Homeಮುಖಪುಟಜನರು ಮನರೇಗಾ ಕೆಲಸಕ್ಕಾಗಿ ಅಲೆಯುತ್ತಿದ್ದರೆ, ಪ್ರಧಾನಿ ಚುನಾವಣಾ ಪ್ರಚಾರದಲ್ಲಿ ಮುಳಗಿದ್ದಾರೆ: ಖರ್ಗೆ

ಜನರು ಮನರೇಗಾ ಕೆಲಸಕ್ಕಾಗಿ ಅಲೆಯುತ್ತಿದ್ದರೆ, ಪ್ರಧಾನಿ ಚುನಾವಣಾ ಪ್ರಚಾರದಲ್ಲಿ ಮುಳಗಿದ್ದಾರೆ: ಖರ್ಗೆ

- Advertisement -
- Advertisement -

ಗ್ರಾಮೀಣ ಭಾರತದಲ್ಲಿ ಜನರು ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ಅಲೆಯುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಚುನಾವಣೆ ನಡೆಯಲಿರುವ ರಾಜ್ಯಗಳ ಪ್ರವಾಸದ ವೇಳೆ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತ ತಮ್ಮ ವೈಫಲ್ಯವನ್ನು ಮರೆಮಾಚುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಆರೋಪಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆ, ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ ವಿಷಯಕ್ಕೆ ಸಂಬಂಧಿಸಿದಂತೆ ಅಶೋಕ್ ಗೆಹಲೋತ್ ನೇತೃತ್ವದ ರಾಜಸ್ಥಾನ ಸರ್ಕಾರದ ವಿರುದ್ಧ ಗುರುವಾರ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಖರ್ಗೆ ಅವರು, ”ಪ್ರಧಾನಿಯವರು ಕಾಂಗ್ರೆಸ್ ಪಕ್ಷವನ್ನು ಮನಸೋ ಇಚ್ಚೆ ಟೀಕಿಸಲಿ, ಆದರೆ, ಬಡಜನರ ಹಕ್ಕುಗಳನ್ನು ಕಸಿದುಕೊಳ್ಳಬಾರದು. ‘ಆದಾಯ ಕಡಿಮೆಯಾಗಿ ಹಣದುಬ್ಬರ ಏರಿಕೆಯಾಗಿರುವ ಕಾರಣ ಬಡ ಜನರು ಕೆಲಸಕ್ಕಾಗಿ ಅಲೆಯುತ್ತಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ಕೆಲಸ ನೀಡಿ ಎಂಬ ಬೇಡಿಕೆ ಹೆಚ್ಚುತ್ತಿದೆ. ಆದರೆ, ಬಜೆಟ್‌ನಲ್ಲಿ ಅದಕ್ಕೆ ಮೀಸಲಿಡುವ ಅನುದಾನವನ್ನು ಕಡಿತ ಮಾಡಲಾಗಿದೆ” ಎಂದು ಆರೋಪಿಸಿದರು.

”ಗ್ರಾಮೀಣ ಭಾಗದಲ್ಲಿ ಆರ್ಥಿಕ ಬಿಕ್ಕಟ್ಟು ಹೆಚ್ಚಾಗಿದೆ. ಹೀಗಾಗಿ ಸೆಪ್ಟೆಂಬರ್‌ನಲ್ಲಿ ಮನರೇಗಾ ಯೋಜನೆಯ ಬೇಡಿಕೆ ಶೇ 30ರಷ್ಟು ಹೆಚ್ಚಾಗಿದೆ. ಪರಿಸ್ಥಿತಿ ಹೀಗಿರುವಾಗ ಮನರೇಗಾ ಅನುದಾನ ಶೇ 4ರಷ್ಟು ಮಾತ್ರ ಬಾಕಿ ಉಳಿದಿದೆ. ಈ ವಿಷಯದಲ್ಲಿ ಕ್ರಮ ಕೈಗೊಳ್ಳುವುದು ಬಿಟ್ಟು ಪ್ರಧಾನಿ ಮೋದಿ ಅವರು ಚುನಾವಣಾ ರಾಜ್ಯಗಳಲ್ಲಿ ಕಾಂಗ್ರೆಸ್‌ ಗೆ ಶಾಪ ಹಾಕುತ್ತಿದ್ದಾರೆ, ತಮ್ಮ ಭಾಷಣದ ಮೂಲಕ ತಮ್ಮ ವೈಫಲ್ಯವನ್ನು ಮುಚ್ಚಿ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

2023ರ ಬಜೆಟ್‌ನಲ್ಲಿ ಮೋದಿ ಸರ್ಕಾರವು ಮನರೇಗಾ ಯೋಜನೆಗೆ ಮೀಸಲಿಟ್ಟ ಅನುದಾನದ ಪ್ರಕಾರ ಶೇ 33ರಷ್ಟನ್ನು ಕಡಿತ ಮಾಡಿದೆ ಎನ್ನುವುದು ಈ ದೇಶದ ಜನರಿಗೆ ನೆನಪಿದೆ” ಎಂದು ಹೇಳಿದರು.

ಇದನ್ನೂ ಓದಿ: ಪೋಸ್ಟರ್ ವಾರ್: ರಾಹುಲ್‌ಗೆ ರಾವಣ ಎಂದ ಬಿಜೆಪಿ; ‘ಮೋದಿ ಸುಳ್ಳುಗಾರ’- ಕಾಂಗ್ರೆಸ್ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...