Homeಮುಖಪುಟ‘ಹೊಸ ಗೌಪ್ಯತಾ ನೀತಿ’ - ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

‘ಹೊಸ ಗೌಪ್ಯತಾ ನೀತಿ’ – ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

- Advertisement -
- Advertisement -

ಫೇಸ್‌ಬುಕ್‌‌‌‌ ಒಡೆತನದ ವಾಟ್ಸಾಪ್ ಭಾರತದಲ್ಲಿ ತನ್ನ ವಿವಾದಾತ್ಮಕ ಹೊಸ ನಿಯಮಗಳು ಮತ್ತು ಷರತ್ತುಗಳನ್ನು ಸ್ವೀಕರಿಸದ ಬಳಕೆದಾರರ ಖಾತೆಗಳನ್ನು ಕ್ರಮೇಣ ಅಳಿಸಲಿದೆ ಎಂದು ಹೇಳಿದೆ. ಹೊಸ ಗೌಪ್ಯತೆಯ ನೀತಿಯ ಯಾವುದೇ ಮುಂದೂಡಿಕೆ ಇಲ್ಲ ಎಂದು ವಾಟ್ಸಾಪ್ ಪರ ವಕೀಲರಾದ ಅರವಿಂದ ದತಾರ್ ಮತ್ತು ಕಪಿಲ್ ಸಿಬಲ್ ಸೋಮವಾರ ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಬಳಕೆದಾರರನ್ನು ಮನವೊಲಿಸುವ ಮೂಲಕ ತಮ್ಮ ನೀತಿಯನ್ನು ಒಪ್ಪಲು ವಾಟ್ಸಪ್‌ ಪ್ರಯತ್ನಿಸುತ್ತಿದೆ. ಅಂತಿಮವಾಗಿ ಹೊಸ ನಿಯಮಗಳನ್ನು ಪಾಲಿಸದ ಬಳಕೆದಾರರ ಖಾತೆಗಳನ್ನು ವಾಟ್ಸಪ್‌ ಅಳಿಸಬಹುದು ಎಂದು ಅವರು ಹೇಳಿದ್ದಾರೆ. ನಿಯಮಗಳಿಗೆ ಒಪ್ಪದ ಖಾತೆಗಳನ್ನು ಈಗಿನಿಂದಲೇ ಅಳಿಸಲಾಗದಿದ್ದರೂ, ಮಾರ್ಗಸೂಚಿಗಳನ್ನು ಸ್ವೀಕರಿಸದಿದ್ದರೆ ಅವುಗಳನ್ನು ಅಂತಿಮವಾಗಿ ತೆಗೆದುಹಾಕಲಾಗುತ್ತದೆ ಎಂದು ಕಪಿಲ್‌ ಸಿಬಲ್ ಹೇಳಿದ್ದಾರೆ.

ಈ ಹಿಂದೆ ವಾಟ್ಸಪ್‌ ಭಾರತದಲ್ಲಿ ತನ್ನ ಗೌಪ್ಯತೆ ನೀತಿಯಯನ್ನು ರದ್ದುಗೊಳಿಸಿದೆ ಅಥವಾ ಮುಂದೂಡಿದೆ ಎಂದು ವರದಿಯಾಗಿದ್ದವು, ಆದರೆ ಕಂಪೆನಿಯು ಅದನ್ನು ರದ್ದು ಮಾಡಿಲ್ಲ ಎಂದು ಈಗಿನ ಬೆಳವಣಿಗೆಯಿಂದ ತಿಳಿಯುತ್ತಿದೆ.

ಇದನ್ನೂ ಓದಿ: ಮೂಡಿಗೆರೆ ದಲಿತ ಯುವಕನ ಮೇಲೆ ಪಿಎಸ್‌ಐ ದೌರ್ಜನ್ಯ ಆರೋಪ: ಹಿರಿಯ ಅಧಿಕಾರಿಗಳಿಗೆ ದೂರು

