Homeಮುಖಪುಟಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಯಾರು?

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಯಾರು?

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್‌ನಲ್ಲೇ ವಕೀಲನೊಬ್ಬ ಶೂ ಎಸೆಯಲು ಯತ್ನಿಸಿರುವುದು ಸಂವಿಧಾನವನ್ನು ಅನುಸರಿಸುವ ದೇಶದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.

ದಲಿತ ಸಮುದಾಯವರಾದ ಸಿಜೆಐ ಮೇಲೆಯೇ ದಾಳಿ ಮಾಡಲು ಹೇಸದ ಜನರು, ದೇಶದ ಸಾಮಾನ್ಯ ದಲಿತ, ಅಲ್ಪಸಂಖ್ಯಾತ ಸೇರಿದಂತೆ ತಳ ಸಮುದಾಯಗಳ ಜನರ ಮೇಲೆ ಯಾವ ಪರಿಯ ಅಸಮಾನತೆ, ಅಸಹನೆ ಹೊಂದಿರಬಹುದು ಎಂದು ಅನೇಕರು ಪ್ರಶ್ನಿಸಿದ್ದಾರೆ.

ಸಿಜೆಐ ಮೇಲಿನ ದಾಳಿ ಸಂವಿಧಾನದ ಮೇಲೆ ಮನುವಾದಿಗಳು ಮಾಡಿರುವ ದಾಳಿ ಎಂದು ಕೆಲ ರಾಜಕೀಯ ಪ್ರಮುಖರು ಅಭಿಪ್ರಾಯಪಟ್ಟಿದ್ದಾರೆ. ಇದು ಸಂವಿಧಾನದ ಮೇಲೆ ಧರ್ಮದ ಅಂಧತ್ವ ಮಾಡಿರುವ ಸವಾರಿ ಎಂದಿದ್ದಾರೆ.

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವ ವಿಚಾರ ದೇಶದಲ್ಲೆಡೆ ಚರ್ಚೆಯಾಗುತ್ತಿರುವ ನಡುವೆ, ಶೂ ಎಸೆದ ವಕೀಲ ಯಾರು..ಆತನ ಹಿನ್ನೆಲೆ ಏನು? ಎಂದು ಅನೇಕರು ಹುಡುಕಾಡುತ್ತಿದ್ದಾರೆ.

ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ಮಾಡಿರುವ ವರದಿಯ ಪ್ರಕಾರ, ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ನೋಂದಾಯಿತ ಸದಸ್ಯರಾಗಿದ್ದಾರೆ ಮತ್ತು ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರು 2009ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿಕೊಂಡಿದ್ದರು.

ಹಿರಿಯ ವಕೀಲರಾಗಿರುವ ಅವರು, ಅನೇಕ ಬಾರ್ ಅಸೋಸಿಯೇಷನ್‌ಗಳಲ್ಲಿ ದೀರ್ಘಕಾಲದ ಸದಸ್ಯತ್ವ ಹೊಂದಿದ್ದು, ಕಾನೂನು ವಲಯದಲ್ಲಿ ಚಿರಪರಿಚಿತರು.

ರಾಕೇಶ್ ಕಿಶೋರ್ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ಶಹದಾರಾ ಬಾರ್ ಅಸೋಸಿಯೇಷನ್ ​​ಮತ್ತು ದೆಹಲಿ ಬಾರ್ ಕೌನ್ಸಿಲ್‌ನ ಸದಸ್ಯತ್ವ ಕಾರ್ಡ್‌ಗಳನ್ನು ಹೊಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್‌ ಕಾಂಪ್ಲೆಕ್ಸ್‌ನ ನ್ಯಾಯಾಲಯ ಸಂಖ್ಯೆ 1ರಲ್ಲಿ ಸಿಜೆಐ ಮೇಲೆ ದಾಳಿ ಪ್ರಯತ್ನ ನಡೆದಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ ರಾಕೇಶ್ ಕಿಶೋರ್ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಹೊರ ತಂದರು. ನಂತರ ಅವರನ್ನು ವಿಚಾರಣೆಗೊಳಪಡಿಸಿ, ಸ್ವಲ್ಪ ಸಮಯದವರೆಗೆ ಬಂಧಿಸಿ ನ್ಯಾಯಾಲಯದ ಸಂಕೀರ್ಣದೊಳಗೆ ಬಿಡುಗಡೆ ಮಾಡಲಾಯಿತು ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಸಿಜೆಐ ಮೇಲೆ ದಾಳಿ ಪ್ರಯತ್ನ ಬೆನ್ನಲ್ಲೇ ಬಾರ್ ಕೌನ್ಸಿಲ್ ಆಫ್ ಇಂಡಿಯಾ ರಾಕೇಶ್ ಕಿಶೋರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

“ವಕೀಲ ರಾಕೇಶ್ ಕಿಶೋರ್ ಅವರ ವರ್ತನೆ ಮೇಲ್ನೋಟಕ್ಕೆ ನ್ಯಾಯಾಂಗದ ಘನತೆಗೆ ವಿರುದ್ದವಾಗಿದೆ. ವಕೀಲರ ಕಾಯ್ದೆ, 1961 ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾದ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಹೇಳಿದ್ದಾರೆ.

ವಕೀಲರ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ. ಇದು ನ್ಯಾಯಾಲಯದ ಗೌರವವನ್ನು ಹಾಳು ಮಾಡುತ್ತದೆ ಎಂದು ಬಾರ್ ಕೌನ್ಸಿಲ್ ಒತ್ತಿ ಹೇಳಿದೆ. ಕೌನ್ಸಿಲ್ ತೆಗೆದುಕೊಂಡ ಕ್ರಮವು ತಾತ್ಕಾಲಿಕವಾಗಿದ್ದು, ಹೆಚ್ಚಿನ ವಿಚಾರಣೆ ಬಾಕಿ ಇದೆ ಎಂದು ವರದಿಗಳು ತಿಳಿಸಿವೆ.

ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸಿಜೆಐಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...