Homeಅಂತರಾಷ್ಟ್ರೀಯತುರ್ತು ಬಳಕೆಗಾಗಿ ಚೀನಾದ ಸಿನೊವಾಕ್ ಕೊರೊನಾ ಲಸಿಕೆಗೆ WHO ಅನುಮತಿ

ತುರ್ತು ಬಳಕೆಗಾಗಿ ಚೀನಾದ ಸಿನೊವಾಕ್ ಕೊರೊನಾ ಲಸಿಕೆಗೆ WHO ಅನುಮತಿ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ( WHO) ಮಂಗಳವಾರ ಸಿನೊವಾಕ್ ಕೊರೊನಾ ಲಸಿಕೆಯನ್ನು ತುರ್ತು ಬಳಕೆಗಾಗಿ ಅನುಮೋದಿಸಿದೆ. ಇದು WHO ನ ಅನುಮತಿ ಪಡೆದ ಎರಡನೇ ಚೀನೀ ಲಸಿಕೆಯಾಗಿದೆ. WHO ಎರಡು-ಡೋಸ್ ಲಸಿಕೆಗೆ ಸಹಿ ಹಾಕಿದ್ದು ಇದನ್ನು ಈಗಾಗಲೇ ವಿಶ್ವದ ಹಲವಾರು ದೇಶಗಳಿಗೆ ನೀಡಲಾಗುತ್ತಿದೆ.

“WHO ಇಂದು ಸಿನೊವಾಕ್-ಕೊರೊನಾವಾಕ್ ಕೊರೊನಾ ಲಸಿಕೆಯನ್ನು ತುರ್ತು ಬಳಕೆಗಾಗಿ ಮೌಲ್ಯೀಕರಿಸಿದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ತಿಂಗಳು ಸಿನೊಫಾರ್ಮ್ ಎಂಬ ಕೊರೊನಾ ಲಸಿಕೆಯನ್ನು WHO ಅನುಮೋದಿಸಿತ್ತು. ಸಿನೋಫಾರ್ಮ್ WHO ಅನುಮೋದಿಸಿದ ಮೊದಲ ಚೀನಿ ಲಸಿಕೆಯಾಗಿದೆ.

ಭಾರತ, ದಕ್ಷಿಣ ಕೊರಿಯಾ ಮತ್ತು ಯುರೋಪಿಯನ್‌ ಒಕ್ಕೂಟಗಳಲ್ಲಿ ಉತ್ಪಾದಿಸಲಾಗುತ್ತಿರುವ ಫಿಜರ್ / ಬಯೋಟೆಕ್, ಮಾಡರ್ನಾ, ಜಾನ್ಸನ್ & ಜಾನ್ಸನ್ ಮತ್ತು ಆಸ್ಟ್ರಝೆನಕ ಸಂಸ್ಥೆಗಳು ತಯಾರಿಸಿರುವ ಲಸಿಕೆಯನ್ನು WHO ಈಗಾಗಲೆ ತುರ್ತು ಬಳಕೆಗೆ ಅನುಮತಿ ನೀಡಿದೆ.

ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ದುಷ್ಕರ್ಮಿಗಳು 

ವಿಶೇಷವಾಗಿ ತಮ್ಮದೇ ಆದ ಅಂತರರಾಷ್ಟ್ರೀಯ ಗುಣಮಟ್ಟದ ನಿಯಂತ್ರಕವಿಲ್ಲದ ದೇಶಗಳಿಗೆ WHO ಅನುಮತಿಯು ಲಸಿಕೆಯನ್ನು ತ್ವರಿತವಾಗಿ ಅನುಮೋದಿಸಲು ಮತ್ತು ಆಮದು ಮಾಡಿಕೊಳ್ಳಲು ದಾರಿ ಮಾಡಿಕೊಡುತ್ತದೆ.

ಎಎಫ್‌ಪಿ ಎಣಿಕೆಯ ಪ್ರಕಾರ, ಸಿನೊವಾಕ್ ಲಸಿಕೆಯು ಈಗಾಗಲೇ ವಿಶ್ವದ 22 ದೇಶಗಳಲ್ಲಿ ಬಳಕೆಯಲ್ಲಿದೆ. ಚೀನಾ ಹೊರತುಪಡಿಸಿ ಚಿಲಿ, ಬ್ರೆಜಿಲ್, ಇಂಡೋನೇಷ್ಯಾ, ಮೆಕ್ಸಿಕೊ, ಥೈಲ್ಯಾಂಡ್ ಮತ್ತು ಟರ್ಕಿ ದೇಶಗಳು ಸಿನೊವಾಕ್ ಲಸಿಕೆಯನ್ನು ಬಳಸುತ್ತದೆ.

WHO ನ ಇಮ್ಯುನೈಸೇಶನ್ ಕುರಿತ ತಜ್ಞರ ಕಾರ್ಯತಂತ್ರದ ಸಲಹಾ ಗುಂಪು ಲಸಿಕೆಯನ್ನು ಪರಿಶೀಲಿಸಿದೆ ಮತ್ತು ಅದರ ಬಳಕೆಯ ಬಗ್ಗೆ ಅವರ ಸಲಹೆಯನ್ನು ಪ್ರಕಟಿಸಿದೆ.

“ಎರಡು ಮತ್ತು ನಾಲ್ಕು ವಾರಗಳ ಅಂತರದಲ್ಲಿ ಎರಡು-ಡೋಸ್‌ಗಳನ್ನು 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಕರಿಗೆ ಈ ಲಸಿಕೆಯನ್ನು WHO ಶಿಫಾರಸು ಮಾಡಿದೆ” ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಆತಂಕ: ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...