Homeಮುಖಪುಟಸಿಎಂ ಮಗ, ಬಿಜೆಪಿ ಸಚಿವರೊಂದಿಗೆ ಸಂಬಂಧ ಹೊಂದಿರುವ ಸ್ಯಾಂಟ್ರೊ ರವಿ ಯಾರು? ಇಲ್ಲಿದೆ ಪೂರ್ಣ ವಿವರ

ಸಿಎಂ ಮಗ, ಬಿಜೆಪಿ ಸಚಿವರೊಂದಿಗೆ ಸಂಬಂಧ ಹೊಂದಿರುವ ಸ್ಯಾಂಟ್ರೊ ರವಿ ಯಾರು? ಇಲ್ಲಿದೆ ಪೂರ್ಣ ವಿವರ

- Advertisement -
- Advertisement -

ಕಳೆದ ನಾಲ್ಕು ದಿನಗಳಿಂದ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹೆಸರು ಸ್ಯಾಂಟ್ರೊ ರವಿ. ‘ಸ್ವತಃ ಮುಖ್ಯಮಂತ್ರಿಯೇ ನನ್ನನ್ನು ಸರ್ ಅಂತ ಕರೀತಾರೆ, ನೀವು ಸರ್ ಅಂತಿಲ್ಲ, ಖಾಲಿ ಡಿವೈಎಸ್‌ಪಿ ನೀವು, ಯಾವ ಕೆಲಸವಾದರೂ ಮಾಡಿಕೊಡುತ್ತೇನೆ, ಕುಮಾರಕೃಪ ಗೆಸ್ಟ್ ಹೌಸ್‌ಗೆ ಬನ್ನಿ’ ಎಂದು ಆತ ಮಾತನಾಡಿರುವ ಆಡಿಯೋ ವೈರಲ್ ಆಗುತ್ತಿದೆ. ಸಿಎಂ ಬೊಮ್ಮಾಯಿವರ ಮಗನ ಜೊತೆ, ಬಿಜೆಪಿ ಸಚಿವರುಗಳ ಜೊತೆ ಆತ ಇರುವ ಫೋಟೊಗಳು ಎಲ್ಲೆಡೆ ಹರಿದಾಡುತ್ತಿವೆ.

ಜನವರಿ 1 ರಂದು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೊ ರವಿ ಆಲಿಯಾಸ್ ಕೆ.ಎಸ್ ಮಂಜುನಾಥ್ ವಿರುದ್ಧ ವಂಚನೆ, ಅತ್ಯಾಚಾರ, ದೌರ್ಜನ್ಯ, ಕ್ರಿಮಿನಲ್ ಪಿತೂರಿಯ ದೂರು ದಾಖಲಾಗುತ್ತದೆ. ದೂರು ನೀಡಿದ್ದು ಆತನನ್ನು ಮದುವೆಯಾಗಿ ವಂಚನೆಗೊಳಗಾಗಿದ್ದ ದಲಿತ ಯುವತಿ. ಆನಂತರ ಆತ ಡಿವೈಎಸ್‌ಪಿ ಜೊತೆ ಮಾತನಾಡಿದ್ದ ಆಡಿಯೋ ಲೀಕ್ ಆಗುತ್ತದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೈಸೂರು “ಪೊಲೀಸರು ಎಫ್‌ಐಆರ್ ದಾಖಲು ಮಾಡಿರುವ ಅತ್ಯಾಚಾರ ಆರೋಪಿ ಸ್ಯಾಂಟ್ರೊ ರವಿಯೊಂದಿಗೆ ಬಿಜೆಪಿ ಸರ್ಕಾರದ ಕೆಲ ಪ್ರಭಾವಿ ಸಚಿವರು ಸಂಪರ್ಕ ಹೊಂದಿದ್ದಾರೆ. ಆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು” ಎಂದು ಒತ್ತಾಯಿಸುತ್ತಾರೆ.

