Homeಅಂಕಣಗಳುಕಳೆದುಹೋದ ದಿನಗಳುಕಾಫಿ ನಾಡಿನ ಪರಿಸರ ನಾಶಕ್ಕೆ ಮೂಲ ಕಾರಣರ್ಯಾರು?: ಪ್ರಸಾದ್ ರಕ್ಷಿದಿ

ಕಾಫಿ ನಾಡಿನ ಪರಿಸರ ನಾಶಕ್ಕೆ ಮೂಲ ಕಾರಣರ್ಯಾರು?: ಪ್ರಸಾದ್ ರಕ್ಷಿದಿ

- Advertisement -
- Advertisement -

ಕಳೆದು ಹೋದ ದಿನಗಳು….. ಭಾಗ -2, ಅಧ್ಯಾಯ -16

ಮನುಷ್ಯನಿಗೆ ಏನು ಬೇಕು, ಎಷ್ಟು ಬೇಕು ಎಂಬಂತಹ ಹಲವಾರು ಪ್ರಶ್ನೆಗಳಿಗೆ ಉತ್ತರವನ್ನು ನಾವೇ ಕಂಡುಕೊಳ್ಳಬೇಕು ಅಷ್ಟೆ. ಕೊನೆಗೂ ನಮಗೆ ಬೇಕಾದ್ದು “ಭೂಮಿ ನಮ್ಮ ಅವಶ್ಯಕತೆಗಳನ್ನು ಪೂರೈಸಬಲ್ಲದು ದುರಾಸೆಯನ್ನಲ್ಲ” ಎಂಬ ಅರಿವು.

ಆದರೆ ಆ ಅರಿವಿದ್ದವರೂ ಕೂಡಾ ಏನೂ ಮಾಡಲಾರದ ಸ್ಥಿತಿಯನ್ನು ಸರ್ಕಾರಗಳು ನಿರಂತರ ನಿರ್ಮಾಣ ಮಾಡುತ್ತಲೇ ಬಂದವು. ಕಾಫಿ ಬೆಳೆಗೆ ನಿರಂತರವಾಗಿ ಧಕ್ಕೆ ತರುವಂತಹ ಕೆಲಸ ನಡೆಯಲಾರಂಭಿಸಿದ್ದು, ಸರ್ಕಾರದ ಅಭಿವೃದ್ಧಿ ಯೋಜನೆಗಳಿಂದಲೇ, ಎಪ್ಪತ್ತರ ದಶಕದಲ್ಲೇ ಕೊಡಗಿನಲ್ಲಿ ಲಕ್ಷ್ಮಣ ತೀರ್ಥ ನದಿಗೆ ಕಂಬದ ಕಡ ಎಂಬಲ್ಲಿ ಅಣೆಕಟ್ಟು ಕಟ್ಟುವ ಯೋಜನೆಯನ್ನು ದೇವರಾಜ ಅರಸರು ಪ್ರಕಟಿಸಿದಾಗ ಇಡೀ ಕೊಡಗು ಜಿಲ್ಲೆಯೇ ಒಂದಾಗಿ ನಿಂತು ಅದನ್ನು ತಡೆಯಲು ಸಮರ್ಥವಾಗಿತ್ತು. ಆದರೆ ವರ್ಷಗಳು ಕಳೆದಂತೆ ಅಧಿಕಾರ, ಹಣ, ಮತ್ತು ಲಾಲಸೆಗಳು ಆ ರೀತಿಯ ಹೋರಾಟಗಳನ್ನು ಯಶಸ್ವಿಯಾಗಿ ದಿಕ್ಕು ತಪ್ಪಿಸಲು ಸಾಧ್ಯವಾಗತೊಡಗಿತು.

ನದೀ ತಿರುವು ಯೋಜನೆಗಳು

ಒಂದಾದ ಮೇಲೆ ಒಂದರಂತೆ ರಸ್ತೆ, ರೈಲ್ವೇ, ಜಲವಿದ್ಯುತ್ ಯೋಜನೆಗಳು, ನದಿ ತಿರುವು, ಆಯಿಲ್ ಪೈಪ್ ಲೈನ್ ಹೀಗೇ ನಾನಾ ಯೋಜನೆಗಳು ಮಲೆನಾಡಿಗೆ ಬಂದವು.