ವಾಟ್ಸಪ್‌ನ ಹೊಸ ನಿಯಮವು ಚಾಟ್ ಮಾಹಿತಿ ಮತ್ತು ಬ್ಯುಸಿನೆಸ್‌ ಖಾತೆಗಳ ಬಳಕೆಗೆ ಇರುವ ಹೊಸ ನಿಯಮವಾಗಿದೆ. ಇದು ಬಳಕೆದಾರರ ಗೌಪ್ಯತೆಯನ್ನು ಉಲ್ಲಂಘಿಸುತ್ತದೆ ಎಂದು ದೇಶಾದ್ಯಂತ ವ್ಯಾಪಕ ಟೀಕೆಗಳನ್ನು ಹುಟ್ಟುಹಾಕಿದೆ. ಆದಾಗ್ಯೂ, ಮುಂದಿನ ವಾರಗಳಲ್ಲಿ ಗೌಪ್ಯತೆ ನೀತಿ ನವೀಕರಣದ ಕುರಿತು ಜ್ಞಾಪನೆಗಳನ್ನು ಕಂಪೆನಿಯು ಬಳಕೆದಾರರಿಗೆ ಕಳುಹಿಸಲಿದೆ. ಜೊತೆಗೆ ಇದರಿಂದಾಗಿ ವಾಟ್ಸಪ್‌ ಬಳಕೆದಾರರ ಗೌಪ್ಯತೆಯ ಉಲ್ಲಂಘನೆ ಆಗುವುದಿಲ್ಲ ಎಂದು ಕಂಪೆನಿ ಹೇಳಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ, ‘ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ದೇಶದ ಮಾಹಿತಿ ತಂತ್ರಜ್ಞಾನ ಕಾಯ್ದೆ 2020 ಅನ್ನು ಉಲ್ಲಂಘಿಸಿದೆ ಮತ್ತು ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರಿಂದ ಉತ್ತರವನ್ನು ಕೋರಲಾಗಿದೆ’ ಎಂದು ದೆಹಲಿ ಹೈಕೋರ್ಟ್‌ಗೆ ಹೇಳಿದರು. ಹೊಸ ನೀತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಕೇಂದ್ರವು ಪ್ರಯತ್ನಿಸಿತಾದರೂ, ವಾಟ್ಸಾಪ್ ಅದನ್ನು ವಿರೋಧಿಸಿದೆ.

ಡೇಟಾ ಅನಾಲಿಟಿಕ್ಸ್ ಸಂಸ್ಥೆ ಸೆನ್ಸರ್ ಟವರ್ ಪ್ರಕಾರ, ಜನವರಿ-ಏಪ್ರಿಲ್ ಅವಧಿಯಲ್ಲಿ ವಾಟ್ಸಪ್‌ ತನ್ನ ಹೊಸ ಗೌಪ್ಯತೆ ನೀತಿಯಲ್ಲಿ ಬದಲಾವಣೆಗಳನ್ನು ಘೋಷಿಸಿದ ನಂತರ ಜಾಗತಿಕವಾಗಿ ವಾಟ್ಸಾಪ್ ಡೌನ್‌ಲೋಡ್ 43% ದಷ್ಟು ಕುಸಿದು ಜಾಗತಿಕವಾಗಿ 172.3 ಮಿಲಿಯನ್‌ಗೆ ತಲುಪಿದೆ. ಪ್ರತಿಸ್ಪರ್ಧಿ ಮೆಸೇಜಿಂಗ್ ಅಪ್ಲಿಕೇಶನ್‌ಗಳಾದ ಸಿಗ್ನಲ್ ಮತ್ತು ಟೆಲಿಗ್ರಾಮ್ ಈ ಅವಧಿಯಲ್ಲಿ ಹೊಸ ಬಳಕೆದಾರರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿದೆ. ಇವುಗಳ ಡೌನ್‌ಲೋಡ್‌ಗಳು ಕ್ರಮವಾಗಿ 64.4 ಮಿಲಿಯನ್ (1,192%) ಮತ್ತು 161 ಮಿಲಿಯನ್ (98%) ಏರಿಕೆಯಾಗಿದೆ.

ಇದನ್ನೂ ಓದಿ: ‘ಎಚ್ಚರಿಕೆ; ಬೇಕಾಬಿಟ್ಟಿ ಬಿಸಿ ನೀರಿನ ಆವಿ (ಸ್ಟೀಮ್‌) ಪಡೆಯದಿರಿ’-ತಮಿಳುನಾಡು ವೈದ್ಯಕೀಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...