Homeಮುಖಪುಟರಫೇಲ್ ಹಗರಣ: ಸತ್ಯ ನಿಮ್ಮೊಂದಿಗೆ, ಭಯವಿಲ್ಲದೆ ಹೋರಾಡಿ - ಕಾಂಗ್ರೆಸ್ಸಿಗರಿಗೆ ರಾಹುಲ್ ಗಾಂಧಿ ಕರೆ

ರಫೇಲ್ ಹಗರಣ: ಸತ್ಯ ನಿಮ್ಮೊಂದಿಗೆ, ಭಯವಿಲ್ಲದೆ ಹೋರಾಡಿ – ಕಾಂಗ್ರೆಸ್ಸಿಗರಿಗೆ ರಾಹುಲ್ ಗಾಂಧಿ ಕರೆ

ಮೀಡಿಯಾ ಪಾರ್ಟ್ ಪತ್ರಿಕೆ ರಾಫೇಲ್ ಹಗರಣದ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದ್ದು, ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ CBI ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸತ್ಯ ನಿಮ್ಮೊಂದಿರುವಾಗ ತಡವೇಕೆ, ಭಯವಿಲ್ಲದೆ ಹೋರಾಡಿ ಎಂದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರತಿ ಹೆಜ್ಜೆಯಲ್ಲೂ ಸತ್ಯ ನಿಮ್ಮೊಂದಿಗಿರುವಾಗ, ತಡವೇಕೆ? ನನ್ನ ಕಾಂಗ್ರೆಸ್ ಸಂಗಾತಿಗಳೆ, ಭ್ರಷ್ಟ ಕೇಂದ್ರ ಸರ್ಕಾರದ ವಿರುದ್ಧ ಇದೇ ರೀತಿ ಹೋರಾಟ ಮುಂದುವರಿಸಿ. ಕಾಯಬೇಡಿ, ಆಯಾಸಗೊಳ್ಳಬೇಡಿ, ಭಯಪಡಬೇಡಿ” ಎಂದು ತಿಳಿಸಿದ್ದಾರೆ.

ತಮ್ಮ ಟ್ವೀಟ್‌ನೊಂದಿಗೆ ಹಿಂದಿ ಪತ್ರಿಕೆಯ ತುಣುಕೊಂದನ್ನು ರಾಹುಲ್ ಗಾಂಧಿ ಲಗತ್ತಿಸಿದ್ದಾರೆ. “ರಫೇಲ್ ಡೀಲ್‌ನಲ್ಲಿ ನಕಲಿ ರಶೀದಿಗಳನ್ನು ಬಳಸಿ ಮಧ್ಯವರ್ತಿಗಳಿಗೆ ಕಮಿಷನ್ ನೀಡಲಾಗಿದೆ. ಈ ದಾಖಲೆಗಳಿದ್ದರೂ ಭಾರತೀಯ ತನಿಖಾ ಸಂಸ್ಥೆಗಳು ಪ್ರಕರಣವನ್ನು ಮುಂದುವರಿಸಲಿಲ್ಲ ಎಂದು ಫ್ರೆಂಚ್ ನಿಯತಕಾಲಿಕ ಆರೋಪಿಸಿದೆ” ಎಂದು ಅದರಲ್ಲಿ ಬರೆಯಲಾಗಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ. ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.


ಇದನ್ನೂ ಓದಿ: ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

0
"ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?"...