Homeಚಳವಳಿಅನುದಾನ ನಿರೀಕ್ಷೆಯಲ್ಲಿರುವ ಖಾಸಗಿ ಪದವಿ ಕಾಲೇಜು ಉಪನ್ಯಾಸಕರ ಗೋಳು ಕೇಳೋರು ಯಾರು?

ಅನುದಾನ ನಿರೀಕ್ಷೆಯಲ್ಲಿರುವ ಖಾಸಗಿ ಪದವಿ ಕಾಲೇಜು ಉಪನ್ಯಾಸಕರ ಗೋಳು ಕೇಳೋರು ಯಾರು?

ನಾವು ಅನುದಾನಕ್ಕೆ ಒಳಪಡುತ್ತೇವೆ, ಸರ್ಕಾರಿ ಸಂಬಳ ಪಡೆಯುತ್ತೇವೆ ಎಂದು ನಂಬಿ ಖಾಸಗಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಗೆ ಲಕ್ಷಲಕ್ಷ ರೂ ನೀಡಿ ಕೆಲಸಕ್ಕೆ ಸೇರಿಕೊಂಡಿರುವವರ ಪರಿಸ್ಥಿತಿ ಇಕ್ಕಟ್ಟಿಗೆ ಸಿಲುಕಿದೆ.

- Advertisement -
- Advertisement -

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವ ಧನ ನೀಡಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ಸಮಯದಲ್ಲಿ ಕಾಲೇಜುಗಳ ಅನುದಾನಕ್ಕಾಗಿ ಕಾಯುತ್ತಿರುವ ಖಾಸಗಿ ಪದವಿ ಕಾಲೇಜುಗಳಲ್ಲಿ ದುಡಿಯುತ್ತಿರುವ ನೂರಾರು ಉಪನ್ಯಾಸಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಸ್ಥೆಯಿಂದಲೂ ಸಂಬಳ ದೊರೆಯುತ್ತಿಲ್ಲ. ಸರ್ಕಾರದ ಸಹಾಯವು ಸಿಗುತ್ತಿಲ್ಲ. ಅತಿಥಿಯೂ ಅಲ್ಲದ, ಅರೆಕಾಲಿಕರೂ ಅಲ್ಲದ ಈ ಉಪನ್ಯಾಸಕರು ಜೀವನ ಸಾಗಿಸುವುದು ದುಸ್ತರವಾಗಿದೆ.

ರಾಜ್ಯದಲ್ಲಿ ಒಂದು ನೂರಕ್ಕೂ ಹೆಚ್ಚು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರದ ಗ್ರ್ಯಾಂಟ್ ಗೆ ಅರ್ಜಿ ಸಲ್ಲಿಸಿದ್ದು ಸರ್ಕಾರದ ಅನುದಾನಕ್ಕಾಗಿ ಕಾಯುತ್ತಿವೆ. ಈ ಪೈಕಿ 85 ಪದವಿ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರ ನಮಗೆ ಗ್ರ್ಯಾಂಟ್ ನೀಡಬೇಕೆಂದು ಹಲವು ವರ್ಷಗಳಿಂದ ಒತ್ತಡ ಹೇರುತ್ತಲೇ ಬರುತ್ತಿವೆ. ಆದರೆ ಸರ್ಕಾರ ಮಾತ್ರ ಗ್ರ್ಯಾಂಟ್ ನೀಡಲು ಹಿಂದೇಟು ಹಾಕುತ್ತಿದೆ. ಆದ್ದರಿಂದ ರಾಜ್ಯದ 85 ಪದವಿ ಕಾಲೇಜುಗಳ 680 ಉಪನ್ಯಾಸಕರ ಬದುಕು ಅತಂತ್ರವಾಗಿದೆ.

