Homeಮುಖಪುಟ'ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ': ಅಮಿತ್ ಶಾ ಕರೆ

‘ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’: ಅಮಿತ್ ಶಾ ಕರೆ

- Advertisement -
- Advertisement -

ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಶನಿವಾರ (ಏ.5) ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮವಾದ ‘ಬಸ್ತಾರ್ ಪಾಂಡುಮ್‌’ನ ಸಮಾರೋಪ ಸಮಾರಂಭದಲ್ಲಿ ನಕ್ಸಲರನ್ನು ‘ಸಹೋದರರು’ ಎಂದು ಉಲ್ಲೇಖಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’ ಎಂದು ಕರೆ ನೀಡಿದರು.

“ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶ ಮತ್ತು ಇಡೀ ದೇಶದಲ್ಲಿ ಎಡಪಂಥೀಯ ಉಗ್ರವಾದವನ್ನು (ಎಲ್‌ಡಬ್ಲ್ಯುಇ) ನಿರ್ಮೂಲನೆ ಮಾಡುತ್ತೇವೆ” ಎಂಬ ಮಾರ್ಚ್ 2026ರ ಗಡುವನ್ನು ಅವರು ಪುನರುಚ್ಚರಿಸಿದರು.

“ಬಸ್ತಾರ್‌ನಲ್ಲಿ ಗುಂಡಿನ ದಾಳಿ ಮತ್ತು ಸ್ಫೋಟಗಳು ನಡೆಯುವ ಯುಗ ಕಳೆದುಹೋಗಿದೆ. ಈಗಲೂ, ಶಸ್ತ್ರಸಜ್ಜಿತರು ಮತ್ತು ಅಲ್ಲದವರು ಸೇರಿದಂತೆ ಎಲ್ಲಾ ನಕ್ಸಲ್ ಸಹೋದರರಲ್ಲಿ ನಾನು ವಿನಂತಿಸುತ್ತೇನೆ ‘ನಿಮ್ಮ ಶಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ, ನೀವು ನಮ್ಮವರು. ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ. ಈ ಪ್ರದೇಶ ಅಭಿವೃದ್ಧಿಯನ್ನು ಬಯಸುತ್ತಿದೆ” ಎಂದು ಅಮಿತ್ ಶಾ ಹೇಳಿದರು.

“ಬಸ್ತಾರ್‌ನಲ್ಲಿ ಕಳೆದ 50 ವರ್ಷಗಳಲ್ಲಿ ಮಾಡಲಾಗದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಐದು ವರ್ಷಗಳಲ್ಲಿ ಮಾಡಲು ಬಯಸಿದ್ದಾರೆ. ಆದರೆ, ಬಸ್ತಾರ್‌ನಲ್ಲಿ ಶಾಂತಿ ನೆಲೆಸಿದಾಗ, ಮಕ್ಕಳು ಶಾಲೆಗೆ ಹೋದಾಗ, ನಾವು ನಮ್ಮ ತಾಯಂದಿರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಾಗ, ಬುಡಕಟ್ಟು ಯುವಕರಲ್ಲಿ ಅಪೌಷ್ಟಿಕತೆ ಕಡಿಮೆಯಾದಾಗ, ಶಿಕ್ಷಣ, ಪ್ರತಿ ಹಳ್ಳಿಯಲ್ಲಿ ಆರೋಗ್ಯ ಸೇವೆಗಳು ದೊರೆತಾಗ, ತಹಸಿಲ್‌ಗಳಲ್ಲಿ ಆಸ್ಪತ್ರೆಗಳಿದ್ದಾಗ ಮತ್ತು ಪ್ರತಿ ಮನೆಗೆ ಪ್ರತಿ ತಿಂಗಳು ಏಳು ಕೆ.ಜಿ ಅಕ್ಕಿ ಸಿಕ್ಕಾಗ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಆರೋಗ್ಯ ವಿಮೆ ದೊರೆತಾಗ ಮಾತ್ರ ಇದು ಸಾಧ್ಯ. ಬಸ್ತಾರ್ ನಕ್ಸಲ್‌ ಮುಕ್ತವಾದರೆ ಇದು ಆಗಬಹುದು” ಎಂದಿದ್ದಾರೆ.

