Homeಮುಖಪುಟಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದ್ದು ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರಕ್ಕೆ ತೆರಳಿ ಎನ್‌‌ಡಿಎ ಪರವಾಗಿ ಪ್ರಚಾರ ಭಾಷಣ ಮಾಡಿದರು. ಸಾಸಾರಾಮ್​ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ” ಎಂದು ಹೇಳಿದ್ದಾರೆ.

“ಮತ್ತೊಮ್ಮ ಎನ್​ಡಿಎ ಸರ್ಕಾರ” ಎಂಬ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಮೋದಿ, ವಿಪಕ್ಷಗಳಾದ ಆರ್​ಜೆಡಿ ಮತ್ತು ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರು ಮತ್ತು ಸಂವಿಧಾನಕ್ಕೆ 370ನೇ ಆರ್ಟಿಕಲ್ ಅನ್ನು ಪುನಃ ಸೇರಿಸುತ್ತೇನೆ ಎನ್ನುವವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ ಎಂದು ಮೋದಿ ಟೀಕಿಸಿದರು. ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ ಸಂವಿಧಾನದಲ್ಲಿನ ವಿಶೇಷ ಸ್ಥಾನಮಾನವನ್ನು ಮತ್ತೇ ನೀಡುತ್ತೇವೆ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

“ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ನಿರ್ಧಾರವನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಆಶ್ಚರ್ಯ ಎಂದರೆ ಅಂಥ ಹೇಳಿಕೆಗಳನ್ನ ನೀಡಿಯೂ ಬಿಹಾರದ ಜನರ ಬಳಿ ಮತ ಕೇಳುವ ಧೈರ್ಯ ಇದೆಯಲ್ಲಾ” ಎಂದು ಮೋದಿ ಆಶ್ಚರ್ಯ ವ್ಯಕ್ತಪಡಿಸಿದರು.

ಲಾಲೂ ಪ್ರಸಾದ್ ಯಾದವ್ ನೇತೃತ್ವದ ಆರ್​ಜೆಡಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ನರೇಂದ್ರ ಮೋದಿ, ಬಿಹಾರವನ್ನು ರೋಗಗ್ರಸ್ತ ರಾಜ್ಯವನ್ನಾಗಿ ಮಾಡಿದವರಿಗೆ ಜನರು ಮತ್ತೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಆರ್​ಜೆಡಿ ಆಡಳಿತದಲ್ಲಿ “ಸೂರ್ಯಾಸ್ತ ಆಯಿತೆಂದರೆ ಎಲ್ಲವೂ ನಿಂತೇ ಹೋಯಿತು ಎಂದರ್ಥ. ಯಾವ ಕಾನೂನೂ ಬಳಕೆಯಲ್ಲಿರಲಿಲ್ಲ. ಸುಲಿಗೆ, ಕೊಲೆ, ಅಪಹರಣ ಸಾಮಾನ್ಯವಾಗಿದ್ದವು. ಬಿಹಾರದ ಈಗಿನ ತಲೆಮಾರಿನ ಜನರು ಮತ ಹಾಕುವ ಮುನ್ನ ಆ ಕತ್ತಲ ಯುಗವನ್ನೊಮ್ಮೆ ನೆನಪಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ: ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್?- ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಿಗೆ ವಿರೋಧ ಪಕ್ಷಗಳು ಮಾಡುತ್ತಿರುವ ವಿರೋಧಗಳನ್ನು ಅಲ್ಲಗಳೆದ ಮೋದಿ “ಮಂಡಿ (ಎಪಿಎಂಸಿ ಮಾರುಕಟ್ಟೆ) ಮತ್ತು ಎಂಎಸ್​ಪಿ ಇವರಿಗೆ ಟೀಕಿಸಲು ಒಂದು ನೆಪ ಮಾತ್ರ. ಇವರಿಗೆ ಮಧ್ಯವರ್ತಿಗಳನ್ನ ಕಾಪಾಡುವ ಉದ್ದೇಶ ಮಾತ್ರ ಇದೆ” ಎಂದು ಆರೋಪಿಸಿದರು.

ಬಿಹಾರದ ಎನ್​ಡಿಎ ಮೈತ್ರಿಕೂಟದಿಂದ ಹೊರಬಂದು ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಎಲ್​ಜೆಪಿಯ ಕುರಿತು ಮಾತನಾಡಿದ ಮೋದಿ, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ವಾಸ್ತವದಲ್ಲಿರುವುದಕ್ಕಿಂತ ಅವರನ್ನು ದೊಡ್ಡವರನ್ನಾಗಿ ಬಿಂಬಿಸಲಾಗುತ್ತದೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ. ಇಂಥ ವದಂತಿ ಮತ್ತು ಮಿಥ್ಯೆಗಳನ್ನ ಬಿಹಾರದ ಬುದ್ಧಿವಂತ ಮತದಾರರು ನಂಬುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...