ಅಷ್ಟಕ್ಕೆ ಸುಮ್ಮನಾಗದೆ ಸ್ಯಾಂಟ್ರೊ ರವಿಯ ಜೊತೆ ಸಚಿವರುಗಳಾದ ಆರಗ ಜ್ಞಾನೇಂದ್ರ, ಎಸ್‌.ಟಿ ಸೋಮಶೇಖರ್, ಡಾ.ಕೆ ಸುಧಾಕರ್, ಬಿ.ಸಿ ನಾಗೇಶ್ ಇರುವ ಫೋಟೊಗಳನ್ನು, ವಿಡಿಯೋಗಳನ್ನು ಬಿಡುಗಡೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಕುರಿತು ಸಾಲು ಸಾಲು ಟ್ವೀಟ್‌ಗಳನ್ನು ಮಾಡುತ್ತದೆ. ಹಾಗಿದ್ದರೆ ಏಕಾಏಕಿ ಸುದ್ದಿಯಲ್ಲಿರುವ ಈ ಸ್ಯಾಂಟ್ರೊ ರವಿ ಯಾರು? ಆತನಿಗೂ ಸರ್ಕಾರದ ನಡುವಿನ ಸಂಬಂಧವೇನು ಎಂಬುದರ ವಿವರ ಇಲ್ಲಿದೆ.

ಮಂಜುನಾಥ್ ಕೆ.ಎಸ್ ಅಲಿಯಾಸ್ ಕಿರಣ್ ಆಲಿಯಾಸ್ ಸ್ಯಾಂಟ್ರೋ ರವಿ (53) ಮಂಡ್ಯದ ನಗರದಿಂದ ಕೂಗಳತೆ ದೂರದಲ್ಲಿರುವ ಹೊಳಲು ಗ್ರಾಮದವನು. ಅವರ ತಂದೆ ಅಬಕಾರಿ ಇಲಾಖೆಯಲ್ಲಿ ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಯಾಗಿದ್ದರು. ಈತನ ಪ್ರಧಾನ ಕಸುಬು ಹೆಣ್ಣು ಮಕ್ಕಳ ಕಳ್ಳಸಾಗಣೆ, ವೇಶ್ಯಾವಾಟಿಕೆ ಜಾಲವಾಗಿತ್ತು. ಹೆಣ್ಣು ಮಕ್ಕಳನ್ನು ಪ್ರೀತಿಸುವುದಾಗಿ ನಂಬಿಸಿ, ಮದುವೆಯ ನಾಟಕವಾಡಿ ಆನಂತರ ಅವರನ್ನು ಪ್ರಭಾವಿಗಳ ಬಳಿ ವೇಶ್ಯಾವಾಟಿಕೆಗೆ ತಳ್ಳುವುದು ಈತನ ಕೆಲಸವಾಗಿತ್ತು. ಇದೇ ಕೆಲಸದಲ್ಲಿ 1987ರಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಧರ್ಮಸ್ಥಳಕ್ಕೆ ಓಡಿ ಹೋಗಿ ಮದುವೆಯಾದಾಗ ಸಿಕ್ಕಿಬಿದ್ದು ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದ.

ಆದರೆ ಚಾಲಾಕಿ ಬುದ್ದಿಯ ಆತ ಅನಾರೋಗ್ಯದ ನೆಪವೊಡ್ಡಿ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಲ್ಲಿಂದ ಪರಾರಿಯಾಗಿದ್ದ. ಆಗ ಆತನ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು.

