Homeಕರ್ನಾಟಕ‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಪ್ರಧಾನಿ ಮೋದಿ ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ನಗರದ ಹೊರವಲಯದಲ್ಲಿ ಇರುವ ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಸಮಾವೇಶ ಆಯೋಜನೆಯಾಗಿದೆ. ಮೋದಿ ಭಾಷಣ ನೀಡಲಿರುವ ಮೈದಾನದ ಬಳಿ ಶೆಡ್‌ ಮನೆಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳನ್ನು ಜಿಲ್ಲಾ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ನೀಡಿದ ನೋಟಿಸ್‌ನಲ್ಲಿ ಮುಂಜಾಗೃತ ಕ್ರಮವಾಗಿ ಯಾವುದೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಕೂಳೂರು ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಶೆಡ್ ಹಾಕಿಕೊಂಡು ಬದುಕು ಸಾಗಿಸುತ್ತಿದ್ದ ಒಂಬತ್ತು ಅಲೆಮಾರಿ ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಆದರೆ ಅವರಿಗೆ ಸಮರ್ಪಕವಾದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕುಟುಂಬಗಳು ಆರೋಪಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸುಮಾರು 30ಕ್ಕೂ ಅಧಿಕ ಮಂದಿ ಬೀದಿ ಪಾಲಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಬಸವ ಆಡಿಸುವ ಸಮುದಾಯಕ್ಕೆ ಸೇರಿರುವ ತಾವು ಕಳೆದ 8 ರಿಂದ 9 ವರ್ಷಗಳಿಂದ ಶೆಡ್‌ ಹಾಕಿಕೊಂಡು ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಸಮಾವೇಶ ನಡೆಯಲಿರುವ 1 ಕಿ.ಮೀ. ದೂರದಲ್ಲಿ ಇರುವ ಈ ಸಮುದಾಯದ ಶೆಡ್‌ಗಳಲ್ಲಿ 9 ಕುಟುಂಬಗಳು ವಾಸಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ನೆಪ ಮಾಡಿಕೊಂಡು ಅಲೆಮಾರಿ ಸಮುದಾಯಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಕಾವೂರು ಪೊಲೀಸರು ಹೊರಡಿಸಿರುವ ನೋಟಿಸ್‌ನಲ್ಲಿ,“ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ, ಸೆಪ್ಟೆಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ ಕೋರಲಾಗಿದೆ” ಎಂದು ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ಸಹಿಯೊಂದಿಗೆ ಶೇಡ್‌ನಲ್ಲಿ ವಾಸಿಸುವ ನಿವಾಸಿಗಳಿಗೆ ನೀಡಲಾಗಿದೆ.

‘ಪುಧಾನಿ ಬರುವಾಗ ನಿಮ್ಮ ಶೆಡ್ ಅವರಿಗೆ ಕಾಣಿಸಬಾರದು’

“ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಪೊಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ” ಎಂದು ಅಲೆಮಾರಿ ಸಮುದಾಯದ ಜನರು ಹೇಳಿದ್ದಾರೆ.

“ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ ಬಿಚ್ಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಬಾಣಂತಿ, ಸಣ್ಣ ಮಕ್ಕಳಿದ್ದಾರೆ

“ನಾವು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕಳೆದ 8 ರಿಂದ 9 ವರ್ಷದಿಂದ ಇಲ್ಲಿ ಶೆಡ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದವು. ನಮ್ಮಲ್ಲಿ ಬಾಣಂತಿಯರು ಸೇರಿದಂತೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಏಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ” ಎಂದು ಮೀರೇಶ್ ಎಂಬವರು ನೋವು ತೋಡಿಕೊಂಡಿದ್ದಾರೆ.

“ನಮ್ಮ ಸಾಮಗ್ರಿಗಳನ್ನು ಇಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ನಮಗೆ ಇನ್ನೂ ಉಳಿದುಕೊಳ್ಳಲು ವ್ಯವಸ್ಥೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...