ಪ್ರತಿಯೊಂದು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನಿಷ್ಠ 8 ಮಂದಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ ಒಟ್ಟಾರೆ ರಾಜ್ಯದಲ್ಲಿ 680ಕ್ಕೂ ಹೆಚ್ಚು ಮಂದಿ ಉಪನ್ಯಾಸಕರು ಕಳೆದ 20-25 ವರ್ಷಗಳಿಂದಲೂ ಕಡಿಮೆ ವೇತನ ಪಡೆದುಕೊಂಡು ದುಡಿಯುತ್ತಿದ್ದಾರೆ. ಇವರಲ್ಲಿ ಕೆಲವರಿಗೆ ಸರ್ಕಾರ ನಿಗದಿಪಡಿಸಿದ ವಯಸ್ಸು ಮೀರಿದೆ. ಖಾಸಗಿ ಪದವಿ ಕಾಲೇಜು ಸರ್ಕಾರದ ಅನುದಾನಕ್ಕೆ ಒಳಪಡುತ್ತದೆ. ನಾವು ಸರ್ಕಾರದಿಂದ ವೇತನ ಪಡೆಯುತ್ತೇವೆ ಕುಟುಂಬಕ್ಕೆ ಭದ್ರತೆ ದೊರೆಯುತ್ತದೆ, ನಾವು ಅನುದಾನಕ್ಕೆ ಒಳಪಡುತ್ತೇವೆ ಎಂದು ನಂಬಿ ಖಾಸಗಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಗೆ ಲಕ್ಷಲಕ್ಷ ರೂ ನೀಡಿ ಕೆಲಸಕ್ಕೆ ಸೇರಿಕೊಂಡಿದ್ದಾರೆ. ಆದರೆ ಅತ್ತ ಹಣವೂ ಹಿಂಪಡೆಯಲು ಆಗುತ್ತಿಲ್ಲ. ಇತ್ತ ಸರ್ಕಾರದ ಅನುದಾನಕ್ಕೆ ಒಳಪಟ್ಟು ವೇತನವನ್ನೂ ಪಡೆಯಲು ಆಗುತ್ತಿಲ್ಲ ಎಂಬ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಕೋವಿಡ್ ಅವಧಿಯ ಗೌರವಧನ ಬಿಡುಗಡೆಗೆ ಆಗ್ರಹಿಸಿ ನಡೆಸಿದ ಹೋರಾಟಕ್ಕೆ ಐದು ತಿಂಗಳ ಗೌರವಧನ ಸಿಗುವ ಸಣ್ಣ ಭರವಸೆ ಸಿಕ್ಕಿದೆ. ಅತಿಥಿ ಉಪನ್ಯಾಸಕರು ಸಂಘಟನೆಗೊಂಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸುವ ಶಕ್ತಿ ಹೊಂದಿದ್ದಾರೆ. ಅತಿಥಿ ಉಪನ್ಯಾಸಕರಿಲ್ಲದೆ ಪಾಠ ಪ್ರವಚನ ನಡೆಯುವುದಿಲ್ಲ ಎಂಬ ಅನಿವಾರ್ಯತೆ ಸೃಷ್ಟಿ ಆಗುತ್ತದೆ. ಆದರೆ ಸರ್ಕಾರದ ಅನುದಾನದ ನಿರೀಕ್ಷೆಯಲ್ಲಿರುವ ಆಡಳಿತ ಮಂಡಳಿಗಳ ನಡೆಸುತ್ತಿರುವ ಕಾಲೇಜುಗಳಲ್ಲಿ ದುಡಿಯುತ್ತಿರುವ ಉಪನ್ಯಾಸಕರು ಇಂತಹ ಯಾವುದೇ ಒಗ್ಗಟ್ಟು ಪ್ರದರ್ಶಿಸುವ ಅವಕಾಶ ಇಲ್ಲ. ಪ್ರತಿಭಟನೆ ನಡೆಸಿದರೆ ಎಲ್ಲಿ ಇರುವ ಕೆಲಸವೂ ಹೋಗುತ್ತದೆ. ಕೊಟ್ಟ ಹಣವೂ ಬರುವುದಿಲ್ಲ ಎಂಬ ತ್ರಿಶಂಕು ಸ್ಥಿತಿ ಅವರನ್ನು ಕಾಡತೊಡಗಿದೆ.