ಪ್ರಧಾನವಾಗಿ ಮೈಸೂರನ್ನು ತನ್ನ ಕಾರ್ಯಕ್ಷೇತ್ರ ಮಾಡಿಕೊಂಡಿದ್ದ ಆತ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಹೆಣ್ಣು ಮಕ್ಕಳನ್ನು ಪೂರೈಸುವ ಅನೈತಿಕ ದಂಧೆಗಿಳಿದಿದ್ದ. ಆ ಸಂದರ್ಭದಲ್ಲಿ ಆತ ಹೊಸದಾಗಿ ಸ್ಯಾಂಟ್ರೊ ಕಾರೊಂದನ್ನು ಖರೀದಿಸಿ ಊರು ಊರು ಸುತ್ತುತ್ತಿದ್ದ. ಬಡವರಾದ, ದಲಿತ-ಬುಡಕಟ್ಟು ಸಮುದಾಯದ ಹೆಣ್ಣು ಮಕ್ಕಳಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಮರಳು ಮಾಡಿ ಅವರನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ದಾಳಿ ಮಾಡುತ್ತಿದ್ದ ವೇಳೆಯಲ್ಲೆಲ್ಲ ತನ್ನ ಸ್ಯಾಂಟ್ರೊ ಕಾರಿನಲ್ಲಿ ತಪ್ಪಿಸಿಕೊಳ್ಳುತ್ತಿದ್ದ. ಹಾಗಾಗಿ ಆತನಿಗೆ ಸ್ಯಾಂಟ್ರೊ ರವಿ ಎಂಬ ಹೆಸರು ಬಂದಿದೆ ಎನ್ನಲಾಗುತ್ತಿದೆ.

2000 ಇಸವಿಯಿಂದ 2014ರವರೆಗೆ ಆತನ ವಿರುದ್ಧ ಹೆಣ್ಣು ಮಕ್ಕಳ ಕಳ್ಳ ಸಾಗಣಿಕೆ, ಅತ್ಯಾಚಾರ, ವಂಚನೆ, ಕ್ರಿಮಿನಲ್ ಆರೋಪದ ಮೇಲೆ ಹತ್ತಾರು ಪ್ರಕರಣಗಳನ್ನು ಒಡನಾಡಿ ಸಂಸ್ಥೆ ದಾಖಲಿಸಿತ್ತು. ಆದರೆ ಪ್ರಭಾವಿಗಳ  ಕೃಪಾಕಟಾಕ್ಷದಲ್ಲಿದ್ದ ಆತ ಪೊಲೀಸರನ್ನು ಸಹ ಬುಟ್ಟಿಗೆ ಹಾಕಿಕೊಂಡು ತಪ್ಪಿಸಿಕೊಳ್ಳುತ್ತಿದ್ದ ಎನ್ನುವುದು ಅವನ ಮೇಲಿರುವ ಆರೋಪ.

2004ರಲ್ಲಿ ಸ್ಯಾಂಟ್ರೊ ರವಿ ತನ್ನ ಅನೈತಿಕ ಚಟುವಟಿಕೆಗಳನ್ನು ಮುಂದುವರೆಸಿದ್ದರಿಂದ ಆತನ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲಿಡಲಾಗಿತ್ತು. ಅಲ್ಲಿದ್ದ ಒಂದೂವರೆ ವರ್ಷದಲ್ಲಿ ಮತ್ತಷ್ಟು ರೌಡಿಗಳ, ರಾಜಕಾರಣಿಗಳ ನಂಟು ಬೆಳೆಸಿಕೊಂಡಿದ್ದ. ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಂತೆ ವರ್ಗಾವಣೆ ದಂಧೆಗಿಳಿದಿದ್ದ ಎನ್ನಲಾಗಿದೆ. ಈ ಎಲ್ಲಾ ದಂಧೆಗಳಲ್ಲಿನ ಅಕ್ರಮ ಹಣವನ್ನು ತನ್ನ ಹೆಂಡತಿ ಚಂದ್ರಿಕಾ ಎಂಬುವವರ ಬ್ಯಾಂಕ್ ಖಾತೆಯಿಂದ ನಿರ್ವಹಿಸುತ್ತಿದ್ದ.

