Homeಮುಖಪುಟದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

2002ರಲ್ಲಿ ತಮ್ಮ ಪಂಜಾಬ್‌ ನಾಗರಿಕ ವೈದ್ಯ ಸೇವೆ ತೊರೆದ ದರ್ಶನ್ ಪಾಲ್‌ ತಮ್ಮ ಕುಟುಂಬಕ್ಕೆ ಸೇರಿದ 15 ಎಕರೆ ಭೂಮಿಯಲ್ಲಿ ಕೃಷಿ ಆರಂಭಿಸಿದರು.

- Advertisement -
- Advertisement -

ಎಪ್ಪತ್ತೊಂದು ವರ್ಷದ ಈ ವ್ಯಕ್ತಿ ಒಂದು ಕಾಲದಲ್ಲಿ ವೈದ್ಯರು. ಅರಿವಳಿಕೆಯ ತಜ್ಞರಾಗಿ ರೋಗ ಚಿಕಿತ್ಸೆಯಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದರು. ಈಗಲೂ ಅರಿವಳಿಕೆ ಪಡೆದ ಸ್ಥಿತಿಯಲ್ಲಿರುವ ವ್ಯವಸ್ಥೆಗೆ ಮದ್ದು ನೀಡುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.

ಕಳೆದ ವರ್ಷದಿಂದ ದೆಹಲಿಯ ನಾಲ್ಕು ದಿಕ್ಕುಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ಇವರ ಹೆಸರು ದರ್ಶನ್‌ ಪಾಲ್. ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಪಂಜಾಬ್‌ನ ಅಧ್ಯಕ್ಷರಾದ ಇವರು 2020ರ ಜೂನ್‌ ತಿಂಗಳಿಂದ ಕೃಷಿ ಕಾಯ್ದೆಗ ವಿರುದ್ಧ ರೈತರನ್ನು ಸಂಘಟಿಸುತ್ತಿದ್ದಾರೆ.

ಮೂಲತಃ ಪಟಿಯಾಲದವರಾದ ದರ್ಶನ್ ಪಾಲ್‌, ವೈದ್ಯರಾಗಿ ಸೇವೆ ಸಲ್ಲಿಸುತ್ತಲೇ ಹಲವು ರೈತ-ಕಾರ್ಮಿಕ ಸಮಸ್ಯೆಗಳ ಕುರಿತಾಗಿ ಹೋರಾಡಿದವರು. ರೈತರ ಸಾಲ ಮನ್ನಾಕ್ಕಾಗಿ ಹಲವು ವರ್ಷಗಳ ಕಾಲ ಹೋರಾಡಿದ್ದರು.

2002ರಲ್ಲಿ ತಮ್ಮ ಪಂಜಾಬ್‌ ನಾಗರಿಕ ವೈದ್ಯ ಸೇವೆ ತೊರೆದ ದರ್ಶನ್ ಪಾಲ್‌ ತಮ್ಮ ಕುಟುಂಬಕ್ಕೆ ಸೇರಿದ 15 ಎಕರೆ ಭೂಮಿಯಲ್ಲಿ ಕೃಷಿ ಆರಂಭಿಸಿದರು. ಹಾಗೆಯೇ ಭಾರತೀಯ ಕಿಸಾನ್‌ ಯೂನಿಯನ್‌ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. 2016ರಲ್ಲಿ ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಸೇರಿದ ಪಾಲ್‌ ಕಳೆದ 2019 ರಲ್ಲಿ ಯೂನಿಯನ್‌ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.

ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮಿತಿ ಸದಸ್ಯರೂ ಆಗಿರುವ ಪಾಲ್‌, ರೈತರ ಹೋರಾಟವನ್ನು ಪಂಜಾಬಿಗಷ್ಟೇ ಸೀಮಿತವಾಗಿಸದೆ, ಉತ್ತರ ಪ್ರದೇಶ, ರಾಜಸ್ಥಾನ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಸಂಘಟಿಸಿದ್ದಾರೆ.

ಒಕ್ಕೂಟ ಸರ್ಕಾರ ಸುಗ್ರೀವಾಜ್ಞೆ ಮೂಲಕ 3 ವಿವಾದಾತ್ಮಕ ಕೃಷಿ ಮಸೂದೆಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿ ಹೋರಾಟಕ್ಕಿಳಿದರು. ಮುಖ್ಯವಾಗಿ ಪಂಜಾಬ್ ರಾಜ್ಯದಲ್ಲಿನ 31 ರೈತ-ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ, ಸಮನ್ವಯಕಾರರಾಗಿ ಹೋರಾಟ ಮುನ್ನಡೆಸಿದರು.

