Homeಮುಖಪುಟದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

- Advertisement -
- Advertisement -

‘ಇಡೀ ದೆಹಲಿಯಲ್ಲಿ ಬೆಂಕಿಯೇ ಕಾಣುತ್ತಿದೆ. ಶವಗಳನ್ನು ಪಾಳೆ ಹಚ್ಚಿ ಸುಡಲಾಗುತ್ತಿದೆ. ಯಾರಾದರೂ ದಿಲ್ಲಿವಾಲಾ ದೆಹಲಿ ಬಿಜೆಪಿಯವರನ್ನು ಎಲ್ಲಿಯಾದರೂ ಕಂಡಿರಾ?’ ಎಂದು ಆರ್‌ಎಸ್‌ಎಸ್‌ನ ದೆಹಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ರಾಜೀವ್ ಟುಲಿ ಟ್ವೀಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇಗವಾಗಿ ಏರುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ವಿಫಲತೆಯಿಂದಾಗಿ ದೆಹಲಿಯು ಉಸಿರುಗಟ್ಟುತ್ತಲೇ ಇರುವುದರಿಂದ, ಆರ್‌ಎಸ್‌ಎಸ್ ಕಾರ್ಯಕಾರಿಣಿ ರಾಜೀವ್ ಅವರು ದೆಹಲಿ ಬಿಜೆಪಿಯ ಅನುಪಸ್ಥಿತಿ ಕುರಿತು ಟೀಕೆ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಯ ಬಿಜೆಪಿ ಎಲ್ಲಿದೆ? ಅಥವಾ ರಾಜ್ಯ ಘಟಕವನ್ನು ವಿಸರ್ಜಿಸಲಾಗಿದೆಯೇ ಎಂದು ಆರ್‌ಎಸ್‌ಎಸ್ ದೆಹಲಿ ಘಟಕದ ಮಾಜಿ ಪ್ರಾಂತ್ ಪ್ರಚಾರ್ ಪ್ರಮುಖ್ ರಾಜೀವ್ ಟುಲಿ ಕಿಡಿ ಕಾರಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರಾಜೀವ್ ಟುಲಿಯವರ ಈ ಟ್ವೀಟ್, ಕೋವಿಡ್ ಎರಡನೇ ಅಲೆ ನಿರ್ವಹಿಸುವುದರಲ್ಲಿ ಸಂಪೂರ್ಣ ವಿಫಲವಾದ ಮೋದಿ ಸರಕಾರದ ಬಗ್ಗೆ ಸಂಘ ಪರಿವಾರದಲ್ಲಿ ಹೆಚ್ಚುತ್ತಿರುವ ಅಸಹನೆ ಮತ್ತು ಅಸಹಾಯಕತೆಯ ಪ್ರತಿಬಿಂಬವಾಗಿದೆ ಎನ್ನಲಾಗಿದೆ.

“ದೆಹಲಿಯಲ್ಲಿಯೂ ಸಹ, ನಾವು ಸಂಘಟನೆಯಾಗಿ ಸಹಾಯ ಮಾಡುವುದು ಕಾಣಿಸುತ್ತಿಲ್ಲ… ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದೆ’ ಎಂದು ದೆಹಲಿಯ ಬಿಜೆಪಿ ಮುಖಂಡರೊಬ್ಬರನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ತಿಳಿಸಿದೆ.

ರಾಜೀವ್ ಅವರ ಟ್ವೀಟ್ ಹೇಳಿಕೆ ಬಗ್ಗೆ ಸಂಘದ ರಾಷ್ಟ್ರೀಯ ಪ್ರಚಾರದ ಉಸ್ತುವಾರಿ ಸುನಿಲ್ ಅಂಬೇಕರ್ ಅವರನ್ನು ಪ್ರಶ್ನಿಸಿದಾಗ, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು. ಆದರೆ ಇದು ಸಂಘದ ಅಧಿಕೃತ ಹೇಳಿಕೆ ಅಲ್ಲ” ಎಂದು ತಿಳಿಸಿದರು ಎಂದು ಪಿಟಿಐ ಉಲ್ಲೇಖಿಸಿದೆ.

