HomeಅಂಕಣಗಳುKarnataka against SIRನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

- Advertisement -
- Advertisement -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾನುವಾರ (ಜೂ.21) ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಸಮಾವೇಶದಿಂದ ಟ್ರಾಫಿಕ್ ಜಾಮ್ ಉಂಟಾಗಿ ನೀಟ್ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದರು.

ಅರಮನೆ ಮೈದಾನದಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ನಿರೀಕ್ಷೆ ಮೀರಿ ಜನರು ಭಾಗವಹಿಸಿ ಯಶಸ್ವಿ ಮಾಡಿದ್ದಾರೆ. ಆ ಸಮಯದಲ್ಲಿ ಬೆಂಗಳೂರಿನ ಜನರಿಗೆ ಟ್ರಾಫಿಕ್ ಸಮಸ್ಯೆ ಆಗುವ ಮೂಲಕ ಸಣ್ಣಪುಟ್ಟ ತೊಂದರೆಗಳಾಗಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ.

ಭಾನುವಾರ ಜನರ ಓಡಾಟ ಕಡಿಮೆ ಇರುವ ಕಾರಣಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆ ದಿನವೇ ನೀಟ್ ಪರೀಕ್ಷೆ ಇರುವ ಕಾರಣ ನೀಟ್ ಪರೀಕ್ಷೆಯ ಸಮಯವನ್ನು ನೋಡಿಯೇ ಕಾರ್ಯಕ್ರಮದ ವೇಳಾಪಟ್ಟಿಯನ್ನು ಕೂಡ ನಿಗದಿ ಮಾಡಿದ್ದೇವೆ. ಆದರೂ ನೀಟ್ ಪರೀಕ್ಷೆಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಎರಡು ಮೂರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದೆ ಉಳಿದಿದ್ದಾರೆ ಎಂದು ನೋಡಿದೆ.

ನಮ್ಮ ಕಾರ್ಯಕ್ರಮದಿಂದ ಇಂತಹ ಪ್ರಮಾದ ನಡೆದಿದ್ದರೆ ಖಂಡಿತಾ ಪರೀಕ್ಷೆಗೆ ಹಾಜರಾಗದೆ ಇರುವ ಎರಡು-ಮೂರು ವಿದ್ಯಾರ್ಥಿಗಳಿಗೆ ಹಾಗೂ‌ ಜನ ಸಾಮಾನ್ಯರಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಪರೀಕ್ಷೆಯಿಂದ ಹೊರಗುಳಿದಿರುವ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ, ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ನಮ್ಮ ತಂಡ ಹೋಗಲಿದೆ. ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಗೊತ್ತಾಗಿದೆ.

ಲಕ್ಷಾಂತರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬ ಮಾಹಿತಿ ಮೇರೆಗೆ ನಮ್ಮ ಸರ್ಕಾರದ ಗೃಹ ಇಲಾಖೆ ಎರಡು ದಿನದ ಮುಂಚೆ ಬದಲಿ ರಸ್ತೆಗಳನ್ನು ಪ್ರಕಟಣೆ ಮಾಡಿತ್ತು. ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡಿತ್ತು. ಅದನ್ನು ಮೀರಿಯೂ ಲಕ್ಷಾಂತರ ಜನರು ನಮ್ಮ ಕಾರ್ಯಕ್ರಮಕ್ಕೆ ಬಂದಿರುವ ಕಾರಣ ಸಣ್ಣಪುಟ್ಟ ಲೋಪಗಳು ಆಗಿರಬಹುದು ಎಂದರು.

ಬಿಜೆಪಿಯ ನಾಯಕರ ಆರೋಪಗಳನ್ನು ನೋಡಿದ್ರೆ ಬಿಜೆಪಿ ನಾಯಕರಿಗೆ ನಾಚಿಕೆ ಅನ್ನೋದೇ ಇಲ್ವಾ? ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕಿಡಿಕಾರಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿ ಸಿಲುಕಿದ್ದಾರೆ. ದೇಶದಾದ್ಯಂತ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ದೇಶದಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ಯಾರು? ಎಂದು ಪ್ರಶ್ನಿಸಿದರು.