2020 ರ ನವೆಂಬರ್ 25-26 ರಂದು ರೈತರು ಪಂಜಾಬ್ ಮತ್ತು ಹರಿಯಾಣದಿಂದ ದೆಹಲಿಗೆ ರ್ಯಾಲಿ ಹೊರಟರು. ಕೇಂದ್ರ ಸರ್ಕಾರ ತನ್ನ ಪೊಲೀಸ್ ಬಲ ಬಳಸಿ ಅದನ್ನು ತಡೆಯಲು ಯತ್ನಿಸಿತು. ರೈತರ ಅಹಿಂಸಾತ್ಮಕ ಹೋರಾಟದೆದುರು ಅದು ಸೋತಿತು. ನಂತರ ದೆಹಲಿಯ ನಾಲ್ಕೈದು ಗಡಿಗಳಲ್ಲಿ ಲಕ್ಷಾಂತರ ರೈತರು ಬೀಡು ಬಿಟ್ಟು ಐತಿಹಾಸಿಕ ರೈತ ಹೋರಾಟ ಕಟ್ಟಿದರು.

ಈ ಹೋರಾಟವನ್ನು ಮುನ್ನೆಡೆಸುವ ಸಲುವಾಗಿ ಅಲ್ಲಿ ಸೇರಿದ್ದ ಪ್ರಮುಖ 37 ಸಂಘಟನೆಗಳು ಸಂಯುಕ್ತ ಕಿಸಾನ್ ಮೋರ್ಚಾ ಎಂಬ ವಿಶಾಲ ಒಕ್ಕೂಟವನ್ನು ಸ್ಥಾಪಿಸಿದರು. ದರ್ಶನ್ ಪಾಲ್‌ರವರನ್ನು ಅದರ ಸಂಚಾಲಕರನ್ನಾಗಿ ನೇಮಿಸಲಾಯಿತು. ಅಲ್ಲಿಂದ ಮುಂದೆ ಕೃಷಿ ಕಾಯ್ದೆಗಳ ಕುರಿತು ಕೇಂದ್ರ ಸರ್ಕಾರ ಮತ್ತು ರೈತರ  ನಡುವೆ ನಡೆದ 11 ಸುತ್ತಿನ ಮಾತುಕತೆಗಳಲ್ಲಿ ದರ್ಶನ್ ಪಾಲ್ ಮುಂಚೋಣಿ ಪಾತ್ರ ವಹಿಸಿದರು. ದೆಹಲಿಯ ಗಡಿಗಳಲ್ಲಿ ಅಸಂಖ್ಯ ರೈತರದೊಂದಿಗೆ ಕೃಷಿ ಕೂಲಿ ಕಾರ್ಮಿಕರನ್ನು ಸೇರಿಸುವುದರಲ್ಲಿ ದರ್ಶನ್ ಪಾಲ್ ಪಾತ್ರವಿದೆ.

2021ರ ಮಾರ್ಚ್ 21 ರಂದು ರಾಜ್ಯದ ಶಿವಮೊಗ್ಗದಲ್ಲಿ ನಡೆದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಡಾ.ದರ್ಶನ್ ಪಾಲ್ ಭಾಗವಹಿಸಿದ್ದರು. ಶಾಂತ ಸ್ವಭಾವದ, ಮೃದು ದನಿಯ ಆದರೆ ದಿಟ್ಟತೆಯ ವ್ಯಕ್ತಿತ್ವ ಅವರದು. ಜನವರಿ 26ರ ಗಣರಾಜ್ಯೋತ್ಸವದ ಗದ್ದಲ, ಗಡಿಗಳಲ್ಲಿ ಪೊಲೀಸ್ ದೌರ್ಜನ್ಯ ಸೇರಿದಂತೆ ಎಲ್ಲಾ ಅಡೆತಡೆಗಳನ್ನು ಅವರು ಬಹಳ ತಾಳ್ಮೆಯಿಂದ, ಪ್ರಜಾತಾಂತ್ರಿಕ ರೀತಿಯಲ್ಲಿ ನಿಭಾಯಿಸಿದ್ದಾರೆ.

ಈಗ ಒಕ್ಕೂಟ ಸರ್ಕಾರ ರೈತರ ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ಕ್ಷಮೆ ಕೇಳಿದ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ. ರೈತರು ದರ್ಶನ್ ಪಾಲ್ ನೇತೃತ್ವದಲ್ಲಿ ಸಭೆ ಸೇರಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.


ಇದನ್ನೂ ಓದಿ:  ರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...