Homeಕರ್ನಾಟಕಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? - ಸಿದ್ದರಾಮಯ್ಯ ಪ್ರಶ್ನೆ

ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ನಾಡಧ್ವಜ ಆರೋಹಣವನ್ನು ವಿರೋಧಿಸಿ ಜನಾಕ್ರೋಶಕ್ಕೆ ಕಾರಣವಾಗಿದ್ದನ್ನು ಅವರು ನೆನಪಿಸಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವದ ದಿನ ನಾಡಧ್ವಜ ಹಾರಿಸದೆ ಹಲವಾರು ಜಿಲ್ಲಾಡಳಿತಗಳು ಅಗೌರವ ತೋರಿಸಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, “ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿಯವರೇ ನಾಡಧ್ವಜ ಆರೋಹಣವನ್ನು ವಿರೋಧಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ಯಾರ ಕುಮ್ಮಕ್ಕಿದೆ” ಎಂದು ಅವರು ಪ್ರಶ್ನಿಸಿದ್ದಾರೆ.

ಕನ್ನಡ ರಾಜ್ಯೋತ್ಸವದಂದು ಹಲವು ಜಿಲ್ಲಾಕೇಂದ್ರದಲ್ಲಿ ಕನ್ನಡ ಧ್ವಜ ಹಾರಿಸದೇ ಇರುವುದು ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದಾದ್ಯಂತ ಕನ್ನಡಿಗರು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೀಗ ವಿಪಕ್ಷ ನಾಯಕ ಕೂಡಾ ಅವರೊಂದಿಗೆ ಧ್ವನಿ ಸೇರಿಸಿದ್ದಾರೆ.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ‌, “ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಮಕ್ಷಮದಲ್ಲಿಯೇ ನಾಡಧ್ವಜ ಹಾರಿಸಿರುವಾಗ ಜಿಲ್ಲಾಡಳಿತದ ಉಪೇಕ್ಷೆ ಯಾರ ಕುಮ್ಮಕ್ಕಿನಿಂದ ನಡೆಯಿತು ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು” ಎಂದು ಪ್ರಶ್ನಿಸಿದ್ದಾರೆ.

“ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಧ್ವಜವನ್ನು ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾರಿಸುವ ಸಂಪ್ರದಾಯವನ್ನು ಹಿಂದಿನ ಎಲ್ಲ ಸರ್ಕಾರಗಳು ಪಾಲಿಸುತ್ತಾ ಬಂದಿವೆ” ಎಂದು ಅವರು ನೆನಪಿಸಿದ್ದಾರೆ.

“ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿಯವರೇ ನಾಡಧ್ವಜ ಆರೋಹಣವನ್ನು ವಿರೋಧಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ಯಾರ ಕುಮ್ಮಕ್ಕು?” ಎಂದು ಅವರು ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ನಾನು ಮುಖ್ಯಮಂತ್ರಿಯಾಗಿದ್ದಾಗ ತಜ್ಞರ ಸಮಿತಿಯನ್ನು ಆಧರಿಸಿ ನಾಡಧ್ವಜವನ್ನು ವಿನ್ಯಾಸ ಮಾಡಿ ಅಂಗೀಕಾರಕ್ಕಾಗಿ ಕೇಂದ್ರಸರ್ಕಾರಕ್ಕೆ ಕಳಿಸಿದ್ದೆ. ಎರಡು ವರ್ಷಗಳಾದರೂ ಅದಕ್ಕೆ ಅಂಗೀಕಾರ ನೀಡದೆ ಇರುವುದು ಕರ್ನಾಟಕದ ನಾಡಧ್ವಜದ ಬಗ್ಗೆ ಬಿಜೆಪಿಗೆ ಇರುವ ಪೂರ್ವಗ್ರಹಕ್ಕೆ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ನಾವೇನು ಪ್ರತ್ಯೇಕ ಧ್ವಜವನ್ನು ಕೇಳುತ್ತಿಲ್ಲ. ರಾಜ್ಯಗಳು ತಮ್ಮದೇ ಆಗಿರುವ ಧ್ವಜ ಹೊಂದಲು ಸಂವಿಧಾನದಲ್ಲಿ ಯಾವ ಅಡ್ಡಿಯೂ ಇಲ್ಲ. ಬಿಜೆಪಿಯ ಕೇಂದ್ರ ನಾಯಕರ ಅಭಿಪ್ರಾಯವೇನೇ ಇರಲಿ, ಆ ಪಕ್ಷದ ಸ್ಥಳೀಯ ನಾಯಕರು ಪ್ರಧಾನ ಮಂತ್ರಿ ಮೇಲೆ ಒತ್ತಡ ಹೇರಿ ಕರ್ನಾಟಕದ ನಾಡಧ್ವಜಕ್ಕೆ ಅಧಿಕೃತ ಮನ್ನಣೆ ಸಿಗುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...