ಇದರ ವಿರುದ್ಧ ಜನ ಹೋರಾಡಲಿಲ್ಲವೇ ?

ಖಂಡಿತ ಹೋರಾಡಿದರು. ಆದರೆ ಪ್ರತಿಸಲವೂ ಅಂತಿಮ ಗೆಲುವು ಸರ್ಕಾರಗಳದ್ದೇ ಆಗಿತ್ತು. ಆದರೆ ಇಲ್ಲಿ ಹಲವು ರೀತಿಯ ಪರ ವಿರೋಧ ವಿಚಾರಗಳನ್ನು, ವ್ಯಾಪಕವಾಗಿ ವ್ಯವಸ್ಥಿತವಾಗಿ ಬಿತ್ತಲಾಯಿತು. ಎಪ್ಪತ್ತು ಮತ್ತು ಎಂಬತ್ತರ ದಶಕಗಳ ಹೋರಾಟಗಳಿಗೂ ನಂತರ ನಡೆಯುತ್ತಿರುವ ಹೋರಾಟಗಳಿಗೂ ಬಹಳ ದೊಡ್ಡ ರೀತಿಯ ವ್ಯತ್ಯಾಸಗಳಿವೆ. ಇದು ಬರಿಯ ಸೈದ್ಧಾಂತಿಕ ವಿಚಾರಗಳ ಹಾಗೂ ಬದ್ಧತೆಯ ಕೊರತೆಯ ಕಾರಣಗಳಿಂದ ಮಾತ್ರ ಹೀಗಾಗಿದೆ ಎನ್ನುವಂತಿಲ್ಲ ಇದಕ್ಕೆ ಹಲವು ಕಾರಣಗಳಿವೆ.

ಮೊದಲನೆಯದಾಗಿ ಪರಿಸರವನ್ನು ಉಳಿಸಬೇಕೆನ್ನುವವರಲ್ಲೂ ಹಲವು ಅಭಿಪ್ರಾಯಗಳಿವೆ. ಇವರೆಲ್ಲರೂ ಪರಿಸರದ ಬಗ್ಗೆ ನಿಜವಾದ ಕಾಳಜಿಯನ್ನು ಇಟ್ಟುಕೊಂಡಿರುವವರೇ ಎಂದುಕೊಂಡರೂ, ಇವರಲ್ಲಿ ಆಧುನಿಕ ಜೀವನ ಕ್ರಮವನ್ನು ಒಪ್ಪಿಕೊಂಡ ಮೇಲೆ ಸ್ವಲ್ಪ ಮಟ್ಟಿನ ರಾಜಿ ಅನಿವಾರ್ಯ ಎನ್ನುವವರಿದ್ದಾರೆ. ನಮಗೆ ರಸ್ತೆ, ವಿದ್ಯುತ್ ಮುಂತಾದವು ಬೇಕೇಬೇಕು ಎಂದಮೇಲೆ ಅರಣ್ಯನಾಶವೂ ಅನಿವಾರ್ಯವಾದ್ದರಿಂದ ಮರಗಿಡಗಳನ್ನು ಬೆಳೆದರಾಯ್ತು ಎಂದುಕೊಂಡವರಿದ್ದಾರೆ. ನೀರಿಲ್ಲದವರಿಗೆ ನೀರು ನೀಡುವುದು, ಪುಣ್ಯಕಾರ್ಯ ಎನ್ನುವವರಿದ್ದಾರೆ. ಹಾಗೇ ಪರಿಸರದ ವಿಚಾರದಲ್ಲಿ ಯಾವುದೇ ರಾಜಿಗೂ ಸಿದ್ಧವಿಲ್ಲದವರೂ ಇದ್ದಾರೆ.

