Homeಮುಖಪುಟಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

ಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

- Advertisement -
- Advertisement -

ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತವನ್ನು ‘ಶತಮಾನದ ಅತಿದೊಡ್ಡ’ ದುರಂತ ಎಂದು ಕರೆದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ರೈಲುಗಳಲ್ಲಿ Anti-collision device (ಘರ್ಷಣೆ ನಿರೋಧಕ ಸಾಧನ) ಏಕಿರಲಿಲ್ಲ? ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಪ್ರಶ್ನಿಸಿದ್ದಾರೆ.

ರೈಲುಗಳಲ್ಲಿ ಏಕೆ ಆಂಟಿ-ಕಲ್ಯೂಷನ್ ಡಿವೈಸ್ಇದ್ದಿದ್ದರೆ ದುರಂತವನ್ನು ತಡೆಯಬಹುದಿತ್ತು. ಆ ಸಾಧನವನ್ನು ರೈಲುಗಳಲ್ಲಿ ಏಕೆ ಅಳವಡಿಸಲಾಗಿಲ್ಲ ಎಂದು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

“ಇದು ಈ ಶತಮಾನದ ಅತಿ ದೊಡ್ಡ ರೈಲು ಅಪಘಾತವಾಗಿದ್ದು, ಇದರ ಹಿಂದೆ ಏನಾದರೂ ಕೈವಾಡವಿರಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಿ, ಸತ್ಯ ಹೊರಬರಬೇಕು. Anti-collision device ಏಕೆ ಕೆಲಸ ಮಾಡಲಿಲ್ಲ?” ಎಂದು ವೈಷ್ಣವ್ ಅವರ ಪಕ್ಕದಲ್ಲಿ ನಿಂತು ಪ್ರಶ್ನಿಸಿದ್ದಾರೆ.

“ಕೋರಮಂಡಲ್ ಅತ್ಯುತ್ತಮ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಒಂದಾಗಿದೆ. ನಾನು ಮೂರು ಬಾರಿ ರೈಲ್ವೆ ಸಚಿವಳಾಗಿದ್ದೆ. ನಾನು ನೋಡಿದ ಪ್ರಕಾರ ಇದು 21 ನೇ ಶತಮಾನದ ಅತಿದೊಡ್ಡ ರೈಲ್ವೆ ಅಪಘಾತವಾಗಿದೆ. ನನಗೆ ತಿಳಿದ ಮಟ್ಟಿಗೆ ರೈಲಿನಲ್ಲಿ Anti-collision device ಇರಲಿಲ್ಲ. ಆ  ಸಾಧನ ರೈಲಿನಲ್ಲಿ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ… ಸತ್ತವರನ್ನು ಮರಳಿ ತರಲು ಸಾಧ್ಯವಿಲ್ಲ ಆದರೆ ಈಗ ನಮ್ಮ ಕೆಲಸ ರಕ್ಷಣಾ ಕಾರ್ಯಾಚರಣೆ ಮತ್ತು ಸಹಜ ಸ್ಥಿತಿಯ ಮರುಸ್ಥಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾನು ಇಲ್ಲಿ ರೈಲ್ವೆ ಸಚಿವರು ಮತ್ತು ಬಿಜೆಪಿ ಸಂಸದರೊಂದಿಗೆ ನಿಂತಿದ್ದೇನೆ. ಬಂಗಾಳ ಸರ್ಕಾರವು ಅಪಘಾತದಲ್ಲಿ ಮರಣ ಹೊಂದಿಗೆ ನಮ್ಮ ರಾಜ್ಯದ ಜನರಿ ಕುಟುಂಬಗಳಿಗೆ ತಲಾ ₹ 5 ಲಕ್ಷ ನೀಡಲಿದೆ ಮತ್ತು ಕೆಲಸ ಪೂರ್ಣಗೊಳ್ಳುವವರೆಗೆ ರೈಲ್ವೆ ಮತ್ತು ಒಡಿಶಾ ಸರ್ಕಾರದೊಂದಿಗೆ ಸಹಕರಿಸುತ್ತದೆ. ನಾವು ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಬಂಗಾಳದಿಂದ ಒಡಿಶಾಗೆ ಎರಡು ಬಸ್ಸುಗಳು ಮತ್ತು 40 ವೈದ್ಯರನ್ನು ಸಹ ಕಳುಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

Anti-collision device ಎಂದರೇನು?

