Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಹಿರಿಯ ರಾಜಕಾರಣಿ, ಮಹಿಳಾ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ, ಸಂಸದೆ ಖಾಲಿದಾ ಜರಾರ್ ಮತ್ತು ಅವರ ಕೆಲ ಬೆಂಬಲಿಗರನ್ನು ಇಸ್ರೇಲ್‌ ಸೇನೆ ಬಂಧಿಸಿದೆ. ಈ ಮೊದಲು ಇಸ್ರೇಲ್‌ನಿಂದ ಹಲವು ಬಾರಿ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ಜರಾರ್ ಅವರನ್ನು ಇದೀಗ ಮತ್ತೆ ಇಸ್ರೇಲ್‌ ಸೇನೆ ಬಂಧಿಸಿದೆ.

ಖಾಲಿದಾ ಜರಾರ್ ಪಾಪ್ಯುಲರ್ ಫ್ರಂಟ್ ಫಾರ್‌ ದಿ ಲಿಬರೇಶನ್‌ ಆಫ್‌ ಪ್ಯಾಲೆಸ್ತೀನ್‌ (PFLP)ಪಕ್ಷದ ಪ್ರಮುಖ ನಾಯಕಿಯಾಗಿದ್ದು, ಈ ಪಕ್ಷವನ್ನು ಇಸ್ರೇಲ್, ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ “ಭಯೋತ್ಪಾದಕ” ಗುಂಪು ಎಂದು ಘೋಷಿಸಿಕೊಂಡಿದೆ.

ಖಲೀದಾ ಜರಾರ್ ಸೇರಿ ಇತರ PFLP ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್‌ ಪಡೆಗಳು ಮುಂಜಾನೆ ರಾಮಲ್ಲಾದ ಬಳಿಯ ಅಲ್-ಬಿರೆಹ್ ನಗರಕ್ಕೆ ನುಗ್ಗಿ ಜರಾರ್ ಅವರ ಮನೆಯಲ್ಲಿ ಶೋಧ ನಡೆಸಿದೆ ಎಂದು ತಿಳಿಸಿದೆ.

ಖಲೀದಾ ಜರಾರ್ ಪತಿ ಘಾಸನ್ ಜರಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲ್‌ ಮಿಲಿಟರಿ ಪಡೆ ರಾಮಲ್ಲಾಹ್ ನಗರದಲ್ಲಿನ ನಮ್ಮ ಮನೆಗೆ ಮುಂಬಾಗಿಲನ್ನು ಒಡೆದು ಹಾಕಿ ಪ್ರವೇಶಿಸಿ ಅವರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

2006ರಿಂದ ಫೆಲೆಸ್ತೀನಿಯನ್ ಸಂಸತ್ತಿನ ಸದಸ್ಯೆಯಾಗಿರುವ ಜರಾರ್ ಪ್ಯಾಲೆಸ್ತೀನ್‌ನ ಹೆಸರಾಂತ ಮಹಿಳಾ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಇದಲ್ಲದೆ PFLP ಪಕ್ಷದ ಪ್ರಭಾವಿ ನಾಯಕಿಯು ಆಗಿದ್ದದ್ದಾರೆ. ಇಸ್ರೇಲ್‌ ಜೈಲಿನಲ್ಲಿರುವ ಸಾವಿರಾರು ಪ್ಯಾಲೆಸ್ತೀನ್ ಕೈದಿಗಳ ಬಿಡುಗಡೆಯಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು.

ಜರಾರ್ ಅವರನ್ನು ಇದಕ್ಕೂ ಮೊದಲು ಇಸ್ರೇಲ್‌ ಸೇನೆ ಹಲವು ಬಾರಿ ಬಂಧಿಸಿತ್ತು.  2021ರಲ್ಲಿ ಅವರು ಎರಡು ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದರು. ಅವರನ್ನು ವಿಚಾರಣೆಯಿಲ್ಲದೆ ಇಸ್ರೇಲ್‌ ಬಂಧನದಲ್ಲಿಟ್ಟಿತ್ತು.

PFLP ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್‌ ಸೇನೆಯು ವೆಸ್ಟ್ ಬ್ಯಾಂಕ್‌ನಲ್ಲಿ  ತಮ್ಮ ನಾಯಕರನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಆರೋಪಿಸಿದೆ ಮತ್ತು ಈ ಬಂಧನಗಳು ನಮ್ಮನ್ನು ಹಿಮ್ಮೆಟ್ಟಿಸುವುದಿಲ್ಲ ಎಂದು ಹೇಳಿದ್ದಾರೆ.

ಗಾಝಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ಬಾಂಬ್‌ ದಾಳಿಗಳಿಂದ ಈವರೆಗೆ 20,600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ಇತ್ತೀಚಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಖಲೀದಾ ಜರಾರ್ ಯಾರು?

ಖಾಲಿದಾ ಜರಾರ್ ಫೆಬ್ರವರಿ 9 1963ರಂದು ವೆಸ್ಟ್‌ ಬ್ಯಾಂಕ್‌ನ ನಬ್ಲುಸ್ ನಗರದಲ್ಲಿ ಜನಿಸಿದ್ದರು. ಅವರು ವಾಣಿಜ್ಯ ವಿಚಾರದಲ್ಲಿ ಪದವಿ ಮತ್ತು ಬಿರ್ಜೀಟ್ ವಿಶ್ವವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ವಿಚಾರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಇವರು 1994 ರಿಂದ 2006ರವರೆಗೆ ಅಡ್ಡಮೀರ್ ಕೈದಿಗಳ ಬೆಂಬಲ ಮತ್ತು ಮಾನವ ಹಕ್ಕುಗಳ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. 2006ರಲ್ಲಿ ಪ್ಯಾಲೆಸ್ತೀನ್‌ನ ಸಂಸತ್ತಿಗೆ ಅವರು ಸಂಸದೆಯಾಗಿ ಆಯ್ಕೆಯಾಗಿದ್ದರು. ಇದರ ಜೊತೆಗೆ ಅವರು ಕೈದಿಗಳ ಆಯೋಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

ಇಸ್ರೇಲ್‌ ಯುದ್ಧ ಅಪರಾಧಗಳನ್ನು ಅಂತರಾಷ್ಟ್ರೀಯ  ಮಟ್ಟದಲ್ಲಿ ಖಾಲಿದಾ ಜರಾರ್ ಬಹಿರಂಗಪಡಿಸುತ್ತಿದ್ದರು. ಇದರಿಂದ ಇಸ್ರೇಲ್‌ ಆಕೆಯನ್ನು ಹಲವು ಬಾರಿ ಬಂಧಿಸಿದೆ. 1989ರಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮೊದಲ ಬಾರಿಗೆ ಅವರನ್ನು ಬಂಧಿಸಲಾಗಿತ್ತು.

2015ರಲ್ಲಿ ಇಸ್ರೇಲ್‌ ಸೈನಿಕರು ಖಾಲಿದಾ ಜರಾರ್‌ ಅವರನ್ನು ಬಂಧಿಸಿದ್ದರು. ಆಕೆಯನ್ನು ವಿಚಾರಣೆಯಿಲ್ಲದೆ ಬಂಧನದಲ್ಲಿರಿಸಲಾಗಿತ್ತು. ಈ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಇಸ್ರೇಲ್ ಅವರನ್ನು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಿದೆ. ರಾಜಕೀಯ ಚಟುವಟಿಕೆಗಳ ಆಧಾರದ ಮೇಲೆ 12 ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿತ್ತು. ಅವುಗಳಲ್ಲಿ ಭಾಷಣ, ಪ್ಯಾಲೆಸ್ತೀನ್‌ ಕೈದಿಗಳಿಗೆ ಬೆಂಬಲ ಸೇರಿ ಹಲವು ಕ್ಷುಲ್ಲಕ ವಿಚಾರ ಸೇರಿಸಲಾಗಿತ್ತು. ಅವರಿಗೆ 15 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿತ್ತು.

ಖಾಲಿದಾ ಜರಾರ್ ಅವರನ್ನು ಜೂ.2016ರಲ್ಲಿ ಬಿಡುಗಡೆ ಮಾಡಲಾಗಿತ್ತು. ಜು.2017ರಲ್ಲಿ ಅವರನ್ನು ಮತ್ತೆ ಬಂಧಿಸಲಾಯಿತು. ಅವರ ಮೊಬೈಲ್ ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ಈ ವೇಳೆ ಇಸ್ರೇಲ್‌ ಸೇನೆ ವಶಪಡಿಸಿಕೊಂಡಿತ್ತು. ಕಾರಣ ನೀಡದೆ ಹಶರೋನ್ ಜೈಲಿನಲ್ಲಿ 20 ತಿಂಗಳ ಕಾಲ ಬಂಧನದಲ್ಲಿಟ್ಟಿತ್ತು.

ಇದನ್ನು ಓದಿ: ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...