ಹೆಂಡತಿಯನ್ನೇ ಕೊಂದ ಆರೋಪ

2004ರಲ್ಲಿ ಸ್ಯಾಂಟ್ರೋ ರವಿ ಜೈಲು ಸೇರುವ ವೇಳೆಗೆ ಆತನ ಹೆಂಡತಿ ಚಂದ್ರಿಕಾರವರ ಖಾತೆಯಲ್ಲಿ 22 ಲಕ್ಷ ರೂ ಇತ್ತು ಎನ್ನಲಾಗಿದೆ. ಆದರೆ ಆತ 2006ರಲ್ಲಿ ಜೈಲಿನಿಂದ ಹೊರಬಂದಾಗ ಹಣ ಕೊಡಲು ಚಂದ್ರಿಕಾ ಮೀನಾಮೇಷ ಎಣಿಸಿದ್ದಾರೆ. ಆಗ ಹಣಕ್ಕಾಗಿ ತನ್ನ ಮಗಳನ್ನೇ ಅಪಹರಿಸಿ ಬ್ಲಾಕ್‌ಮೇಲ್ ಮಾಡಿದ್ದಾನೆ. ಆದರೆ ಚಂದ್ರಿಕಾ ಬಗ್ಗಿಲ್ಲ. ಬದಲಿಗೆ ಆತನ ವಿರುದ್ಧ ಪೊಲೀಸ್ ದೂರು ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಆತ ಹೆಂಡತಿಗೆ ಆಸಿಡ್ ಹಾಕಿ ಸುಟ್ಟು ಪಾಂಡವಪುರದ ವಿ.ಸಿ ನಾಲೆಗೆ ಎಸೆದುಕೊಂದಿದ್ದ ಎಂಬ ಆರೋಪ ಎದುರಿಸುತ್ತಿದ್ದನು.

ಕೊಲೆಯಾದ ಪತ್ನಿ ಚಂದ್ರಿಕಾಳೊಂದಿಗೆ ಸ್ಯಾಂಟ್ರೊ ರವಿ

ಆದರೆ ಈ ಸಂದರ್ಭದಲ್ಲಿ ತನ್ನ ಹೆಂಡತಿ ಕಾಣೆಯಾಗಿದ್ದಾಳೆ ಎಂದು ದೂರು ಕೊಟ್ಟಿದ್ದಲ್ಲದೆ, ಪತ್ರಿಕೆಗಳಲ್ಲಿ ಕಾಣೆಯಾಗಿದ್ದಾರೆ ಎಂಬ ಜಾಹೀರಾತು ಸಹ ಕೊಟ್ಟಿದ್ದ. ಆನಂತರ ಪೊಲೀಸರೊಂದಿಗೆ ಅಡ್ಜೆಸ್ಟ್ ಮಾಡಿಕೊಂಡು ಕೇಸು ಖುಲಾಸೆಗೊಳಿಸಿದ ಎಂಬ ಆರೋಪ ಆತನ ಮೇಲಿದೆ.

ವರ್ಗಾವಣೆ ದಂಧೆ

ರಾಜಕಾರಣಿಗಳಿಗೆ ಹೆಣ್ಣು ಮಕ್ಕಳನ್ನು ಪೂರೈಸುವ ಮೂಲಕ ಸ್ನೇಹ ಸಂಪಾದಿಸಿದ್ದ ಈತ ವರ್ಗಾವಣೆ ದಂಧೆಗೆ ಕೈಹಾಕಿದ್ದ. ಅದರಿಂದ ಬಂದ ಹಣದಲ್ಲಿ ಐಷರಾಮಿ ಜೀವನ ಸಾಗಿಸುತ್ತಿದ್ದ ಎಂಬುದನ್ನು ದುಡ್ಡಿನ ಕಂತೆಗಳೊಂದಿಗೆ ಆತ ಇರುವ ಫೋಟೊಗಳೆ ಸಾರಿ ಹೇಳುತ್ತಿವೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಸಮ್ಮಿಶ್ರ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಬರುವುದರಲ್ಲಿ ಈತನ ಪಾತ್ರವಿದೆ ಎನ್ನಲಾಗುತ್ತಿದೆ. ಬಾಂಬೆಗೆ ತೆರಳಿದ ಕೆಲ ಶಾಸಕರಿಗೆ ಹೆಣ್ಣು ಮಕ್ಕಳನ್ನು ಪೂರೈಸಿದ್ದು ಈತನೇ ಎಂಬ ಆರೋಪ ಕೇಳಿಬರುತ್ತಿದೆ.