ಆತ್ಮಹತ್ಯೆಗಳು ಮಾಡಿಕೊಂಡ ವಿದ್ಯಾರ್ಥಿಗಳು ಆತ್ಮಹತ್ಯೆ ಪತ್ರವನ್ನು ಬರೆದು ಬಿಜೆಪಿ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಗೆ ಕಾರಣವಾದವರು ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಲು ಬಿಜೆಪಿಗೆ ಧೈರ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಯುವ ಸಂಸದರಿಗೆ ನೈತಿಕತೆ ಇದ್ದರೆ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರ ಕೊಡಲಿ. ದೇಶದಾದ್ಯಂತ ವಿದ್ಯಾರ್ಥಿಗಳು ಏಕೆ ಆತಂಕಕ್ಕೆ ಒಳಗಾದರು? ಪ್ರಶ್ನೆ ಪತ್ರಿಕೆ ಸೋರಿಕೆ ಏಕೆ ನಡೆಯಿತು? ಪರೀಕ್ಷೆಯ ವಿಶ್ವಾಸಾರ್ಹತೆ ಏಕೆ ಕುಸಿಯಿತು? ಮರುಪರೀಕ್ಷೆಯ ಅನಿವಾರ್ಯತೆ ಏಕೆ ಎದುರಾಯಿತು? ಈ ಪ್ರಶ್ನೆಗಳಿಗೆ ಉತ್ತರ ಕೊಡುವ ಬದಲು ಕಾಂಗ್ರೆಸ್ ಮೇಲೆ ಬೆರಳು ತೋರಿಸುವುದು ಬಿಜೆಪಿಯ ಹಳೆಯ ಚಾಳಿ ಎಂದು ವಾಗ್ದಾಳಿ ನಡೆಸಿದರು.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಉತ್ತರ ಕೊಡುವವರು ಯಾರು? ಪರೀಕ್ಷಾ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಹೋಗುವಂತೆ ಮಾಡಿದವರು ಯಾರು? ಎಂದು ಹರಿಪ್ರಸಾದ್ ಪ್ರಶ್ನಿಸಿದರು.

ಈಗ ಕರ್ನಾಟಕದಲ್ಲಿ ನಡೆದ ನಮ್ಮ ಕಾರ್ಯಕ್ರಮವನ್ನು ಕಾರಣವನ್ನಾಗಿ ಮಾಡಿ ವಿದ್ಯಾರ್ಥಿಗಳ ಗೈರುಹಾಜರಾತಿಯನ್ನು ಕಾಂಗ್ರೆಸ್ ಮೇಲೆ ಹೊರಿಸಲು ಯತ್ನಿಸುತ್ತಿದ್ದಾರೆ. ಇದು ರಾಜಕೀಯ ದಿವಾಳಿತನದ ಪರಮಾವಧಿ. ಮೈಸೂರಿನಲ್ಲಿ 1,847 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಾದಗಿರಿಯಲ್ಲಿ 286 ಅಭ್ಯರ್ಥಿಗಳು ಗೈರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯದ ಹಲವೆಡೆ ಇದೇ ಪರಿಸ್ಥಿತಿ ಕಂಡುಬಂದಿದೆ. ಹಾಗಾದರೆ ಈ ಎಲ್ಲ ಜಿಲ್ಲೆಗಳಲ್ಲೂ ಕಾಂಗ್ರೆಸ್ ಕಾರ್ಯಕ್ರಮ ನಡೆದಿತ್ತೇ? ಎಂದು ಕೇಳಿದರು.

ಬೆಂಗಳೂರಿನಲ್ಲಿ ಕಾರ್ಯಕ್ರಮ ಇತ್ತು ಎಂಬ ಕಾರಣಕ್ಕೆ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿಲ್ಲ ಎಂಬ ವಾದವನ್ನು ಮಾಡುವವರು ವಿದ್ಯಾರ್ಥಿಗಳ ನೋವನ್ನು ಯಾಕೆ ಮೊದಲೇ ಕೇಳಲಿಲ್ಲ. ಈ ಪ್ರಶ್ನೆಗಳಿಗೆ ಉತ್ತರ ನೀಡದೆ ಕಾಂಗ್ರೆಸ್ ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡು ಮಾತನಾಡುವುದು ನಾಚಿಕೆಗೇಡಿನ ಸಂಗತಿ ಎಂದರು.

ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಹೊಂದಿದೆ. ನಾವು ವಿದ್ಯಾರ್ಥಿಗಳ ಹಕ್ಕುಗಳ ಪರವಾಗಿ ನಿಲ್ಲುತ್ತೇವೆ. ಆದರೆ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ರಾಜಕೀಯ ಆರೋಪಗಳ ಹಿಂದೆ ಅಡಗಿಕೊಳ್ಳುತ್ತಿದೆ. ವಿದ್ಯಾರ್ಥಿಗಳ ಬದುಕಿನೊಂದಿಗೆ ಆಟವಾಡಿದವರು ಇಂದು ನೀತಿ ಪಾಠ ಹೇಳಲು ಹೊರಟಿರುವುದು ಈ ದೇಶದ ದುರಂತ ಎಂದು ವಾಗ್ದಾಳಿ ನಡೆಸಿದರು.

ಮೊದಲು ನೀಟ್ ಹಗರಣದ ಬಗ್ಗೆ ದೇಶಕ್ಕೆ ಕ್ಷಮೆ ಕೇಳಿ. ನಂತರ ಕಾಂಗ್ರೆಸ್ ಬಗ್ಗೆ ಮಾತನಾಡಿ. ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದವರ ಬಾಯಲ್ಲಿ ನೈತಿಕತೆಯ ಮಾತುಗಳು ಶೋಭೆ ತರುವುದಿಲ್ಲ. ಮೊದಲು ಈ ದೇಶದ ಶಿಕ್ಷಣ ಸಚಿವ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗ ಅಧ್ಯಕ್ಷ ರಮೇಶ್ ಬಾಬು, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಎಂಎಲ್ ಸಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

























ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...