ನಕ್ಸಲರ ಶರಣಾಗತಿ ನೀತಿಯ ಬಗ್ಗೆ ಮಾತನಾಡಿದ ಅಮಿತ್‌ ಶಾ, “ನಕ್ಸಲ್ ಮುಕ್ತ ಎಂದು ಘೋಷಿಸಿಕೊಳ್ಳುವ ಪ್ರತಿಯೊಂದು ಗ್ರಾಮಕ್ಕೂ 1 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಲಾಗುವುದು. “ನಿಮ್ಮ ಹಳ್ಳಿಯಲ್ಲಿರುವ ಎಲ್ಲಾ ನಕ್ಸಲರಿಗೆ ಶರಣಾಗಲು ಹೇಳಿ” ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.

“ಇಂದು, ಶರಣಾದ ನಕ್ಸಲರು ಅಭಿವೃದ್ಧಿಗಾಗಿ ನಮಗೆ ಕಂಪ್ಯೂಟರ್‌ಗಳು ಬೇಕು, ಬಂದೂಕುಗಳಲ್ಲ. ಪೆನ್ನುಗಳು ಬೇಕು, ಐಇಡಿ ಅಥವಾ ಬಾಂಬ್‌ಗಳಲ್ಲ ಎಂದು ಅರ್ಥಮಾಡಿಕೊಂಡಿದ್ದಾರೆ. 2025ರ ಕಳೆದ ಮೂರು ತಿಂಗಳಲ್ಲಿ 521 ನಕ್ಸಲರು ಶರಣಾಗಿದ್ದಾರೆ. ಕಳೆದ ವರ್ಷ 881 ನಕ್ಸಲರು ಶರಣಾಗಿದ್ದರು” ಎಂದು ಅಮಿತ್ ಶಾ ಮಾಹಿತಿ ನೀಡಿದರು.

“ನಕ್ಸಲ್ ಪ್ರೊಪಗಂಡ ನಿಮ್ಮ ಯುವಜನರನ್ನು ಕೊಲ್ಲಲಿದೆ. ನನ್ನ ಸಹೋದರ, ಸಹೋದರಿಯರೇ ಯಾರೂ ಕೊಲ್ಲಲು ಬಯಸುವುದಿಲ್ಲ. ನೀವು ಏನೇ ಕೃತ್ಯಗಳನ್ನು (ಹಿಂಸೆ) ಮಾಡಿದ್ದರೂ, ನಿಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ. ನಿಮ್ಮ ಸುರಕ್ಷತೆ ಮತ್ತು ಭದ್ರತೆಯನ್ನು ನಾವು ಖಚಿತಪಡಿಸುತ್ತೇವೆ. ಬಂದೂಕುಗಳನ್ನು ಬಳಸುವ ಮೂಲಕ ಬಸ್ತಾರ್‌ನ ಅಭಿವೃದ್ಧಿ ತಡೆಯಲು ನಿಮಗೆ ಸಾಧ್ಯವಿಲ್ಲ. ಇನ್ನೂ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಲು ಬಯಸುವವರನ್ನು ಭದ್ರತಾ ಪಡೆಗಳು ನಿಭಾಯಿಸಲಿವೆ. ಏನೇ ಆಗಲಿ, ಮುಂದಿನ ಮಾರ್ಚ್ ವೇಳೆಗೆ ಇಡೀ ದೇಶ ನಕ್ಸಲ್‌ ಮುಕ್ತವಾಬೇಕು ಎಂದರು.

ಬಸ್ತಾರ್‌ನಲ್ಲಿ ತಾವು ಕಾಣಬಯಸುವ ಅಭಿವೃದ್ಧಿಯ ಕುರಿತು ಮಾತನಾಡಿದ ಶಾ, “ಅಭಿವೃದ್ಧಿ ಎಂದರೆ ಸುಕ್ಮಾದ ಸಬ್-ಇನ್ಸ್‌ಪೆಕ್ಟರ್, ಬಸ್ತಾರ್‌ನ ಬ್ಯಾರಿಸ್ಟರ್, ದಂತೇವಾಡದ ವೈದ್ಯರು ಮತ್ತು ಕಾಂಕೇರ್‌ನ ಕಲೆಕ್ಟರ್. ನಾವು ಕಷ್ಟಪಟ್ಟು ಕೆಲಸ ಮಾಡಿದರೆ ಮತ್ತು ಯಾರಿಗೂ ಹೆದರದಿದ್ದರೆ ಈ ಕನಸುಗಳು ನನಸಾಗುತ್ತವೆ. ನಿಮ್ಮ ಸುರಕ್ಷತೆಯನ್ನು ಈ ಡಬಲ್ ಇಂಜಿನ್ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ಅಮಿತ್ ಶಾ ಹೇಳಿದರು.

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...