ಬಿಜೆಪಿ ಸರ್ಕಾರ ಬಂದ ಮೇಲಂತೂ ತನ್ನ ಕಾರ್ಯಚಟುವಟಿಕೆಗಳನ್ನು ಕುಮಾರ ಕೃಪಾ ಅತಿಥಿ ಗೃಹದಿಂದಲೇ ನಡೆಸುತ್ತಿದ್ದ ಸ್ಯಾಂಟ್ರೊ ರವಿ ಕೊನೆಗೂ ಬೆತ್ತಲಾಗಿದ್ದಾನೆ. ಇತ್ತೀಚಿಗೆ ಮದುವೆಯಾಗಿದ್ದ ಮಹಿಳೆಯನ್ನು ನಿವೃತ್ತ ಐಎಎಸ್ ಅಧಿಕಾರಿಯೊಂದಿಗೆ ಹಾಸಿಗೆ ಹಂಚಿಕೊಳ್ಳಲು ಒತ್ತಾಯಿಸಿದ್ದ. ಒಪ್ಪದಿದ್ದಾಗ ಸುಳ್ಳು ಕೇಸು ಹಾಕಿ ಜೈಲಿಗೆ ಕಳಿಸಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಹಣಕ್ಕಾಗಿ ಯಾವ ಮಟ್ಟಕ್ಕೆ ಇಳಿಯಲೂ ಹೇಸದ ವ್ಯಕ್ತಿಯೇ ಸ್ಯಾಂಟ್ರೊ ರವಿ.

ಇಂತಹ ಒಬ್ಬ ವ್ಯಕ್ತಿಯನ್ನು ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಸರ್ ಎಂದು ಕರೆಯುತ್ತಾರಂತೆ. ಸಚಿವರು ಆತನ ಪರವಾಗಿ ವರ್ಗಾವಣೆ ಮಾಡಿಕೊಡುತ್ತಾರೆ. ಅನೈತಿಕತೆ, ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವಿದು. ದೂರು ನೀಡದ ವಾರವಾಗುತ್ತ ಬಂದರೂ ಸಹ ಆ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

40% ಕಮಿಷನ್ ಹಗರಣ, ಗುತ್ತಿಗೆದಾರನ ಆತ್ಮಹತ್ಯೆ, ಪಿಎಸ್‌ಐ ಹಗರಣ, ಕರಾವಳಿಯಲ್ಲಿ ಮತೀಯ ಗೂಂಡಾಗಿರಿಗಳ ಹೆಚ್ಚಳ, ಪೆಸಿಎಂ, ಪಕ್ಷಕ್ಕೆ ರೌಡಿಗಳ ಸೇರ್ಪಡೆಯಿಂದ ಟೀಕೆಗೆ ಒಳಗಾಗಿದ್ದ ರಾಜ್ಯ ಬಿಜೆಪಿ ಸರ್ಕಾರವು ಸದ್ಯ ಸ್ಯಾಂಟ್ರೊ ರವಿ ಸಹವಾಸದಿಂದ ಮುಜುಗರಕ್ಕೆ ಸಿಲುಕಿದೆ.

ಇದನ್ನೂ ಓದಿ: ದೇವಾಲಯ ಪ್ರವೇಶಿಸಿದ ದಲಿತ ಮಹಿಳೆಗೆ ಥಳಿತ, ತಲೆಗೂದಲು ಹಿಡಿದು ಹೊರಗೆಳೆದುಹಾಕಿದ ಧರ್ಮದರ್ಶಿ – ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ಗೌರಿಗೆ ಯಾವುದೆ ವಿಷಯ ತಿಳಿಸಬೇಕಾದರೆ ನಿಮ್ಮ ಒಂದು ಫೊನ್ ನಂಬರ ಕಳಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...