Homeಮುಖಪುಟವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ - ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

- Advertisement -
- Advertisement -

ತನ್ನ ಹೊಸ ವಿವಾದಾತ್ಮಕ ಗೌಪ್ಯತಾ ನೀತಿಯನ್ನು ಕೈಬಿಡುವಂತೆ ಸರ್ಕಾರವು ವಾಟ್ಸಪ್‌ಗೆ ಆದೇಶ ನೀಡಿದೆ ಎಂದು ವರದಿಯಾಗಿದೆ. ವಾಟ್ಸಪ್‌ನ ಈ ಬದಲಾವಣೆಗಳು ಭಾರತೀಯ ನಾಗರಿಕರ ಹಿತಾಸಕ್ತಿಗಳ ಸಂರಕ್ಷಿತ ಮೌಲ್ಯಗಳನ್ನು ಹಾಳುಮಾಡುವುದರ ಜೊತೆಗೆ ಗೌಪ್ಯತೆ, ದತ್ತಾಂಶ ಸುರಕ್ಷತೆ, ಹಕ್ಕುಗಳ ಉಲ್ಲಂಘನೆಯನ್ನು ಮಾಡುತ್ತದೆ ಎಂದು ಹೇಳಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಮೇ 18 ರಂದು ವಾಟ್ಸಾಪ್‌ಗೆ ಬರೆದ ಪತ್ರದಲ್ಲಿ ಈ ಮೇಲಿನ ಹೇಳಿಕೆಯನ್ನು ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಟೆಲಿಗ್ರಾಫ್‌ ಆನ್‌ಲೈನ್‌ ವರದಿ ಮಾಡಿದೆ. ಸಚಿವಾಲಯದ ಪತ್ರಕ್ಕೆ ಏಳು ದಿನಗಳಲ್ಲಿ ತೃಪ್ತಿದಾಯಕ ಪ್ರತಿಕ್ರಿಯೆ ಬರದಿದ್ದರೆ ಕಾನೂನಿನ ಪ್ರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಾಟ್ಸಪ್‌‌ನ ಹೊಸ ಗೌಪ್ಯತೆ ನೀತಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಸಚಿವಾಲಯವು ಈ ವಿಷಯದ ಬಗ್ಗೆ ಕಠಿಣವಾದ ನಿಲುವನ್ನು ತೆಗೆದುಕೊಂಡಿದ್ದು, ಭಾರತೀಯ ಬಳಕೆದಾರರ ಮೇಲೆ “ಅನ್ಯಾಯದ” ನಿಯಮಗಳು ಮತ್ತು ಷರತ್ತುಗಳನ್ನು ಹೇರುವ ವಾಟ್ಸಪ್‌ನ ಈ ನವೀಕರಣ(ಅಪ್‌ಡೇಟ್‌) ಸಮಸ್ಯಾತ್ಮಕ ಮಾತ್ರವಲ್ಲದೆ ಬೇಜವಾಬ್ದಾರಿತನದಿಂದಲೂ ಕೂಡಿದೆ ಎಂದು ಮೂಲಗಳು ತಿಳಿಸಿವೆ.

ಸಮಸ್ಯೆಯನ್ನು ಬಗೆಹರಿಸಲು ಕಂಪನಿಯು ಸರ್ಕಾರದೊಂದಿಗೆ ನಿರಂತರವಾಗಿ ಮಾತುಕತೆಯಲ್ಲಿ ತೊಡಗಿಸಿಕೊಂಡಿದೆ ಎಂದು ವಾಟ್ಸಾಪ್ ವಕ್ತಾರರು ತಿಳಿಸಿದ್ದಾರೆ. “ಭವಿಷ್ಯದಲ್ಲಿ ಬ್ಯುಸಿನೆಸ್‌ ವಾಟ್ಸಪ್‌ನ ಹೊಸ ಆಯ್ಕೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು ನಮ್ಮ ಗುರಿಯಾಗಿದೆ. ಈ ಅಪ್‌ಡೇಟ್‌ನಿಂದಾಗಿ ಮೇ 15 ರಂದು ಯಾವುದೇ ಖಾತೆಗಳನ್ನು ಅಳಿಸಲಾಗಿಲ್ಲ ಮತ್ತು ಭಾರತದಲ್ಲಿ ಯಾರೂ ವಾಟ್ಸಾಪ್‌ನ ಕಾರ್ಯವನ್ನು ಕಳೆದುಕೊಂಡಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಹೊಸ ಗೌಪ್ಯತಾ ನೀತಿ’ – ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

“… ಈ ಅಪ್‌ಡೇಟ್‌‌ ನಿಂದಾಗಿ ಯಾವುದೆ ವ್ಯಕ್ತಿಯ ವೈಯಕ್ತಿಕ ಸಂದೇಶಗಳ ಗೌಪ್ಯತೆಯು ಉಲ್ಲಂಘನೆಯಾಗುವುದಿಲ್ಲ ಎಂದು ನಾವು ಮೊದಲೆ ಹೇಳಿದ್ದೆವು, ಈಗಲೂ ಅದನ್ನೇ ದೃಡೀಕರಿಸುತ್ತೇವೆ. ಜನರ ವೈಯಕ್ತಿಕ ಸಂದೇಶಗಳು ಮತ್ತು ಖಾಸಗಿ ಮಾಹಿತಿಯನ್ನು ನಾವು ಹೇಗೆ ರಕ್ಷಿಸುತ್ತೇವೆ ಎಂಬುದನ್ನು ವಿವರಿಸಲು ನಾವು ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತೇವೆ” ಎಂದು ವಾಟ್ಸಪ್‌ ವಕ್ತಾರರು ತಿಳಿಸಿದ್ದಾರೆ.

ಆದರೆ ಐಟಿ ಸಚಿವಾಲಯದ ಮೂಲಗಳು, “ಭಾರತೀಯ ನಾಗರಿಕರ ಹಿತಾಸಕ್ತಿಗಳನ್ನು ಕಾಪಾಡುವ ತನ್ನ ಸಾರ್ವಭೌಮ ಜವಾಬ್ದಾರಿಯನ್ನು ನಿರ್ವಹಿಸಲು, ಭಾರತದ ಕಾನೂನಿನ ಅಡಿಯಲ್ಲಿ ಸರ್ಕಾರವು ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಪರಿಗಣಿಸುತ್ತದೆ” ಎಂದು ತಿಳಿಸಿವೆ.

ಇದನ್ನೂ ಓದಿ: ಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...