ಈ, ಎಲ್ಲ ವಿಚಾರಗಳನ್ನು ಬಿಟ್ಟು ಯೋಚನೆ ಮಾಡಿದರೂ ಕೂಡಾ ಈ ಜಲವಿದ್ಯುತ್ ಯೋಜನೆಗಳಿಗಾಗಲೀ, ನದೀತಿರುವು ಯೋಜನೆಗಳಿಗಾಗಲೀ, ಪಶ್ಚಿಮ ಘಟ್ಟಗಳ ಜೀವ ವೈವಿದ್ಯವನ್ನು ನಾಶ ಮಾಡುವ ಯಾವುದೇ ಯೋಜನೆಗೆ ಸ್ಥಳೀಯ ಕೃಷಿಕರಿಂದ ಅಥವಾ ಕೃಷಿಕಾರ್ಮಿಕರಿಂದ ಯಾಕೆ ವ್ಯಾಪಕವಾದ ವಿರೋಧ ಬರುತ್ತಿಲ್ಲ? ಇದಕ್ಕೆ ಹಲವು ಕಾರಣಗಳಿವೆ. ಪರಿಸರವಾದಿಗಳ ಸಂಘಟನಾತ್ಮಕ ಸಮಸ್ಯೆಗಳು ಸ್ವಲ್ಪಮಟ್ಟಿಗೆ ಕಾರಣವಿದ್ದರೆ. ಇನ್ನಿತರ ಕಾರಣಗಳು ಹಲವಿವೆ.

ಜಲ ವಿದ್ಯುತ್ ಯೋಜನೆಗಳು

ಮುಖ್ಯವಾಗಿ ಇಲ್ಲಿನ ಕೃಷಿಕರು ಹಲವು ರೀತಿಗಳಿಂದ ಬಳಲಿಹೋಗಿದ್ದಾರೆ. ಯಾವ ಕೃಷಿಯೂ ನಿರಂತರ ಲಾಭದಾಯಕವಲ್ಲದೆ ಕೃಷಿಕ ಸಾಲದಲ್ಲಿ ಮುಳುಗಿ ಹೋಗಿದ್ದಾನೆ. ಎಲ್ಲ ಸರ್ಕಾರಗಳು ಮೂಗಿಗೆ ತುಪ್ಪ ಸವರಿದಂತೆ ನೀಡಿದ ಯಾವುದೇ ‘ಪ್ಯಾಕೇಜ್’ ಅವನಿಗೆ ಭರವಸೆಯನ್ನು ತುಂಬಿಲ್ಲ. ಈಗಾಗಲೇ ಹಣದ ಅವಶ್ಯಕತೆಗಳಿಗಾಗಿಯೋ ಇನ್ನಾವುದೇ ಕಾರಣಕ್ಕೋ ತನ್ನ ಜಮೀನಿನಲ್ಲಿದ್ದ ಅಲ್ಪಸ್ವಲ್ಪ ಮರಗಳನ್ನು ಮಾರಾಟಮಾಡಿ, ಆ ಜಮೀನು ಕೂಡಾ ಭೂಸವಕಳಿಯಿಂದ ಬರಡಾಗಿದೆ. ಆ ಕಾರಣದಿಂದ ವರ್ಷಕ್ಕೆ ನೂರೈವತ್ತರಿಂದ ಇನ್ನೂರು ಇಂಚುಗಳಷ್ಟು ಮಳೆಯಾಗುವ ಆ ಪ್ರದೇಶದ ಪಾರಂಪರಿಕ ಬೆಳೆಗಳನ್ನು ಬೆಳೆಯಲಾರದ ಸ್ಥಿತಿ ತಲಪಿದ್ದಾನೆ. ಇದರೊಂದಿಗೆ ಈಗಾಗಲೇ ಅನುಷ್ಠಾನಕ್ಕೆ ಬಂದಿರುವ ಹಲವು ಯೋಜನೆಗಳಿಂದಾಗಿ ನಡೆದ ಅರಣ್ಯಪ್ರದೇಶದ ಅತಿಕ್ರಮಣದಿಂದಾಗಿ ಆನೆಯೊಂದೇ ಅಲ್ಲ ಇತರ ಕಾಡು ಪ್ರಾಣಿಗಳೂ ಊರೊಳಗೆ ಬರಲಾರಂಭಿಸಿವೆ. ಇವೆಲ್ಲದರ ಜೊತೆ ಕೃಷಿಗೆ ಕೆಲಸಗಾರರು ಸಿಗದಿರುವುದರಿಂದ ಕೃಷಿಕ ಇನ್ನಷ್ಟು ಸೋತು ಹೋಗಿದ್ದಾನೆ.

