Homeನಿಜವೋ ಸುಳ್ಳೋವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ

ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಕೊರೊನಾ ವಿರುದ್ಧದ ಹೋರಾಟದಲ್ಲಿ ಲಾಕ್‌ಡೌನ್‌ ವಿಸ್ತರಿಸಲು ಆದೇಶ ಹೊರಡಿಸಿದೆ ಎಂಬ ಸಂದೇಶ ವೈರಲ್‌ ಆಗಿದೆ.

“ವಿಶ್ವ ಆರೋಗ್ಯ ಸಂಸ್ಥೆ ಪ್ರೋಟೋಕಾಲ್ ಮತ್ತು ಅತ್ಯಂತ ಅಪಾಯಕಾರಿ ವೈರಸ್ ಅನ್ನು ನಿಯಂತ್ರಿಸಲು ಲಾಕ್‌ಡೌನ್‌ ಅವಧಿಗಳ ಕಾರ್ಯವಿಧಾನ” ಹೆಸರಿನಲ್ಲಿ ಮಧ್ಯೆ ಮಧ್ಯೆ ಒಂದು ವಾರಗಳ ಬಿಡುವು ಕೊಟ್ಟು ಜೂನ್‌ ಅಂತ್ಯದವರೆಗೂ ಲಾಕ್‌ಡೌನ್‌ ಚಾಲ್ತಿಯಲ್ಲಿರುತ್ತದೆ ಎಂದು ವಾಟ್ಸಾಪ್‌, ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ಗಳಲ್ಲಿ ಸುಳ್ಳು ಸುದ್ದಿ ಹರಡಲಾಗಿದೆ.

*WORLD HEALTH ORGANISATION PROTOCOL & PROCEDURE OF LOCKDOWN PERIODS FOR CONTROLLING A MOST DANGEROUS VIRUS*STEP 1 – 1…

Posted by Hema Sankhe on Saturday, April 4, 2020

ಆ ಸಂದೇಶದಲ್ಲಿ ಒಂದು ದಿನದ ಜನತಾ ಕರ್ಫ್ಯೂ ಮತ್ತು 21ದಿನಗಳ ಲಾಕ್‌ಡೌನ್ ನಂತರ, ಡಬ್ಲ್ಯುಎಚ್‌ಒ ಐದು ದಿನಗಳವರೆಗೆ ವಿಶ್ರಾಂತಿ ನೀಡುವಂತೆ ಪ್ರಸ್ತಾಪಿಸುತ್ತದೆ. ನಂತರ ಮತ್ತೆ 28 ದಿನಗಳ ಕಾಲ ಲಾಕ್‌ಡೌನ್‌ ಘೋಷಿಸುತ್ತದೆ. ಅದು ಮುಗಿದಾಗ 5 ದಿನಗಳ ವಿಶ್ರಾಂತಿ ಜೊತೆಗೆ ಮತ್ತೆ 14 ದಿನಗಳ ಲಾಕ್‌ಡೌನ್‌ ಇದ್ದು ಅಲ್ಲಿಗೆ ಕೊನೆಯಾಗುತ್ತದೆ ಎಂದು ಬರೆಯಲಾಗಿದೆ. ಬಹಳಷ್ಟು ಜನ ಇದನ್ನು ನಂಬಿಬಿಟ್ಟಿದ್ದಾರೆ.

Fact Check

ಮೊದಲಿಗೆ WHO ಲಾಕ್‌ಡೌನ್ ಟೈಮ್‌ಲೈನ್ ಅನ್ನು ಬಿಡುಗಡೆಮಾಡಿರುವುದು ಎಲ್ಲಿಯೂ ಸಹ ವರದಿಯಾಗಿಲ್ಲ. ಕೊರೊನಾ ರೋಗದ ಹರಡುವಿಕೆಯನ್ನು ಅವಲಂಬಿಸಿ ಎಷ್ಟು ದಿನ ಲಾಕ್‌ಡೌನ್ ಮಾಡಬೇಕೆಂಬ ಮಾರ್ಗಸೂಚಿಗಳನ್ನು ಹೊರಡಿಸುವುದು ದೇಶಗಳಿಗೆ ಬಿಟ್ಟಿದ ವಿಚಾರವಾಗಿದೆ.

ಈ ಸುದ್ದಿಯನ್ನು ವಿಶ್ವ ಆರೋಗ್ಯ ಸಂಸ್ಥೆಯು ಆಧಾರ ರಹಿತ ಮತ್ತು ಮಹಾನ್‌ ಸುಳ್ಳು ಎಂದು ಕರೆದಿದೆ. ನಾವು ಈ ರೀತಿಯ ನಿರ್ದೇಶನ ನೀಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದಿದೆ. ಈ ಕುರಿತು ಅದು ಅಧಿಕೃತವಾಗಿ ಟ್ವೀಟ್‌ ಮಾಡಿದೆ ನೋಡಿ.

ಆದರೆ ಮೇಲಿನ ವೈರಲ್ ಆದ ಸಂದೇಶವು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಇಬ್ಬರು ಭಾರತೀಯ ಮೂಲದ ಸಂಶೋಧಕರ ಸಂಶೋಧನಾ ಪ್ರಬಂಧವನ್ನು ಆಧರಿಸಿದ್ದು, ಇದು ವೈರಸ್‌ ಹರಡುವಿಕೆಯನ್ನು ತಡೆಯಲು ಆವರ್ತಕ ವಿಶ್ರಾಂತಿಯೊಂದಿಗೆ ನಿರಂತರ ಲಾಕ್‌ಡೌನ್ ಅನ್ನು ಪ್ರಸ್ತಾಪಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಗೂ ಆ ಸಂದೇಶಕ್ಕೂ ಯಾವುದೇ ಸಂಬಂಧವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...