ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿರುವ ಜನರು ಭಾರತವನ್ನು ತೊರೆದು ಪಾಕಿಸ್ತಾನಕ್ಕೆ ಹೋಗಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಶುಕ್ರವಾರ ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಗೆ ಗುಪ್ತಚರ ವೈಫಲ್ಯ ಕಾರಣ ಎಂದು ಹೇಳುವವರ ವಿರುದ್ಧವು ಅವರು ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರದ ಹಿತಾಸಕ್ತಿಯಿಲ್ಲದವರು
ಆಪರೇಷನ್ ಸಿಂಧೂರ್ ವಿಜಯೋತ್ಸವವನ್ನು ಆಚರಿಸಲು ಬಿಜೆಪಿ ನಡೆಸಿದ ರಾಷ್ಟ್ರಧ್ವಜ ಮೆರವಣಿಗೆಯಲ್ಲಿ ಅವರು ಮಾತನಾಡುತ್ತಿದ್ದರು. “ತಮಿಳುನಾಡಿನ ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಆಪರೇಷನ್ ಸಿಂಧೂರ್ ಅನ್ನು ಟೀಕಿಸುತ್ತಿದ್ದಾರೆ. ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಗೆ ಗುಪ್ತಚರ ವೈಫಲ್ಯ ಕಾರಣ ಎಂದು ಅವರು ಹೇಳುತ್ತಾರೆ ಮತ್ತು ನಮ್ಮ ದೇಶದಲ್ಲಿ ವಾಸಿಸುತ್ತಿದ್ದರೂ ಪಾಕಿಸ್ತಾನದ ಜನರ ಬಗ್ಗೆ ಹೆಚ್ಚು ಚಿಂತಿತರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.
“ತಮಿಳುನಾಡಿನ ಜನರು ಪಾಕಿಸ್ತಾನವನ್ನು ಬೆಂಬಲಿಸುವ ಕಾಮೆಂಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇದನ್ನು ಖಂಡಿಸಬೇಕು. ಅವರು ಅದನ್ನು ಮಾಡದಿದ್ದರೆ, ಅವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದಾರೆ ಎಂದು ನಾವು ಭಾವಿಸಬೇಕಾಗುತ್ತದೆ,” ಎಂದು ನಾಗೇಂದ್ರನ್ ಹೇಳಿದ್ದಾರೆ.
ರ‍್ಯಾಲಿಯನ್ನು ನಾಗೇಂದ್ರನ್ ಮತ್ತು ಪಕ್ಷದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಉದ್ಘಾಟಿಸಿದ್ದರು. ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ರಾಷ್ಟ್ರಧ್ವಜವನ್ನು ಹಿಡಿದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು ಎಂದು ವರದಿಯಾಗಿದೆ. ರಾಷ್ಟ್ರದ ಹಿತಾಸಕ್ತಿಯಿಲ್ಲದವರು
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮಧ್ಯಪ್ರದೇಶದ ಆದಿವಾಸಿ ಯುವಕನ ಕಸ್ಟಡಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ
ಮಧ್ಯಪ್ರದೇಶದ ಆದಿವಾಸಿ ಯುವಕನ ಕಸ್ಟಡಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