ಘಟ್ಟಪ್ರದೇಶದ ದುರ್ಗಮ ನೆಲೆಯಲ್ಲಿರುವ ತನ್ನ ಜಮೀನನ್ನು ಮಾರಾಟ ಮಾಡಿ ಹೋಗೋಣವೆಂದರೆ, ಜಮೀನನ್ನು ಕೊಳ್ಳುವವರಿಲ್ಲದೆ ಕೃಷಿಕ ನಿರಾಶನಾಗಿ ಕುಳಿತಿದ್ದಾನೆ. (ಈ ಭಾಗದ ಜಮೀನನ್ನು ಕಾರ್ಪೊರೇಟ್ ವಲಯದವರೂ ಸಹ ಖರೀದಿಸುತ್ತಿಲ್ಲ). ಇಂತಹ ಸಂದರ್ಭದಲ್ಲಿ ಅಲ್ಲಿಗೆ ಬರುವ ಯಾವುದೇ ಯೋಜನೆ ಅವನಿಗೆ ಹೊಸ ಆಸೆಗಳನ್ನು ತರುತ್ತದೆ. ಹೇಗೂ ಮಾರಲು ಅಸಾಧ್ಯವಾಗಿರುವ ತನ್ನ ಜಮೀನಿಗೆ ಒಳ್ಳೆಯ ಪರಿಹಾರಧನ ದೊರಕಿ ತಾನು ಇಲ್ಲಿಂದ ಮುಕ್ತಿಪಡೆಯಬಹುದು, ಇಲ್ಲವೇ ಯೋಜನೆಗಳಿಂದಾಗಿ ಇಲ್ಲಿಗೆ ಬರುವ ಜನರ ಸಂಖ್ಯೆ ಹೆಚ್ಚಾಗುವುದರಿಂದ ಬೇರೇನಾದರೂ ಕೆಲಸವೋ ವ್ಯಾಪಾರವೋ ಮಾಡಬಹುದೆಂಬ ಹವಣಿಕೆಯಲ್ಲಿದ್ದಾನೆ. ಇವರಲ್ಲಿ ಕೆಲವರ ಮಕ್ಕಳು ವಿದ್ಯಾಬ್ಯಾಸ ಮುಗಿಸಿ ಈಗಾಗಲೇ ಇಲ್ಲಿಂದ ದೂರವಾಗಿದ್ದಾರೆ. ಪ್ರತೀ ಬಾರಿಯೂ ಈ ಯೋಜನೆಗಳ ವಿಚಾರ ಜನಾಭಿಪ್ರಾಯ ಸಂಗ್ರಹ ಸಭೆಗಳಲ್ಲಿ ಮತ್ತು ಇನ್ನಿತರ ಮಾಧ್ಯಮಗಳಲ್ಲಿ ಇವರು ತಮ್ಮ ಅಸಹಾಯಕತೆ ಮತ್ತು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಸಾಧ್ಯವಿದ್ದವರು ಈಗಾಗಲೇ ತಮ್ಮ ಕಾಫಿ ತೋಟಗಳನ್ನು ಉದ್ಯಮಿಗಳಿಗೆ ಮಾರಿದ್ದಾರೆ. ಅಲ್ಲೆಲ್ಲ ರೆಸಾರ್ಟುಗಳು ಪ್ರಾರಂಭವಾಗಿವೆ. ಹೇಗಾದರೂ ಇಲ್ಲಿಂದ ಬಿಡುಗಡೆ ದೊರೆಯಲಿ ಎಂಬ ಹತಾಶ ಸ್ಥಿತಿಯಲ್ಲಿ, ಈ ಎಲ್ಲ ಪರಿಸರ ನಾಶದ ಯೋಜನೆಗಳನ್ನು ಪ್ರಬಲವಾಗಿ ಸಮರ್ಥಿಸುತ್ತಿರುವ ಇವರ ದೌರ್ಭಾಗ್ಯವನ್ನು ಅರ್ಥಮಾಡಿಕೊಂಡು, ಅವರಿಗೆ ಅತ್ಯಂತ ಹೆಚ್ಚಿನ ಪರಿಹಾರವನ್ನು ಕೊಟ್ಟು ಅವರು ಬೇರೆಡೆಗೆ ಹೋಗಲು ಅನುವು ಮಾಡಿಕೊಡಬೇಕು.