ಅನುದಾನದ ನಿರೀಕ್ಷೆಯಲ್ಲಿರುವ ಉಪನ್ಯಾಸಕರು ಯಾರ ಜೊತೆಯೂ ಬಾಯಿ ಬಿಡುವಂತಿಲ್ಲ. ಮ್ಯಾನೇಜ್‌ಮೆಂಟ್ ಅವರನ್ನು ಕೇಳಿದರೆ ನಿಮ್ಮ ಸೇವೆ ಅಗತ್ಯವಿಲ್ಲ. ಬೇರೆಯವರು ಬಂದು ಕೆಲಸ ಮಾಡುತ್ತಾರೆ’ ಎಂದು ಹೇಳುತ್ತಿರುವುದರಿಂದ ಸಂಕಟವನ್ನು ನುಂಗಿಕೊಂಡೇ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಪರಿಸ್ಥಿತಿ ಇದೆ. ನಮಗೆ ಸರ್ಕಾರವೂ ಹಣ ಕೊಡುವುದಿಲ್ಲ. ಆಡಳಿತ ಮಂಡಳಿಯೂ ಹಣ ನೀಡುವುದಿಲ್ಲ. ನಮ್ಮ ಕುಟುಂಬ ನಿರ್ವಹಣೆ ಹೇಗೆ? ಬಸ್ ಚಾರ್ಜ್ ಕೊಡಲೂ ದುಡ್ಡು ಇರುವುದಿಲ್ಲ. ಸಾಲ ಮಾಡಿ ಮತ್ತಷ್ಟು ಮೇಲೆ ಎಳೆದುಕೊಳ್ಳುವಂತೆ ಆಗಿದೆ. ಮನೆ ಬಾಡಿಗೆ, ಕರೆಂಟ್ ಬಿಲ್, ಮಕ್ಕಳ ಬಟ್ಟೆ, ವಿದ್ಯಾಭ್ಯಾಸ ಯಾವುದನ್ನೂ ಸರಿಯಾಗಿ ನಿಭಾಯಿಸಲು ಆಗುತ್ತಿಲ್ಲ ಎಂದು ಉಪನ್ಯಾಸಕ ಮಲ್ಲಯ್ಯ ನೋವು ತೋಡಿಕೊಂಡರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕ ಸುರೇಶ್, ನಾನು ಕಳೆದ 25 ವರ್ಷಗಳಿಂದ ಖಾಸಗಿ ಪದವಿ ಕಾಲೇಜೊಂದರಲ್ಲಿ ಪಾಠ ಮಾಡಿಕೊಂಡು ಬಂದಿದ್ದೇನೆ. ಕೆಲಸ ಪರ್ಮಿನೆಂಟ್ ಆಗುತ್ತದೆ ಎಂಬ ಕಾರಣಕ್ಕೆ 5 ಲಕ್ಷ ರೂಪಾಯಿ ಆಡಳಿತ ಮಂಡಳಿಗೆ ಕೊಟ್ಟಿದ್ದೇನೆ. ನನಗೆ 5 ಸಾವಿರ ಗೌರವಧನ ನೀಡುತ್ತಿದ್ದರು. ಕೊರೊನಾ ಬಂದ ಮೇಲೆ ನಾವು ಅಕ್ಷರಶಃ ಬೀದಿಗೆ ಬಿದ್ದಿದ್ದೇವೆ. ಬಿಟ್ಟಿ ದುಡಿಯೋಕೆ ಯಾಕ್ ಹೋಗ್ತೀಯ ಅಂತ ಹೆಂಡತಿ ಜೊತೆ ನಿತ್ಯವೂ ಜಗಳ. ಬದುಕು ಕಟ್ಟಿಕೊಳ್ಳಲು ಕಷ್ಟವಾಗಿದೆ. ಮಕ್ಕಳನ್ನು ಓದಿಸಲಾಗುತ್ತಿಲ್ಲ. ನನ್ನ ವಯಸ್ಸು ಮೀರಿ ಹೋಯಿತು. ನಾನು ಇನ್ನೆಲ್ಲಿಗೂ ಹೋಗಿ ಪಾಠ ಮಾಡಲು ಅವಕಾಶವಿಲ್ಲ. ನಾನು ಇರುವಲ್ಲೇ ಇರಬೇಕಾಗಿದೆ. ನಾನಿರುವ ಸಂಸ್ಥೆಯಲ್ಲು ಕಳೆದ ಏಳೆಂಟು ತಿಂಗಳಿಂದ ವೇತನ ನೀಡುತ್ತಿಲ್ಲ ಎಂದು ಕಂಬನಿ ಮಿಡಿದರು.

ಸರ್ಕಾರದ ಅನುದಾನ ದೊರೆಯುವ ನಿರೀಕ್ಷೆಯಲ್ಲಿದ್ದವರಿಗೆ ಇದೀಗ ಭ್ರಮನಿರಸನಗೊಳ್ಳುವಂತೆ ಮಾಡಿದೆ. ಸಮಾಜದಲ್ಲಿ ಗುರುಗಳಿಗೆ ಗೌರವ ಸ್ಥಾನ ಇದೆಯಾದರೂ ಘನತೆಯ ಬದುಕು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳಿಂದ ಸಾವಿರಾರು ರೂಪಾಯಿ ಡೊನೇಷನ್ ಪಡೆಯುವ ಈ ಕಾಲೇಜುಗಳು ಉಪನ್ಯಾಸಕರಿಗೆ ವೇತನ ನೀಡಲು, ಕಾಲೇಜು ನಿರ್ವಹಣೆ ಮಾಡಲು ಪರದಾಡುತ್ತಿವೆ. ಬಹುತೇಕ ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು ಸರ್ಕಾರದ ಅನುದಾನ ಬೇಡ ಎನ್ನುತ್ತಿವೆ. ಅಂತಹ ಕಾಲೇಜುಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರಿಗೆ ವೇತನ ನೀಡಲಾಗುತ್ತಿದೆ. ನಾವು ಮಾತ್ರ ಯಾರಿಗೂ ಬೇಡವಾದ ಕೂಸುಗಳಾಗಿದ್ದೇವೆ ಎಂಬುದು ಅನುದಾನ ನಿರೀಕ್ಷೆಯಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ಅಳಲು.

ಸರ್ಕಾರ ಕೂಡಲೇ ಈ ಉಪನ್ಯಾಸಕರ ನೆರವಿಗೂ ಬರಬೇಕು. ನಮಗೆ ಅತಿಥಿ ಉಪನ್ಯಾಸಕರಿಗೆ ನೀಡುವಂತೆ ಗೌರವ ಧನವನ್ನು ನೀಡಬೇಕೆಂದು ಉಪನ್ಯಾಸಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. it is drastic problem of our society as well as govt nobady will take care of it u raise this quation its appriciable .how many’s life went off by thease principle policy of many govt …ok take dicision to not vote anybody up to life long

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...