Homeಮುಖಪುಟ‘ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 2 ಸಿಎಂ, 3 ಡಿಸಿಎಂ’: ಅಸಾದುದ್ದೀನ್ ಓವೈಸಿ

‘ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 2 ಸಿಎಂ, 3 ಡಿಸಿಎಂ’: ಅಸಾದುದ್ದೀನ್ ಓವೈಸಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ತಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಇಬ್ಬರು ಮುಖ್ಯಮಂತ್ರಿ ಮತ್ತು ಮೂವರು ಉಪಮುಖ್ಯಮಂತ್ರಿಗಳು ಇರಲಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಹೇಳಿದ್ದಾರೆ.

ತಮ್ಮ ಪಕ್ಷವು ಬಾಬು ಸಿಂಗ್ ಕುಶ್ವಾಹಾ ಮತ್ತು ಭಾರತ್ ಮುಕ್ತಿ ಮೋರ್ಚಾದೊಂದಿಗೆ ಮೈತ್ರಿ ಮಾಡಿದೆ ಎಂದು ಅವರು ಘೋಷಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ತಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಇಬ್ಬರು ಮುಖ್ಯಮಂತ್ರಿಗಳಾಗುತ್ತಾರೆ. ಅದರಲ್ಲಿ ಒಬ್ಬರು ಒಬಿಸಿ ಸಮುದಾಯದವರಾಗಿದ್ದು, ಇನ್ನೊಬ್ಬರು ದಲಿತ ಸಮುದಾಯದವರಾಗಿರುತ್ತಾರೆ. ಮುಸ್ಲಿಂ ಸಮುದಾಯ ಸೇರಿದಂತೆ 3 ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಆಡಳಿತದಲ್ಲಿ ಇರಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತಮ್ಮ ಪಕ್ಷ ಸುಮಾರು ನೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಅಸಾದುದ್ದೀನ್ ಓವೈಸಿ ಅವರು ಈ ಹಿಂದಯೆ ಘೋಷಿಸಿದ್ದರು.

ಇದು ಬಲವಂತವಾಗಿ ರಚನೆಯಾದ ಮೈತ್ರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬಾಬು ಸಿಂಗ್ ಕುಶ್ವಾಹಾ, “ಇದು ಬಲವಂತದ ಮೈತ್ರಿಯಲ್ಲ. ನಾವು ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕಾಗಿ ದೀರ್ಘಕಾಲ ಕೆಲಸ ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10 ರಿಂದ ಪ್ರಾರಂಭವಾಗುವ ಚುನಾವಣೆಯು, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ಅಸಾದುದ್ದೀನ್ ಒವೈಸಿ ಬಿಜೆಪಿಯ ‘ಚಾಚಾ ಜಾನ್’, ಅವರಿಬ್ಬರೂ ಒಂದೇ ತಂಡ: ಟಿಕಾಯತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...