆಯಾಗಿ ಪರಿಗಣಿಸಬಾರದು ಎಂದು 2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ವಾಟ್ಸಾಪ್ ಗುಂಪಲ್ಲಿರುವುದು

“ಒಂದು ಗುಂಪಿನಲ್ಲಿದ್ದ ಮಾತ್ರಕ್ಗೆಕ ತಪ್ಪು ಮಾಡಿರುವುದರ ಸೂಚನೆಯಲ್ಲ. ಅಲ್ಲಿ ನಾನು ಏನನ್ನೂ ಹೇಳಿಲ್ಲ. ಯಾರೊ ಒಬ್ಬರು ಪ್ರತಿಭಟನಾ ಸ್ಥಳದ ಬಗ್ಗೆ ಕೇಳಿದಾಗ ನಾನು ಅಲ್ಲಿನ ಲೊಕೇಶನ್ ಮಾತ್ರ ಹಂಚಿಕೊಂಡಿದ್ದೇನೆ. ಯಾರೋ ಒಬ್ಬರು ನನಗೆ ಮೆಸೇಜ್ ಮಾಡಿದರು, ನಾನು ಅದರನ್ನು ತಿಳಿಸಿದೆ. ಅಷ್ಟಕ್ಕೂ ಅದು ತಪ್ಪಲ್ಲ, ನಾನು ಹಾಕಿದ್ದ ಸಂದೇಶದಲ್ಲಿ ಯಾವುದೇ ಅಪರಾಧವಿಲ್ಲ.” ಎಂದು ಉಮರ್ ಖಾಲಿದ್ ಅವರ ಪರ ವಕೀಲರು ಹೇಳಿದ್ದಾರೆ.

ವಾಟ್ಸಾಪ್ ಗುಂಪಿನಲ್ಲಿ ಉಮರ್ ಖಾಲಿದ್ ಇದ್ದಾರೆ ಎಂಬ ಕಾರಣಕ್ಕೆ ಅದನ್ನು ಕ್ರಿಮಿನಲ್ ಪಿತೂರಿಯ ಪುರಾವೆಯಾಗಿ ದೆಹಲಿ ಪೊಲೀಸರು ಉಲ್ಲೇಖಿಸಿದ್ದಕ್ಕೆ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯದಲ್ಲಿ ಪ್ರತಿಕ್ರಿಯಿಸುತ್ತಿದ್ದರು. ವಾಟ್ಸಾಪ್ ಗುಂಪಲ್ಲಿರುವುದು

ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ಪ್ರಸ್ತುತ ಸರ್ಕಾರಿ ವಿರೋಧಿಗಳ ಒಕ್ಕೂಟವನ್ನು ಒಟ್ಟುಗೂಡಿಸಿದ್ದು ವಾಟ್ಸಾಪ್‌ನಲ್ಲಿ ದೆಹಲಿಯ ಪ್ರತಿಭಟನೆ ಬೆಂಬಲಿಗರ ಗುಂಪು ರಚನೆಗೆ ಕಾರಣವಾಯಿತು ಎಂದು ಆರೋಪಿಸಿದ್ದರು.

ಅಲ್ಲದೆ, ”ಜೆಎನ್‌ಯು [ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ]ದ ಮುಸ್ಲಿಂ ವಿದ್ಯಾರ್ಥಿಗಳು” ಎಂಬ ವಿದ್ಯಾರ್ಥಿಗಳ ಗುಂಪಿಗೆ ಮತ್ತೊಬ್ಬ ಹೋರಾಟಗಾರ ಶಾರ್ಜೀಲ್ ಇಮಾಮ್ ಸಹಾಯದಿಂದ ಉಮರ್ ಖಾಲಿದ್ ಮಾರ್ಗದರ್ಶನ ನೀಡಿದ ಕಾರಣಕ್ಕೆ ಈ ವಾಟ್ಸಾಪ್ ಗುಂಪನ್ನು ರಚಿಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದರು.

ದೆಹಲಿ ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಮತ್ತು ಹೋರಾಟಗಾರ್ತಿ ದೇವಾಂಗನಾ ಕಲಿತಾ ಅವರಂತಹ ಇತರರು “ನನಗಿಂತ ಹೆಚ್ಚಿನ ಪಾತ್ರಗಳನ್ನು ಹೊಂದಿದ್ದಾರೆ”, ಆದರೆ ಅವರು ಇನ್ನೂ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಪೈಸ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ 2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2020 ರಲ್ಲಿ ಖಾಲಿದ್ ಅವರನ್ನು ಬಂಧಿಸಲಾಯಿತು. ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಉಮರ್ ಖಾಲಿದ್ ಮತ್ತು ಇತರ ಹಲವಾರು ಹೋರಾಟಗಾರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ದಂಡ ಸಂಹಿತೆ, ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಸಿ ಬಳಿಯುವ ದೊಡ್ಡ ಪಿತೂರಿಯ ಭಾಗವಾಗಿ ನಡೆಸಲಾಗಿದ್ದು, ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರು ಹಾಗೂ ಉಮರ್‌ ಖಾಲಿದ್ ಸೇರಿದಂತೆ ಇತರರು ಇದನ್ನು ಯೋಜಿಸಿದ್ದರು ಎಂದು ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಉದ್ದೇಶಗಳನ್ನು ಹೊಂದಿದ್ದು, ಸರ್ಕಾರವನ್ನು ಅಸ್ಥಿರಗೊಳಿಸಲು “ನಾಗರಿಕ ಅಸಹಕಾರದ ಮುಖಭಾವ” ವನ್ನು ಬಳಸುತ್ತಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ನವೆಂಬರ್ 2020 ರಲ್ಲಿ ಸಲ್ಲಿಸಲಾದ 200 ಪುಟಗಳ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ದೆಹಲಿ ಗಲಭೆಯನ್ನು “ಕೂತಲ್ಲಿಂದಲೆ ನಿಯಂತ್ರಿಸಿದರು” ಎಂದು ಪೊಲೀಸರು ನಿರ್ದಿಷ್ಟವಾಗಿ ಆರೋಪಿಸಿದ್ದಾರೆ. ಈ ಗಲಭೆ ವೇಳೆ ಉಮರ್ ಖಾಲಿದ್ ಅರು “ರಹಸ್ಯ ಸಭೆ” ನಡೆಸಿದ್ದಾರೆ, ಅಲ್ಲಿ ಅವರು ಗಲಭೆ ನಡೆಸಲು ವಿವರಗಳನ್ನು ವಿವರಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಮಾರ್ಚ್ 4 ರಂದು ಹೈಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನೂಓದಿ:  ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...