Homeಕರ್ನಾಟಕನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ 20,000 ಕೋಟಿ ಪ್ಯಾಕೇಜ್‌‌ ಘೋಷಿಸಲಾಗಿದೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ 1200 ಕೋಟಿ ಪರಿಹಾರ ಸಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವೀಟ್‌ನಲ್ಲಿ “ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್‌ ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?” ಎಂದು ಪ್ರಶ್ನಿಸಿದ್ದಾರೆ.

“ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

“ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಯಡಿಯೂರಪ್ಪ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?” ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ಯಾಕೇಜ್‌ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್‌ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್‌ ಹಿಗ್ಗುತ್ತದೆ ಎಂಬ ಭಯವೇ?” ಅವರು ರಾಜ್ಯ ಸರ್ಕಾರಕ್ಕೆ ಪಶ್ನಿಸಿದ್ದಾರೆ.

“2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

“ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಈಗ ನಿಗದಿ ಮಾಡಿರುವ 3 ತಿಂಗಳ ಅವಧಿಯ ಸಾಲ ಮರುಪಾವತಿಯ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗಿತ್ತು. ಮೂರು ತಿಂಗಳಿಗೆ ಸರ್ಕಾರವೇ ಸಾಲ ಮರು ಪಾವತಿ ಮಾಡಬೇಕಾಗಿತ್ತು ಅಥವಾ ಮರುಪಾವತಿಯನ್ನು ಮನ್ನಾ ಮಾಡಬೇಕಾಗಿತ್ತು. ನಾನು ರೈತರ ಸಾಲ ಮನ್ನಾ ಮಾಡಿ ಸರ್ಕಾರದಿಂದ ಹೊರ ಬಂದಿದ್ದೆ. ಹೀಗಾಗಿ ರೈತರ ಸಾಲದ ಹೊರೆ ದೊಡ್ಡದೇನೂ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಿತ್ಯ 6 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ 6 ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಕಂಟ್ರಾಕ್ಟರ್‌ ಅನ್ನು ಉದ್ದಾರ ಮಾಡುತ್ತಿದೆ. ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...