ಪಶ್ಚಿಮ ಘಟ್ಟದಲ್ಲಿ ರೈಲ್ವೇ

ದೊಡ್ಡ ಕೈಗಾರಿಕೆಗಳಿಗೆ ಕೊಡುತ್ತಿರುವ ರಿಯಾಯಿತಿಗಳ ಮುಂದೆ ಈ ಮೊತ್ತ ನಗಣ್ಯವಾದುದು. ಯಾವುದೇ ಯೋಜನೆಯಲ್ಲಿ ಸ್ಥಳಾಂತರಿಸ ಬೇಕಾಗಿರುವ ಎಲ್ಲ ಜನರಿಗೆ ಕೊಡಬೇಕಾದ ಪರಿಹಾರದ ಮೊತ್ತ ಕೆಲವು ಕೋಟಿ ರೂಪಾಯಿಗಳು ಮಾತ್ರವಾಗಿರುತ್ತದೆ.

ಇನ್ನು ಇಲ್ಲಿರುವ ಹಳೆಯ ತಲೆಮಾರಿನ ಸ್ಥಳೀಯ ಕೂಲಿ ಕಾರ್ಮಿಕರಾದರೂ ಅಷ್ಟೆ ಹೆಚ್ಚಿನವರು ಅಧಿಕ ಕೂಲಿ ದೊರೆಯುವ ಇತರ ಪ್ರದೇಶಗಳಿಗೋ ನಗರಗಳಿಗೋ ಹೋಗಿದ್ದಾರೆ. ಹೊಸ ಯೋಜನೆಗಳೇನಾದರೂ ಬಂದರೆ ಇನ್ನೂ ಉತ್ತಮ ಕೂಲಿ ದೊರೆಯುವ ನಿರೀಕ್ಷೆಯಲ್ಲಿ ಇವರಿದ್ದರೆ, ಸಣ್ಣ ಪುಟ್ಟ ವ್ಯಾಪಾರಿಗಳು ಟೀ ಅಂಗಡಿಗಳವರು ಇದೇ ಮನಸ್ಥಿತಿಯಲ್ಲಿದ್ದಾರೆ. ಇವರೆಲ್ಲ ಯಾವುದೇ ದೂರಗಾಮೀ ಪರಿಣಾಮಗಳ ಬಗ್ಗೆ ಯೋಚಿಸದೆ ತಮ್ಮ ಬದುಕು ಉತ್ತಮಗೊಂಡೀತೆಂಬ ಮನುಷ್ಯ ಸಹಜ ಆಸೆಯಿಂದ ಈ ಯೋಜನೆಗಳನ್ನು ಸ್ವಾಗತಿಸುತ್ತ ಕುಳಿತಿದ್ದಾರೆ.

ಇದಕ್ಕಿಂತ ಶಕ್ತಿಶಾಲಿ, ಪ್ರಭಾವಶಾಲಿ ಗುಂಪೊಂದಿದೆ. ಇವರಲ್ಲಿ ಕೆಲವರು ನೇರವಾಗಿ ಅಭಿವೃದ್ಧಿಯ ಹರಿಕಾರರಂತೆ ಮಾತನಾಡುತ್ತ ಈ ಎಲ್ಲ ಯೋಜನೆಗಳನ್ನು ನೇರವಾಗಿ ಸಮರ್ಥಿಸುತ್ತ ಈ ಮೊದಲು ತಿಳಿಸಿದ, ಸ್ವಲ್ಪ ಮಟ್ಟಿಗೆ ರಾಜಿ ಅನಿವಾರ್ಯ ಎನ್ನುವ, ಪ್ರಗತಿಪರರ ಹಾಗೂ ಬುದ್ಧಿಜೀವಿಗಳ ಮಾತನ್ನು ತಮ್ಮ ಸಮರ್ಥನೆಗಾಗಿ ಬಳಸಿಕೊಳ್ಳುತ್ತಾರೆ. ಇನ್ನು ಕೆಲವರು ಇವರಿಗಿಂತಲೂ ಹೆಚ್ಚು ಅಪಾಯಕಾರಿಗಳು. ಇವರು ಈ ಯೋಜನೆಗಳನ್ನು ವಿರೋಧಿಸುವವರ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಾ, ಈ ಎಲ್ಲ ಯೋಜನೆಗಳ ಅನುಷ್ಠಾನವಾದರೆ ತಮಗೆ ದೊರೆಯಬಹುದಾದ ಲಾಭದ ಲೆಕ್ಕಾಚಾರದಲ್ಲಿರುತ್ತಾರೆ.

