Homeಮುಖಪುಟಪುಲ್ವಾಮದಲ್ಲಿ ಹತರಾದ ಯೋಧರ ಪತ್ನಿಯರ ಮಂಗಳಸೂತ್ರ ಕಸಿದವರು ಯಾರು? : ಡಿಂಪಲ್ ಯಾದವ್

ಪುಲ್ವಾಮದಲ್ಲಿ ಹತರಾದ ಯೋಧರ ಪತ್ನಿಯರ ಮಂಗಳಸೂತ್ರ ಕಸಿದವರು ಯಾರು? : ಡಿಂಪಲ್ ಯಾದವ್

- Advertisement -
- Advertisement -

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ತಾಯಂದಿರು, ಸಹೋದರಿಯರ ‘ಮಂಗಳಸೂತ್ರ’ ಕಿತ್ತುಕೊಳ್ಳಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ತಿರುಗೇಟು ನೀಡಿದ್ದು, “ಪುಲ್ವಾಮ ದಾಳಿಯಲ್ಲಿ ಹತರಾದ ಸೈನಿಕರ ಪತ್ನಿಯರ ಮಂಗಳಸೂತ್ರ ಕಸಿದವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಉನ್ನಾವೋದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅನ್ನು ಟಂಡೋನ್ ಅವರ ಪರ ಚುನಾವಣಾ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಡಿಂಪಲ್ ಯಾದವ್, ಮಂಗಳಸೂತ್ರದ ಬಗ್ಗೆ ಮಾತನಾಡುವವರು ಪುಲ್ವಾಮದ ಬಗ್ಗೆಯೂ ಮಾತನಾಡಬೇಕು. ನಮ್ಮ ಯೋಧರು ಹುತಾತ್ಮರಾಗಿದ್ದಾರೆ. ಅವರ ಪತ್ನಿಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪುಲ್ವಾಮ ದಾಳಿಯ ಹಿಂದೆ ಯಾರಿದ್ದಾರೆ ಎಂದು ಇವರು ಉತ್ತರಿಸಬೇಕು. ಘಟನೆಯ ಕುರಿತು ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುವುದರ ಬಗ್ಗೆ ತಿಳಿಸಬೇಕು ಎಂದು ಯಾರ ಹೆಸರನ್ನೂ ಉಲ್ಲೇಖಿಸದೆ ಡಿಂಪಲ್ ಯಾದವ್ ಪ್ರಶ್ನೆ ಎತ್ತಿದ್ದಾರೆ.

ಫೆಬ್ರವರಿ 2019ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಸೇನಾ ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ 40ಕ್ಕೂ ಅಧಿಕ ಯೋಧರು ಮೃತಪಟ್ಟಿದ್ದರು. ಈ ಬಗ್ಗೆ ಇದುವರೆಗೆ ಸರಿಯಾದ ತನಿಖೆ ನಡೆದಿಲ್ಲ. ಕೇಂದ್ರದ ಮೋದಿ ಸರ್ಕಾರ ಈ ಗಂಭೀರ ಘಟನೆಯ ಕುರಿತು ಹೆಚ್ಚು ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ದಾಳಿಯ ಹಿಂದೆ ಯಾರಿದ್ದಾರೆ ಎಂಬುವುದು ಇನ್ನೂ ಸರಿಯಾಗಿ ಗೊತ್ತಾಗಿಲ್ಲ.

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟದಡಿ ಜಂಟಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿವೆ.

ಇದನ್ನೂ ಓದಿ : ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...