Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...