ಕಾಫಿ ತೋಟದಲ್ಲಿ ಕಾಡಾನೆಗಳು

ಇವರುಗಳು ಮಾತ್ರವಲ್ಲ, ಈ ಎಲ್ಲ ಯೋಜನೆಗಳಿಂದ ಲಾಭಪಡೆಯುವವರು, ಇನ್ನೂ ಅನೇಕರಿದ್ದಾರೆ. ಇವರಲ್ಲಿ ಗುತ್ತಿಗೆದಾರರದು, ಮರದ ವ್ಯಾಪಾರಿಗಳು, ಮರಳು ದಂಧೆಯವರು, ಗ್ರಾನೈಟ್ ಗಣಿಗಾರಿಕೆಯವರು, ರಿಯಲ್ ಎಸ್ಟೇಟ್ ದಳ್ಳಾಳಿಗಳು ಮತ್ತು ಇವರಿಂದ ಲಾಭ ಪಡೆಯುತ್ತಿರುವ ಅನೇಕ ಸ್ಥಳೀಯರು ಮತ್ತು ಕೆಲವರು ಪರ್ತಕರ್ತರೂ ಇದ್ದಾರೆ. ಇವರಿಗೆ ಜಲವಿದ್ಯುತ್ ಯೋಜನೆಯಾಗಲೀ ನದೀ ತಿರುವು ಯೋಜನೆಯಾಗಲೀ, ರಸ್ತೆ ನಿರ್ಮಾಣವಾಗಲೀ ಯಾವ ವೆತ್ಯಾಸವೂ ಇಲ್ಲ. ಯಾವುದೇ ಯೋಜನೆ ಇವರ ಪಾಲಿಗೆ ಹಿಂಡುವ ಹಸುವಾಗಬಲ್ಲದು. ಇವರುಗಳು ಬಹಳ ಸಮರ್ಥವಾಗಿ ಸ್ಥಳೀಯ ಜನರಲ್ಲಿ ಹೊಸ ಆಸೆ-ಆಕಾಂಕ್ಷೆಗಳನ್ನು ತುಂಬಬಲ್ಲರು. ಈ ಕಾರಣಗಳಿಂದಾಗಿ ಈ ಎಲ್ಲ ಯೋಜನೆಗಳ ವಿರೋಧವಾಗಿ ಸಭೆ, ಜಾತಾ, ಸತ್ಯಾಗ್ರಹ, ಜನಾಭಿಪ್ರಾಯ ಸಂಗ್ರಹ ಸಭೆ ಏನೇ ನಡೆಯಲಿ, ಸ್ಥಳೀಯ ಕೃಷಿಕ-ಕಾರ್ಮಿಕರಿಂದ ದೊಡ್ಡ ಪ್ರಮಾಣದ ಬೆಂಬಲ ಸಿಗುತ್ತಿಲ್ಲ, ಆದ್ದರಿಂದ ಈ ಕಾರ್ಯಕ್ರಮಗಳಲ್ಲಿ ಹೊರಗಿನವರ ಸಂಖ್ಯೆಯೇ ಹೆಚ್ಚಾಗಿ ಕಾಣಸಿಗುತ್ತದೆ ಇದರಿಂದಾಗಿ ಈ ಯೋಜನೆಗಳಿಗೆ ಸ್ಥಳೀಯರ ವಿರೋಧವಿಲ್ಲ, ಈ ಪರಿಸರವಾದಿಗಳು ಹೊರಗಿನವರು, ಹೊಟ್ಟೆ ತುಂಬಿದ ಸುಶಿಕ್ಷಿತರು, ಮೇಲ್ವರ್ಗದ ಜನ ಇತ್ಯಾದಿ ವಾದಗಳು ಹುಟ್ಟಿಕೊಳ್ಳುತ್ತಿವೆ.

  • ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)

ಕಳೆದು ಹೋದ ದಿನಗಳು ಹಿಂದಿನ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಕಾಫಿ ವಲಯದ ಜನರು ತಮ್ಮ ಉಳಿವಿಗಾಗಿ ಏನೂ ಪ್ರಯತ್ನವೇ ಮಾಡಲಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...