Homeಮುಖಪುಟಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

ಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು?

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಶಾಲಾ ಪಠ್ಯದಲ್ಲಿ ಭಗತ್‌ ಸಿಂಗ್, ನಾರಾಯಣ ಗುರುಗಳ ಪಠ್ಯ ಕೈಬಿಟ್ಟು ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಬಿಜೆಪಿ ಸರ್ಕಾರದ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ ಎಂದು ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.

ಇವತ್ತು ನಾವು ಶಿಕ್ಷಣವನ್ನು ಹಾಳು ಮಾಡಿದರೆ ದೇಶವನ್ನು ಹಾಳು ಮಾಡಿದ ಹಾಗೆ ಅರ್ಥ. ಈ ರೋಹಿತ್ ಚಕ್ರತೀರ್ಥ ಎಂಬುವವರು ಯಾರು? ನೀನೇನು ಪ್ರೊಫೆಸರ? ಯಾವ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಿದ್ದೀಯ? ನೀವು ಸಂಘಪರಿವಾರದ ಕಾರ್ಯಕರ್ತರು ಅಷ್ಟೇ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು.

ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಟಿಪ್ಪು ಸುಲ್ತಾನ್‌ಗೂ ಹೆಡಗೇವಾರ್‌ಗೂ ಹೋಲಿಕೆ ಸಾಧ್ಯವಿಲ್ಲ. ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು? ಆತ ಆರ್‌ಎಸ್‌ಎಸ್‌ ಸ್ಥಾಪಕ ಅಷ್ಟೆ ಎಂದರು.

ನಾರಾಯಣ ಗುರುರವರು ಹೋರಾಟ, ಚಳವಳಿ ಮಾಡದಿದ್ದರೆ ಕೇರಳ ಹೀಗೆ ಇರಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲಿನ ಮಹಿಳೆಯರು ಹಿಂದೆ ಬಟ್ಟೆ ಹಾಕದಂತಹ ಪರಿಸ್ಥಿತಿಯಲ್ಲಿದ್ದಾಗ ಹೋರಾಟ ಮಾಡಿದ ನಾರಾಯಣ ಗುರುಗಳ ಪಠ್ಯ ತೆಗೆದಿರುವುದು ಅಕ್ಷಮ್ಯ ಎಂದರು.

ಭಗತ್ ಸಿಂಗ್ ದೊಡ್ಡ ಸ್ವಾತಂತ್ರ್ಯ ಹೋರಾಟಗಾರರು. ಅವರನ್ನು ಏಕೆ ತೆಗೆದು ಹಾಕಿದ್ದೀರಿ.ಇದಕ್ಕೆ ಮಂತ್ರಿಗಳು ಮತ್ತು ಸರ್ಕಾರ ಉತ್ತರ ಕೊಡಬೇಕು. ಡಿಎಸ್‌ಆರ್‌ಟಿಇ, ಎನ್‌ಸಿಆರ್‌ಟಿಇ ಗಳನ್ನು ಒಳಗೊಂಡು ಪಠ್ಯಪುಸ್ತಕ ರಚಿಸಬೇಕು. ರಾಷ್ಟ್ರೀಯ ಪಠ್ಯ ಚೌಕಟ್ಟಿನಲ್ಲಿ ಅದು ಇರಬೇಕು ಹೊರತು ಮನಸ್ಸಿಗೆ ಬಂದಾಗೆ ಸೇರಿಸಬಾರದು. ಹಿಂದಿನ ಯಾವ ಸರ್ಕಾರಗಳು ಇಂತಹ ಕೆಲಸ ಮಾಡಿಲ್ಲ ಎಂದರು.

ಈ ಸಮಿತಿಯಲ್ಲಿ ಯಾರು ಯಾರು ಇದ್ದಾರೆ? ಯಾವ ಯಾವ ಪಠ್ಯ ಕೈಬಿಟ್ಟೀದ್ದೀರಿ, ಯಾವುದನ್ನು ಸೇರಿಸಿದ್ದೀರಿ ಎಂಬುದನ್ನು ಹಾಗೂ ರೋಹಿತ್ ಚಕ್ರತೀರ್ಥರ ಹಿನ್ನೆಲೆ ಏನು ಎಂಬುದನ್ನು ಸರ್ಕಾರ ಇಡೀ ರಾಜ್ಯದ ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪಠ್ಯಪುಸ್ತಕಗಳ ಕರಡು ಸಾರ್ವಜನಿಕವಾಗಿ ಚರ್ಚೆಯಾಗಬೇಕು. ವೈಜ್ಞಾನಿಕವಾಗಿ, ವೈಚಾರಿಕತೆಯಿಂದ ಕೂಡಿರುವ ಪಠ್ಯಗಳು ನಮಗೆ ಬೇಕೆ ಹೊರತು ಧರ್ಮದ ಆಧಾರದ ಮೇಲೆ ರಚನೆಯಾದವು ಇರಬಾರದು ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...