Homeಕರ್ನಾಟಕಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ವೈರಸ್‌ನಿಂದ ಉಂಟಾದ ಸಂಕಷ್ಟಗಳು ಮುಗಿಯುತ್ತಿವೆ ಎನ್ನುವಾಗಲೇ ಮತ್ತೆ ಸೋಂಕಿತ ಪ್ರಕರಣಗಳ ಸಂಖ್ಯೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ಹಲವು ಜಿಲ್ಲಾಕೇಂದ್ರಗಳು ಮತ್ತೆ ಲಾಕ್‌ಡೌನ್‌ ಆಗುತ್ತಿವೆ. ದೇಶದಲ್ಲಿ ಒಂದೇ ದಿನ ೪೦ ಸಾವಿರ ಪ್ರಕರಣಗಳು ದಾಖಲಾಗಿವೆ. ಇದು ಸರ್ಕಾರಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ನಡುವೆ, ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಸಂಖ್ಯೆ ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ, ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯ ಮಾಡಬೇಕಾಗಿದೆ ಎಂಬ ಕುಂಟು ನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಸಿಎಂ ಯಡಿಯೂರಪ್ಪನವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲವೇ? ಯಾಕೆ ನಿಯಂತ್ರಣ ತಪ್ಪಿದೆ? ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ

ಕೊರೊನಾ ನಿರ್ವಹಣೆಗಾಗಿ 5,372 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ. ಆದರೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, 2ನೇ ಅಲೆಯ ಆತಂಕ ಹೆಚ್ಚಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 1,488 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 11,359 ಜನರು ನಿನ್ನೆ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 341 ಜನರು ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರೊಂದರಲ್ಲೇ ನಿನ್ನೆ 925 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...