ಸಂಘ ಮತ್ತು ಅದರ ಅಂಗಸಂಸ್ಥೆ ಸೇವಾ ಭಾರತಿಯವರು ಸಂತ್ರಸ್ತ ಪ್ರದೇಶಗಳಲ್ಲಿ ಕುಟುಂಬಗಳಿಗೆ ಪರಿಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಅಂಬೇಕರ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಮುಖಂಡರೊಬ್ಬರು, ಬಿಜೆಪಿ ಸಂಸದರು ಮತ್ತು ಅದರ ಯುವ ಕಾರ್ಯಕರ್ತರು ಬಿಡಿಬಿಡಿಯಾಗಿ ಜನರಿಗೆ ಸಹಾಯ ಮಾಡುತ್ತಿದ್ದರೂ, ಒಂದು ಘಟಕವಾಗಿ ಕಾರ್ಯನಿರ್ವಹಿಸಲು ಸಮನ್ವಯತೆ ಇರಬೇಕಿತ್ತು’ ಎಂದಿದ್ದು, ಹಿಂದಿನ ಸಲ ಮೊದಲ ಅಲೆ ಸಂದರ್ಭದಲ್ಲಿ, ಜನರಿಗೆ ಆಹಾರ ಮತ್ತು ಪಡಿತರ ಅಗತ್ಯವಿತ್ತು, ಈ ಸಮಯದಲ್ಲಿ ಆಮ್ಲಜನಕ, ಆಸ್ಪತ್ರೆ ಹಾಸಿಗೆಗಳು ಮತ್ತು ರಿಮೆಡೆಸಿವಿರ್ ಕೊರತೆಯಿದೆ, ಇದನ್ನು ಆಡಳಿತ ಮಾತ್ರ ಪೂರೈಸಬಲ್ಲದು. ಆದ್ದರಿಂದ, ವಿರೋಧ ಪಕ್ಷವು ದೊಡ್ಡ ಸಂಖ್ಯೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ನಿರೀಕ್ಷಿಸುವುದು ತಪ್ಪು ಎಂದಿದ್ದಾರೆ.

ರಾಜೀವ್ ಟುಲಿಯವರ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ ಮತ್ತೊಬ್ಬ ಬಿಜೆಪಿ ನಾಯಕ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ನಮ್ಮ ಪಕ್ಷವು (ಬಿಜೆಪಿ), ಮನೆಯಲ್ಲಿ ಕ್ಯಾರೆಂಟೈನ್ ಮಾಡಲು ಸಾಧ್ಯವಾಗದ ಜನರಿಗೆ ಕಲ್ಯಾಣ ಮಂಟಪಗಳು ಅಥವಾ ಶಾಲೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಬಹುದಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆದರೆ, ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ, ರಾಜೀವ್ ಟುಲಿಯವರ ಟ್ವೀಟ್‌ಗಳ ಬಗ್ಗೆ ಕೇಳಿದಾಗ, ಈ ಟುಲಿ ಎಂಬುವವರು ಯಾರೆಂಬುದೇ ಗೊತ್ತಿಲ್ಲ ಮತ್ತು ಅವರ ಟ್ವೀಟ್‌ಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದರು.

ಬಿಜೆಪಿಯ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ಅವರು ಟುಲಿಯವರ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಏಪ್ರಿಲ್ 21 ರಿಂದ ಮೂರು ಸಹಾಯವಾಣಿ ಸಂಖ್ಯೆಗಳು 24*7 ಚಾಲನೆಯಲ್ಲಿವೆ. ಜನರಿಗೆ ವೈದ್ಯಕೀಯ ಸಲಹೆ ಮತ್ತು ಆಹಾರದ ವ್ಯವಸ್ತೆ ಮಾಡಲು ಈ ಸಹಯವಾಣಿ ಆರಂಭಿಸಲಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...