Homeಮುಖಪುಟಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

- Advertisement -
- Advertisement -

ಜನರಿಗೆ ವಾಟ್ಸಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆಗಳನ್ನು ನೀಡಲು ಆಂಧ್ರಪ್ರದೇಶ ಸರ್ಕಾರವು ಮುಂದಾಗಿದೆ. ನವೆಂಬರ್ 8ರ ಶುಕ್ರವಾರದಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ವಾಟ್ಸಾಪ್ ಮೂಲಕ ನಾಗರಿಕರಿಗೆ ಎಲ್ಲಾ ರೀತಿಯ ಸೇವೆಗಳನ್ನು ಒದಗಿಸಲು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಾಟ್ಸಾಪ್ ಮೂಲಕ ಕನಿಷ್ಠ 100 ವಿವಿಧ ಸೇವೆಗಳನ್ನು ಜನರಿಗೆ ತಲುಪಿಸಲು ಈಗಾಗಲೇ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ರಿಯಲ್ ಟೈಮ್ ಗವರ್ನೆನ್ಸ್ (ಆರ್‌ಟಿಜಿ) ಸಚಿವ ನಾರಾ ಲೋಕೇಶ್ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. “ಇನ್ನೂ 90 ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣಪತ್ರಗಳನ್ನು ಕ್ಯೂಆರ್ ಕೋಡ್ ಮೂಲಕ ಪಡೆಯುವಂತೆ ನೋಡಿಕೊಳ್ಳಲು ಕ್ರಮಗಳು ಸಹ ನಡೆಯುತ್ತಿವೆ” ಎಂದು ಅವರು ತಿಳಿಸಿದ್ದಾರೆ. ಆಂಧ್ರಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಜಿಟಲ್ ಸಹಿಯೊಂದಿಗೆ ಭೌತಿಕ ಪ್ರಮಾಣಪತ್ರಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಮಾರ್ಗಸೂಚಿಗಳಿದ್ದರೂ, ಹೆಚ್ಚಿನ ಅಧಿಕಾರಿಗಳಿಗೆ ಈ ನಿಯಮದ ಬಗ್ಗೆ ತಿಳಿದಿಲ್ಲ, ಹೀಗಾಗಿ ವಿದ್ಯಾರ್ಥಿಗಳು ಭೌತಿಕ ಪ್ರಮಾಣಪತ್ರಗಳನ್ನು ಸಲ್ಲಿಸಲು ಒತ್ತಾಯಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಕೂಡಲೇ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ 40 ಲಕ್ಷ ಜನರ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ನಾಯ್ಡು ಅವರಿಗೆ ತಿಳಿಸಿದಾಗ, ತಕ್ಷಣವೇ ಡೇಟಾವನ್ನು ಸಂಗ್ರಹಿಸಿ ಅದನ್ನು ಪರಸ್ಪರ ಜೋಡಿಸಲು ಕ್ರಮಕೈಗೊಳ್ಳುವಂತೆ ಅವರು ಅವರಿಗೆ ಸೂಚಿಸಿದ್ದಾರೆ. ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಜಿಪಿಎಸ್) ಮೂಲಕ ರಾಜ್ಯದ ಎಲ್ಲಾ ಮನೆಗಳನ್ನು ಇಂಟರ್‌ಲಿಂಕ್ ಮಾಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಡೀ ದತ್ತಾಂಶವನ್ನು ಒಂದಕ್ಕೊಂದು ಜೋಡಿಸುವುದರಿಂದ ಆಡಳಿತದಲ್ಲಿ ಪಾರದರ್ಶಕತೆ ಮೂಡುತ್ತದೆ, ಹೀಗಾಗಿ ಭ್ರಷ್ಟಾಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಸಿಎಂ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಅಧಿಕಾರಿಗಳು ದತ್ತಾಂಶ ಏಕೀಕರಣದ ಪ್ರಕ್ರಿಯೆಯನ್ನು ವೇಗಗೊಳಿಸಬೇಕು ಮತ್ತು ಸಾಧ್ಯವಾದಷ್ಟು ಬೇಗ ಅದನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯೂ ಆಧಾರ್ ಪಡೆಯುವಂತೆ ನೋಡಿಕೊಳ್ಳಬೇಕು ಮತ್ತು ನವಜಾತ ಶಿಶುವಿಗೂ ಆಧಾರ್ ಸಿಗುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರವು 40 ವಿವಿಧ ಇಲಾಖೆಗಳನ್ನು ಹೊಂದಿದ್ದು, ಸರ್ಕಾರದ 128 ವಿವಿಧ ವಿಭಾಗಗಳಲ್ಲಿ 178 ಡೇಟಾ ಕ್ಷೇತ್ರಗಳಿಂದ 500 ಟಿಬಿ ಡೇಟಾ ಲಭ್ಯವಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ರಿಯಲ್ ಟೈಮ್ ಗವರ್ನೆನ್ಸ್ ಮುಖ್ಯ ದತ್ತಾಂಶ ಸಂಪನ್ಮೂಲವಾಗಬೇಕು ಎಂದು ಒತ್ತಿ ಹೇಳಿದ ಅವರು, ಎಲ್ಲಾ ಇಲಾಖೆಗಳ ಡೇಟಾವನ್ನು ಪರಸ್ಪರ ಲಿಂಕ್ ಮಾಡಲು ಮತ್ತು ಈ ಡೇಟಾದ ಮೂಲಕ ಸಾಮಾನ್ಯ ವೇದಿಕೆಗೆ ತರಬೇಕು. ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ವಿಶ್ಲೇಷಿಸಬೇಕು ಎಂದು ಅಧಿಕಾರಿಗಳಿಗೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಮುದ್ರ ಗಡಿ ದಾಟಿದ ಆರೋಪ; ಮತ್ತೆ 23 ತಮಿಳು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಸಮುದ್ರ ಗಡಿ ದಾಟಿದ ಆರೋಪ; ಮತ್ತೆ 23 ತಮಿಳು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...