Anti-collision device ಎಂಬುದು ರೈಲು-ಘರ್ಷಣೆ ತಡೆಗಟ್ಟುವ ವ್ಯವಸ್ಥೆಯಾಗಿದ್ದು, ಇದನ್ನು ರಾಜಾರಾಮ್ ಬೊಜ್ಜಿ ಎಂಬುವವರು ಕಂಡು ಹಿಡಿದಿದ್ದಾರೆ. ಇದನ್ನು ರೈಲುಗಳಲ್ಲಿ ಅಳವಡಿಸಿದರೆ ಅದು ರೇಡಿಯೋ ತರಂಗಾಂತರ ಮೂಲಕ ಎದುರಿಗೆ ಬರುವ ರೈಲುಗಳ ಮಾಹಿತಿಯನ್ನು ರವಾನಿಸುತ್ತದೆ. ಅಲ್ಲದೇ ಎದುರಿಗೆ 3 ಕಿ.ಮೀ ವ್ಯಾಪ್ತಿಯಲ್ಲಿ ರೈಲು ಬರುತ್ತಿರುವಾಗಲೇ ಅದು ಸ್ವಯಂಚಾಲಿತವಾಗಿ ಬ್ರೇಕ್‌ ಅನ್ನು ಒತ್ತುತ್ತದೆ. ಅಂದರೆ ಅವು 30 ಕಿಮೀ/ಗಂ ಅಥವಾ ಪರ್ಯಾಯ ಪೂರ್ವನಿರ್ಧರಿತ ವೇಗಕ್ಕೆ ಕ್ಷೀಣಿಸಲು ಬ್ರೇಕ್ ಹಾಕುತ್ತವೆ. ಆ ಮೂಲಕ ಅಪಘಾತ ತಡೆಗಟ್ಟುವಲ್ಲಿ ಶಸಕ್ತವಾಗಿದೆ ಎಂಬ ಖ್ಯಾತಿ ಪಡೆದಿದೆ.

ಈ ರೀತಿಯ Anti-collision device ಗಳನ್ನು ರೈಲ್ವೇ ಹಳಿ ಕ್ರಾಸಿಂಗ್‌ ಗೇಟ್‌ಗಳಲ್ಲಿ ಸಹ ಅಳವಡಿಸುತ್ತಾರೆ. ರೈಲುಗಳು ಗೇಟುಗಳ 2 ಕಿ.ಮೀ ದೂರ ಇರುವಾಗಲೇ ವೇಗವನ್ನು ಕಡಿತಗೊಳಿಸಲು ಸೂಚನೆ ನೀಡುತ್ತವೆ ಎನ್ನಲಾಗಿದೆ.

ಒಂದು ಲೊಕೊ ಎಸಿಡಿಯು ಇತರ ರೈಲು ಬೌಂಡ್ ಎಸಿಡಿಗಳಿಂದ ಹಸ್ತಚಾಲಿತ ‘ಎಸ್‌ಒಎಸ್’ ಸಂದೇಶವನ್ನು ಸ್ವೀಕರಿಸಿದರೆ ಅಥವಾ ಅದರ ರೇಡಿಯಲ್ ವ್ಯಾಪ್ತಿಯ ಮೂರು ಕಿಲೋಮೀಟರ್‌ಗಳೊಳಗಿನ ಸ್ಟೇಷನ್ ಎಸಿಡಿ, ರೈಲನ್ನು ನಿಲುಗಡೆಗೆ ತರಲು ಅದು ಸ್ವಯಂಚಾಲಿತವಾಗಿ ಬ್ರೇಕ್‌ಗಳನ್ನು ಅನ್ವಯಿಸುತ್ತದೆ. ಈ ಕುರಿತ ಹೆಚ್ಚಿನ ಮಾಹಿಗೆ ಕೆಳಗಿನ ವಿಡಿಯೋ  ನೋಡಿ.

ಇದನ್ನೂ ಓದಿ; ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...