Homeಮುಖಪುಟ'ಶಾಂತಿ ಸುವ್ಯವಸ್ಥೆ ಇದ್ದಾಗ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ಹೆಚ್ಚುತ್ತದೆ..'; ಪೊಲೀಸರಿಗೆ ಸಿಎಂ ಕಿವಿಮಾತು

‘ಶಾಂತಿ ಸುವ್ಯವಸ್ಥೆ ಇದ್ದಾಗ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ಹೆಚ್ಚುತ್ತದೆ..’; ಪೊಲೀಸರಿಗೆ ಸಿಎಂ ಕಿವಿಮಾತು

- Advertisement -
- Advertisement -

‘ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ, ಶಾಂತಿ ಸುವ್ಯವಸ್ಥೆ ಇದ್ದಾಗ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ಹೆಚ್ಚುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕಿವಿಮಾತು ಹೇಳಿದರು.

ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದರು.

“ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ ಮಾನ ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ದವಿದೆ” ಎಂದರು.

“ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ. ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು” ಎಂದರು.

“ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು” ಎಂದು ಹೇಳಿದರು.

“ಪೇದೆಗಳು, ಎಸ್‌ಐಗಳು, ಇನ್ಸ್ ಪೆಕ್ಟರ್‌ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ” ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಇದನ್ನೂ ಓದಿ; ಸಿಟಿ ರವಿ ದುರ್ವರ್ತನೆ ಆರೋಪ; ಸಿದ್ದರಾಮಯ್ಯ ಅವರಿಂದ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...