Homeಮುಖಪುಟಸಂಸತ್‌ನಿಂದ ಅಮಾನತ್ತಾದ 92 ವಿಪಕ್ಷ ಸಂಸದರು ಯಾರು? ಇಲ್ಲಿದೆ ಮಾಹಿತಿ

ಸಂಸತ್‌ನಿಂದ ಅಮಾನತ್ತಾದ 92 ವಿಪಕ್ಷ ಸಂಸದರು ಯಾರು? ಇಲ್ಲಿದೆ ಮಾಹಿತಿ

- Advertisement -
- Advertisement -

ಸೋಮವಾರ ಒಂದೇ ದಿನ ಸಂಸತ್‌ನ ಉಭಯ ಸದನಗಳಿಂದ ಒಟ್ಟು 78 ಸಂಸದರನ್ನು ಅಮಾನತು ಮಾಡಲಾಗಿದೆ. ಭಾರತೀಯ ಸಂಸತ್‌ನ ಇತಿಹಾಸದಲ್ಲಿ ಒಂದೇ ದಿನ ಇಷ್ಟೊಂದು ಸಂಸದರನ್ನು ಅಮಾನತು ಮಾಡಿರುವುದು ಇದೇ ಮೊದಲು.

ಡಿಸೆಂಬರ್ 14ರಂದು ರಾಜ್ಯಸಭೆಯ ಒಬ್ಬರು ಮತ್ತು ಲೋಕಸಭೆಯ 13 ಜನರು ಸೇರಿ ಒಟ್ಟು 14 ಸಂಸದರನ್ನು ಅಮಾನತು ಮಾಡಲಾಗಿತ್ತು. ಡಿ.18 ಸೋಮವಾರ ರಾಜ್ಯಸಭೆಯಿಂದ 45 ಮತ್ತು ಲೋಕಸಭೆಯಿಂದ 33 ಸಂಸದರು ಸೇರಿ 78 ಮಂದಿಯನ್ನು ಅಮಾನತು ಮಾಡಲಾಗಿದೆ. ಈ ಮೂಲಕ ಅಮಾನತ್ತಾದ ಒಟ್ಟು ಸಂಸದರ ಸಂಖ್ಯೆ 92 ಆಗಿದೆ.

ಹಾಗಾದರೆ, ಲೋಕಸಭೆ ಮತ್ತು ರಾಜ್ಯಸಭೆಯಿಂದ ಅಮಾನತ್ತಾದ ಸಂದರು ಯಾರೆಲ್ಲ, ಅವರ ಪಕ್ಷ ಮತ್ತು ರಾಜ್ಯ ಯಾವುದು ನೋಡೊಣ..

ಡಿಸೆಂಬರ್ 14ರಂದು ಲೋಕಸಭೆ ಮತ್ತು ರಾಜ್ಯಸಭೆಯಿಂದ ಅಮಾನತ್ತಾದ 14 ಸಂಸದರು :

ಡಿಸೆಂಬರ್ 18ರಂದು ಲೋಕಸಭೆಯಿಂದ ಅಮಾನತ್ತಾದ 33 ಸಂಸದರು:

ಡಿಸೆಂಬರ್ 18ರಂದು ರಾಜ್ಯಸಭೆಯಿಂದ ಅಮಾನತ್ತಾದ 45 ಸಂಸದರು:

ಡಿಸೆಂಬರ್ 13ರಂದು ಸಂಸತ್ತಿನಲ್ಲಿ ಸಂಭವಿಸಿದ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿದ್ದಕ್ಕೆ ಸಂಸದರನ್ನು ಅಮಾನತು ಮಾಡಲಾಗಿದೆ.

ಗೃಹ ಸಚಿವರ ಪ್ರತಿಕ್ರಿಯೆಗೆ ಪ್ರತಿಪಕ್ಷಗಳ ಬೇಡಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸದನದ ಒಳಗಿನ ಭದ್ರತೆಯು ಸೆಕ್ರೆಟರಿಯೇಟ್ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ್ದರು. 2001ರ ಸಂಸತ್ ದಾಳಿಯ 22ನೇ ವರ್ಷದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 6 ಮಂದಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಪ್ರಜಾಪ್ರಭುತ್ವದ ತಾಯಿಯನ್ನು ಅನಾಥಗೊಳಿಸಲಾಗಿದೆ: ಕಪಿಲ್ ಸಿಬಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...