Homeಕರ್ನಾಟಕಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

- Advertisement -
- Advertisement -

ಇರುಳಿಗ ಬುಡಕಟ್ಟು ಸಮುದಾಯದ ನೈಜ ಘಟನೆ ಆಧಾರಿಸಿ ತೆರೆಕಂಡ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾದ ಬಳಿಕ ಬುಡಕಟ್ಟ ಸಮುದಾಯಗಳ ಕುರಿತು ಗಂಭೀರ ಚರ್ಚೆಗಳಾಗುತ್ತಿವೆ. ಅದರಲ್ಲೂ ಇರುಳಿಗರು ನಿತ್ಯವೂ ಅನುಭವಿಸುತ್ತಿರುವ ಕಷ್ಟಗಳು ಬೆಳಕಿಗೆ ಬರುತ್ತಿವೆ.

ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಇರುಳಿಗ ಕುಟುಂಬಗಳಿದ್ದು, ಕನಿಷ್ಠ ಮೂಲಸೌಕರ್ಯವೂ ಇಲ್ಲದೆ ಈ ಸಮುದಾಯ ಸಂಕಷ್ಟ ಎದುರಿಸುತ್ತಿರುವುದು ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿಯುತ್ತಿದೆ.

ರಾಮನಗರ ತಾಲ್ಲೂಕಿನ ಕೂಟಗಲ್ ಬಳಿ ಇರುವ ಇರುಳಿಗ ಬುಡಕಟ್ಟು ಸಮುದಾಯ ದಶಕಗಳಿಂದಲೂ ಮೂಲಸೌಕರ್ಯವಿಲ್ಲದೆ ಒದ್ದಾಡುತ್ತಿದೆ. ಮಳೆ ಬಂದರಂತೂ ಇಲ್ಲಿರುವ 23 ಗುಡಿಸಲುಗಳಿಗೂ ನೀರು ನುಗ್ಗುತ್ತದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ವಿಪರೀತ ನೀರು ಗುಡಿಸಲುಗಳಿಗೆ ನುಗ್ಗಿತ್ತು. ಅದರಿಂದ  ತಪ್ಪಿಸಿಕೊಳ್ಳಲು ಗುಡಿಸಲಿನಲ್ಲಿ ತೂಗುಯ್ಯಾಲೆಯ ರೀತಿ ನಿರ್ಮಿಸಿಕೊಂಡು (50) ಮಲಗಿದ್ದರು. ಆದರೆ ಮಧ್ಯರಾತ್ರಿ ಮೇಲಿನಿಂದ ಕುಸಿದು ಸಾವನ್ನಪ್ಪಿದ್ದಾರೆ.

ರತ್ನಗಿರಯ್ಯ

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ದಶಕಗಳಿಂದಲೂ ಇರುಳಿಗರು ಕನಿಷ್ಠ ಮೂಲಸೌಕರ್ಯಕ್ಕಾಗಿ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದು, ಇರುಳಿಗರ ಕುರಿತು ಗಂಭೀರ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿ ರತ್ನಗಿರಯ್ಯ ಅವರ ದುರಂತ ಸಾವು ಸಂಭವಿಸಿದೆ. ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಸುಮಾರು 40 ವರ್ಷಗಳ ಹಿಂದೆ ಈ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಯಿತು. ಕಾಡಿನಲ್ಲಿ ನೆಮ್ಮದಿಯಾಗಿ ಇದ್ದವರನ್ನು ಬೀದಿಗೆ ತಂದು ಬಿಡಲಾಯಿತು. ಈಗ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಈ ಕುಟುಂಬಗಳಿಗೆ ರೇಷನ್‌ಕಾರ್ಡ್, ವೋಟರ್‌ ಐಡಿ ಇದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ಭರವಸೆಗಳ ಮಹಾಪೂರವನ್ನೇ ರಾಜಕಾರಣಿಗಳು ನೀಡುತ್ತಾರೆ. ಚುನಾವಣೆ ಮುಗಿದ ಮೇಲೆ ಮತ್ತದೇ ಗೋಳು ಮುಂದುವರಿಯುತ್ತಿದೆ.

ಸ್ಥಳೀಯ ಪತ್ರಕರ್ತ ಎಸ್.ರುದ್ರೇಶ್ವರ ರಾಮನಗರ ಅವರು ಸಾಮಾಜಿಕ ಮಾಧ್ಯಮದಲ್ಲಿ ಇರುಳಿಗರ ಪರಿಸ್ಥಿತಿಯ ಕುರಿತು ನಿರಂತರವಾಗಿ ವರದಿ ಮಾಡುತ್ತಿದ್ದಾರೆ. ಜೊತೆಗೆ ‘ಉದಯವಾಣಿ’ ಪತ್ರಿಕೆಯಲ್ಲಿ ಸರಣಿ ವರದಿಗಳನ್ನು ಮಾಡಿದ್ದಾರೆ. ಅವರು ಫೇಸ್‌ಬುಕ್‌ ಮೂಲಕ ನೀಡಿರುವ ಲೈವ್‌ಗಳು ಇರುಳಿಗರ ಸಂಕಷ್ಟವನ್ನು ಡಾಳಾಗಿ ತೋರಿಸುತ್ತಿವೆ. ಸುತ್ತ ಪೊದೆ, ಚಿಕ್ಕಚಿಕ್ಕ ಗುಡಿಸಲುಗಳು, ಮಳೆಯ ರುದ್ರಾವತಾರಕ್ಕೆ ನಲುಗಿರುವ ಇರುಳಿಗರ ನೋವಿಗೆ ಈ ವಿಡಿಯೊಗಳು ಬೆಳಕು ಚೆಲ್ಲಿವೆ.

ಇರುಳಿಗರಿಗೆ ನಿವೇಶನ ನೀಡಲು ಅಧಿಕಾರಿಗಳು ದಿನದೂಡುತ್ತಲೇ ಇದ್ದಾರೆ.  ಆದರೆ ಮಳೆಯ ಬಿರುಸಿಗೆ ಸಿಲುಕಿ ರತ್ನಗಿರಯ್ಯ ಸಾವನ್ನಪ್ಪಿದ ಬಳಿಕ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕೂಟಗಲ್ ಸರ್ವೇ ನಂಬರ್‌‌ 94ರಲ್ಲಿ 2 ಎಕರೆ ಭೂಮಿಯನ್ನು ಸರ್ವೇ ಮಾಡಿದ್ದಾರೆ. ಶೀಘ್ರವಾಗಿ ಇರುಳಿಗರಿಗೆ ನಿವೇಶನ ಮಂಜೂರು ಮಾಡುವ ಭರವಸೆಯನ್ನೂ ನೀಡಿದ್ದಾರೆ.


 ಇದನ್ನೂ ಓದಿರಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರೆಂಬ ಅಧಿಕಾರಿಗಳು ಮತ್ತು ಆಡಳಿತಾರೂಢ ರಾಜಕಾರಣಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...