Homeಕರ್ನಾಟಕನಾಯಕರೇ ಇಲ್ಲದ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ?: ಕಾಂಗ್ರೆಸ್ ಪ್ರಶ್ನೆ

ನಾಯಕರೇ ಇಲ್ಲದ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ?: ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಕರ್ನಾಟಕದಲ್ಲಿ ಚುನಾವಣೆ ನಡೆದು ಹೊಸ ಸರ್ಕಾರ ರಚನೆಯಾಗಿ ಸುಮಾರು ಒಂದು ತಿಂಗಳಾಗಿದರೂ ಈ ವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ರಾಜ್ಯ ಬಿಜೆಪಿ ಬಗ್ಗೆ ಕಾಂಗ್ರೆಸ್ ಕುಹಕವಾಡಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಕಾಂಗ್ರೆಸ್, ”ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು, ಮನೆಯಲ್ಲಿ ಕುಂತವರು, ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಒಬ್ಬನೇ ಒಬ್ಬ ವ್ಯಕ್ತಿ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಬಿಜೆಪಿಯಲ್ಲಿ? ನಾಯಕರೇ ಇಲ್ಲದ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ!” ಎಂದು ಪ್ರಶ್ನಿಸಿದೆ.

ಈ ಹಿಂದೆಯೂ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನೇಮಕ ಮಾಡದ ವಿಚಾರವಾಗಿ ಕಾಂಗ್ರೆಸ್ ಪಕ್ಷ ಬಿಜೆಪಿಯ ಕಾಲೆಳೆದಿತ್ತು. ”ನಾವು ಗೆದ್ದೂ ಆಯ್ತು,ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು,ಸಚಿವ ಸಂಪುಟವೂ ರೆಡಿ ಆಯ್ತು,ಸರ್ಕಾರದ ರಚನೆಯೂ ಆಯ್ತು,ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿ ಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!ನೈತಿಕತೆ ಇರದಿದ್ದರೇನಂತೆ,ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಟ್ವೀಟ್ ಮಾಡಿ ಲೇವಡಿ ಮಾಡಿತ್ತು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದ್ದು, ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಹಾಗಾಗಿ ರಾಜ್ಯ ಬಿಜೆಪಿ ನಾಯಕರೆಲ್ಲೂ ಗ್ಯಾರೆಂಟಿಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ನಾಯಕರೇ ಇಲ್ಲದ ಕರ್ನಾಟಕ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ?’ ಎಂದು ಕಾಂಗ್ರೆಸ್ ತಮಾಷೆ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...