ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿರುವ ಪಕ್ಷಗಳ ಪಟ್ಟಿ ಇಲ್ಲಿದೆ
PC: PTI

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್ 27 ರಂದು ರೈತರು ಕರೆ ನೀಡಿರುವ ಭಾರತ್ ಬಂದ್‌ಗೆ ಹಲವು ರಾಜಕೀಯ ಪಕ್ಷಗಳು ಸಂಪೂರ್ಣ ಬೆಂಬಲ ಸೂಚಿಸಿವೆ. ಅವುಗಳ ಪಟ್ಟಿ ಇಲ್ಲಿದೆ.

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್‌ಗೆ  ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಎಡಪಕ್ಷಗಳು ಈಗಾಗಲೇ ಬೆಂಬಲವನ್ನು ಘೋಷಿಸಿವೆ.

ವೈಎಸ್ಆರ್ ಕಾಂಗ್ರೆಸ್

ವೈಎಸ್ಆರ್ ಕಾಂಗ್ರೆಸ್ ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ರೈತರು ಕರೆ ನೀಡಿರುವ ಸೆಪ್ಟೆಂಬರ್ 27 ಭಾರತ್ ಬಂದ್‌ಗೆ ಬೆಂಬನ ನೀಡಿದೆ. ಆಂಧ್ರಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ (ನಾನಿ) ಶನಿವಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ರಾಜ್ಯ ಸರ್ಕಾರ ರೈತರ ಪ್ರತಿಭಟನೆಗೆ ಸಂಪೂರ್ನ ಬೆಂಬಲ ನೀಡಿದೆ. ಜೊತೆಗೆ ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಕಾರ್ಮಿಕರ ಪ್ರತಿಭಟನೆಯನ್ನು ಬೆಂಬಲಿಸಿ, ಕೇಂದ್ರ ಸರ್ಕಾರದ ಖಾಸಗೀಕರಣ ಪ್ರಯತ್ನಗಳನ್ನು ವಿರೋಧಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ಬೆಂಬಲ

ಕಾಂಗ್ರೆಸ್

ಭಾರತ್ ಬಂದ್‌ಗೆ ತನ್ನ ಬೆಂಬಲ ನೀಡಿರುವ ಕಾಂಗ್ರೆಸ್, ಪ್ರತಿಭಟನಾಕಾರರೊಂದಿಗೆ ಸರ್ಕಾರ ಚರ್ಚೆಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿದೆ.

“ಶಾಂತಿಯುತ” ಮುಷ್ಕರಕ್ಕೆ ಕರೆ ನೀಡಿರುವ ಕಾಂಗ್ರೆಸ್ ವಕ್ತಾರ ಗೌರವ ವಲ್ಲಭ್, ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಗಳು ನೀಡಿದ ಭಾರತ್ ಬಂದ್‌ಗೆ ಪಕ್ಷ ಮತ್ತು ಅದರ ಎಲ್ಲಾ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ. ಪ್ರತಿ ರೈತನಿಗೂ ಎಮ್‌ಎಸ್‌ಪಿಯನ್ನು ಕಾನೂನುಬದ್ಧ ಹಕ್ಕಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಆಮ್ ಆದ್ಮಿ ಪಕ್ಷ

ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ನೀಡಿದ ಭಾರತ್ ಬಂದ್ ಕರೆಗೆ ಎಎಪಿ ಸಹ ಬೆಂಬಲ ನೀಡಿದೆ. ರೈತರಿಗೆ ಒಗ್ಗಟ್ಟಿನ ಈ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಪಕ್ಷವು ಬೆಂಬಲವನ್ನು ಘೋಷಿಸಿದೆ ಎಂದು ಎಎಪಿ ನಾಯಕ ರಾಘವ್ ಚಡ್ಡಾ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷವು ರೈತರ ದೆಹಲಿ ಚಲೋ ಆರಂಭವಾದಾಗಿನಿಂದ ರೈತರಿಗೆ ಬೆಂಬಲವಾಗಿ ನಿಂತಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

ತೆಲುಗು ದೇಶಂ ಪಕ್ಷ ಮತ್ತು ಎಡಪಕ್ಷಗಳು

ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಲು ಆಂಧ್ರಪ್ರದೇಶದ ಕಮ್ಯುನಿಸ್ಟ್ ಪಾರ್ಟಿ ಇಂಡಿಯಾ (ಸಿಪಿಐ) ಕಚೇರಿಯಲ್ಲಿ ಎಡ ಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಯಿಂದ ಸಭೆ ನಡೆದಿದೆ.

ಸಿಪಿಐ ರಾಜ್ಯ ನಾಯಕ ದೊಣೆಪುಡಿ ಶಂಕರ್, “ದೆಹಲಿಯಲ್ಲಿ ರೈತರು ಒಂಬತ್ತು ತಿಂಗಳಿಂದ ಆಂದೋಲನ ನಡೆಸುತ್ತಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸಲು ಈ ಭಾರತ್ ಬಂದ್ ನಡೆಯಲಿದೆ” ಎಂದು ಹೇಳಿದ್ದರು.

ಜಂಟಿ ಹೇಳಿಕೆಯಲ್ಲಿ, ಎಡಪಕ್ಷಗಳಾದ ಸಿಪಿಐ, ಸಿಪಿಐ (ಎಂ), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ-ಲೆನಿನಿಸ್ಟ್)-ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುವಂತೆ ಜನರನ್ನು ಕೋರಿದೆ.

ಆರ್‌ಜೆಡಿ ನಾಯಕ ತೇಜಶ್ವಿ ಯಾದವ್

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಸೆಪ್ಟೆಂಬರ್ 27 ರಂದು ಭಾರತ್ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಗೆ ಬೆಂಬಲ ನೀಡಿದ್ದಾರೆ.

