Homeಮುಖಪುಟಮಾನವೀಯತೆ ಎಚ್ಚರಗೊಳ್ಳುವುದು ಯಾವಾಗ?: ಇಸ್ರೇಲ್‌ನ ಹಿಂಸಾಚಾರಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

ಮಾನವೀಯತೆ ಎಚ್ಚರಗೊಳ್ಳುವುದು ಯಾವಾಗ?: ಇಸ್ರೇಲ್‌ನ ಹಿಂಸಾಚಾರಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ನಡೆಸುತ್ತಿರುವ ಹಿಂಸಾಚಾರವನ್ನು ಟೀಕಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಮಾನವೀಯತೆಯು ಎಚ್ಚರಗೊಳ್ಳುವುದು ಯಾವಾಗ?” ಎಂದು ಪ್ರಶ್ನಿಸಿದ್ದಾರೆ.

ಪ್ಯಾಲೇಸ್ತನ್ ಮೇಲೆ ಇಸ್ರೇಲ್‌ ದಾಳಿ ತೀವ್ರಗೊಳಿಸಿದ್ದು, ಕಳೆದ 20 ದಿನಗಳಲ್ಲಿ 7,000 ಕ್ಕೂ ಹೆಚ್ಚು ಫೆಲೆಸ್ತೀನಿಯನ್ನರು ಇಸ್ರೇಲ್‌ ದಾಳಿಗೆ ಬಲಿಯಾಗಿದ್ದಾರೆ ಎಂದು ಗಾಝಾ ಆರೋಗ್ಯ ಇಲಾಖೆ ಹೇಳಿದೆ.

ಈ ಬಗ್ಗೆ ಎಕ್ಸಾನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ”ಗಾಝಾದಲ್ಲಿ 7,000 ಜನರನ್ನು ಕೊಂದ ನಂತರವೂ ರಕ್ತಪಾತ ಮತ್ತು ಹಿಂಸಾಚಾರದ ಚಕ್ರ ನಿಂತಿಲ್ಲ. ಈ 7,000 ಜನರಲ್ಲಿ 3,000 ಮುಗ್ಧ ಮಕ್ಕಳು” ಎಂದು ಪ್ರಿಯಾಂಕಾ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

”ಇನ್ನೂ ಎಷ್ಟು ಜೀವಗಳನ್ನು ಕಳೆದುಕೊಂಡ ನಂತರ, ಮಾನವೀಯತೆಯ ಸಾಮೂಹಿಕ ಪ್ರಜ್ಞೆಯು ಅಂತಿಮವಾಗಿ ಜಾಗೃತವಾಗುತ್ತದೆ? ಅಥವಾ ಅಂತಹ ಪ್ರಜ್ಞೆಯು ಈಗ ಉಳಿದಿಲ್ಲವೇ?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಹಮಾಸ್ ಗಾಝಾದಲ್ಲಿ 200ಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ಇರಿಸಿದೆ.

ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಸೇನಾದಾಳಿ ತೀವ್ರಗೊಂಡಿದ್ದು, ನಿನ್ನೆ ತಡರಾತ್ರಿ ಗಾಜಾಪಟ್ಟಿಗೆ ನುಗ್ಗಿದ್ದ ಇಸ್ರೇಲ್ ಸೇನಾ ಟ್ಯಾಂಕರ್ ಗಳು ಹಮಾಸ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ವಾಪಸ್ ಆಗಿವೆ.

ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್), ಗಿವಾಟಿ (ಕಾಲಾಳುಪಡೆ) ಬ್ರಿಗೇಡ್‌ನ ನೇತೃತ್ವದಲ್ಲಿ ರಾತ್ರೋರಾತ್ರಿ ಉತ್ತರ ಗಾಜಾ ಪಟ್ಟಿಯ ಪ್ರದೇಶದಲ್ಲಿ ಟ್ಯಾಂಕ್‌ಗಳನ್ನು ಬಳಸಿಕೊಂಡು ಉದ್ದೇಶಿತ ದಾಳಿಯನ್ನು ನಡೆಸಿತು. ಇದು ಮುಂದಿನ ಹಂತದ ಯುದ್ಧಕ್ಕಾಗಿ ಪ್ರದೇಶವನ್ನು ಸಿದ್ಧಪಡಿಸುವ ಅಂದರೆ ಗಾಜಾಪಟ್ಟಿಗೆ ಸೇನೆ ನುಗ್ಗಿಸುವ ಭಾಗವಾಗಿದೆ ಎಂದು IDF ಹೇಳಿದೆ.

ಕಾರ್ಯಾಚರಣೆಯ ಭಾಗವಾಗಿ, IDF, ಪಡೆಗಳು ಅನೇಕ ಭಯೋತ್ಪಾದಕರನ್ನು ಪತ್ತೆ ಮಾಡಿ ದಾಳಿ ಮಾಡಿತು. ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಪಡಿಸಿತು, ಟ್ಯಾಂಕ್ ವಿರೋಧಿ ಕ್ಷಿಪಣಿ ಉಡಾವಣೆ ಸ್ಥಾನಗಳನ್ನು ನಾಶಪಡಿಸಿತು ಮತ್ತು ಭವಿಷ್ಯದ ಕಾರ್ಯಾಚರಣೆಗಳಿಗೆ ಪ್ರದೇಶವನ್ನು ಸಿದ್ಧಪಡಿಸುವ ಕೆಲಸವನ್ನು ನಡೆಸಿತು. ಕಾರ್ಯಾಚರಣೆಯ ಕೊನೆಯಲ್ಲಿ IDF ಪಡೆಗಳು ಪ್ರದೇಶವನ್ನು ತೊರೆದು ಇಸ್ರೇಲ್ ಗಡಿಗೆ ವಾಪಸ್ ಆದವು.

ಇದೇ ವೇಳೆ ‘ಇಸ್ರೇಲ್ ತನ್ನ ಅಸ್ತಿತ್ವಕ್ಕಾಗಿ ಯುದ್ಧದಲ್ಲಿದೆ’ ಎಂಬ ತನ್ನ ಮಾತುಗಳನ್ನು ಪುನರುಚ್ಚರಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ಯುದ್ಧದ ವಿರುದ್ಧ ತನ್ನ ಗುರಿ ‘ದೇಶವನ್ನು ಉಳಿಸುವುದು’ ಮತ್ತು ಗಾಜಾದಲ್ಲಿ ಹಮಾಸ್ ಅನ್ನು ನಾಶಮಾಡುವ ನೆಲದ ಆಕ್ರಮಣವು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಭರವಸೆ ನೀಡಿದರು ಎಂದು ಟೈಮ್ಸ್ ಆಫ್ ಇಸ್ರೇಲ್ ಬುಧವಾರ ವರದಿ ಮಾಡಿದೆ.

ಇದನ್ನೂ ಓದಿ: ಇಸ್ರೇಲ್‌ ದಾಳಿಗೆ ಅಲ್ ಜಝೀರಾ ಬ್ಯೂರೋ ಮುಖ್ಯಸ್ಥರ ಕುಟುಂಬದ ನಾಲ್ವರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಶೇ. 20ರಿಂದ 38.75ಕ್ಕೆ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...