ಕೇರಳ ಸರ್ಕಾರ: ಎಲ್‌ಡಿಎಫ್ 

ಕೇರಳದ ಆಡಳಿತಾರೂಢ ಎಲ್‌ಡಿಎಫ್ ಕೂಡ ರೈತರಿಗೆ ಬೆಂಬಲ ಸೂಚಿಸಲು, ಸೆಪ್ಟೆಂಬರ್ 27 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ತಿರುವನಂತಪುರಂನಲ್ಲಿ ಆಡಳಿತ ಪಕ್ಷದ ಮೈತ್ರಿಕೂಟದ ನಾಯಕರ ಸಭೆಯ ನಂತರ ಸಿಪಿಐ (ಎಂ) ಹಂಗಾಮಿ ಕಾರ್ಯದರ್ಶಿ ಎ ವಿಜಯರಾಘವನ್ ಬೆಂಬಲ ಘೋಷಿಸಿರುವುದಾಗಿ ಹೇಳಿದ್ದಾರೆ.

“ಪ್ರತಿಭಟನೆಯಲ್ಲಿ ಐದು ಲಕ್ಷ ಜನರು ಭಾಗವಹಿಸಲಿದ್ದಾರೆ. ಸಾರಿಗೆ ನೌಕರರು, ಬ್ಯಾಂಕ್ ಉದ್ಯೋಗಿಗಳು ಮತ್ತು ರೈತ ಸಂಘಟನೆಗಳು ಸೇರಿದಂತೆ 100 ಕ್ಕೂ ಹೆಚ್ಚು ಸಂಘಟನೆಗಳು ಎಲ್‌ಡಿಎಫ್ ಆಂದೋಲನಕ್ಕೆ ತಮ್ಮ ಬೆಂಬಲವನ್ನು ನೀಡಿವೆ” ಎಂದು ವಿಜಯರಾಘವನ್ ಹೇಳಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) 

“ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ತನ್ನ ಒಗ್ಗಟ್ಟನ್ನು ಘೋಷಿಸುತ್ತದೆ” ಎಂದು SDPI ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಕ್ಷವು ಆರಂಭದಿಂದಲೂ ರೈತರ ಆಂದೋಲನವನ್ನು ಬೆಂಬಲಿಸುತ್ತಿದೆ ಮತ್ತು ಕೃಷಿ ಕಾಯಿದೆಗಳ ವಿರುದ್ಧ ದೇಶದಾದ್ಯಂತ ನೂರಾರು ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಸೋಶಿಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್)

ಸೋಶಿಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷವೂ ಭಾರತ ಬಂದ್ ಸಂಪೂರ್ಣ ಬೆಂಬಲ ಘೋಷಣೆ ಮಾಡಿದೆ. ಕರ್ನಾಟಕದ ಐದು ಎಡ ಪಕ್ಷಗಳು ಮತ್ತು ಎರಡು ಪ್ರಜಾತಾಂತ್ರಿಕ ಪಕ್ಷಗಳು ಹೋರಾಟಕ್ಕೆ ಬೆಂಬಲ ಘೋಷಣೆ ಮಾಡಿ, ರಾಜ್ಯದಾದ್ಯಂತ ಸೆ.24ರಂದು ಸೌಹಾರ್ದ ಪ್ರದರ್ಶನ ನಡೆಸಿವೆ.

ಸ್ವರಾಜ್ ಇಂಡಿಯಾ

ಯೋಗೇಂದ್ರ ಯಾದವ್ ಅವರ ಸ್ವರಾಜ್ ಇಂಡಿಯಾ ಪಕ್ಷವೂ ರೈತ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಿದೆ.

ಕರ್ನಾಟಕ ರಾಷ್ಟ್ರ ಸಮಿತಿ

ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ಅವರ ಕರ್ನಾಟಕ ರಾಷ್ಟ್ರ ಸಮಿತಿಯು ಭಾರತ್ ಬಂದ್‌ಗೆ ಬೆಂಬಲ ನೀಡಿದೆ.

ಬ್ಯಾಂಕ್ ಅಧಿಕಾರಿಗಳ ಸಂಘ

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಅಲ್‌ಬಿಒಸಿ) ಸೋಮವಾರ ನಡೆಯಲಿರುವ ಭಾರತ್ ಬಂದ್‌ಗೆ ತನ್ನ ಬೆಂಬಲವನ್ನು ನೀಡಿದೆ. ರೈತರ ಬೇಡಿಕೆಗಳ ಕುರಿತು ಒಕ್ಕೂಟ ಸರ್ಕಾರ ಸಂವಾದ ನಡೆಸಬೇಕು ಮತ್ತು   ಮೂರು ವಿವಾದಿತ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದೆ.

ರಾಜಕೀಯ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು, ರೈತ ಸಂಘಗಳು, ಕಾರ್ಮಿಕ ಸಂಘಟನೆಗಳು, ಯುವಕರು, ಶಿಕ್ಷಕರು, ಕಾರ್ಮಿಕರು ಮತ್ತು ಜನಪರ ಸಂಘಟನೆಗಳು ಸೇರಿದಂತೆ ಹಲವು ವಿವಿಧ ಸಂಸ್ಥೆಗಳು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿರುವ ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿವೆ.


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

3 COMMENTS

  1. ರೈತರ ಕರೆಗೆ ಸಂಪೂರ್ಣ ಬೆಂಬಲ ಜೈ ಜವಾನ್ ಜೈ ಕಿಸಾನ್

LEAVE A REPLY

Please enter your comment!
Please enter your name here