Homeರಾಜಕೀಯಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

ಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

- Advertisement -
- Advertisement -

ಇತಿಹಾಸಕಾರರು ಭಾರತೀಯ ಸನ್ನಿವೇಶದಲ್ಲಿ ಇತಿಹಾಸವನ್ನು ಪುನಃ ಬರೆಯುವಂತೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಕೇಳಿಕೊಂಡಿದ್ದು, ಇಂತಹ ಪ್ರಯತ್ನ ಮಾಡುವವರಿಗೆ ತಮ್ಮ ಸರ್ಕಾರವು ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.

“ನಾನು ಇತಿಹಾಸದ ವಿದ್ಯಾರ್ಥಿ, ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ ಮತ್ತು ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ಕೇಳಿದ್ದೇನೆ. ಬಹುಶಃ ಇದು ನಿಜವಿರಬಹುದು, ಆದರೆ ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ” ಎಂದು ದೆಹಲಿಯಲ್ಲಿ ನಡೆದ ಅಸ್ಸಾಂ ಸರ್ಕಾರದ ಸಮಾರಂಭದಲ್ಲಿ ಅಮಿತ್‌ ಶಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

17ನೇ ಶತಮಾನದ ಅಹೋಮ್ ಸಾಮ್ಯಾಜ್ಯದ ಸೇನಾಪತಿ ಲಚಿತ್ ಬರ್ಫುಕನ್ ಅವರ 400ನೇ ಜನ್ಮದಿನಾಚರಣೆಯ ಮೂರು ದಿನಗಳ ಆಚರಣೆಯ 2ನೇ ದಿನದಂದು ಅವರು ಮಾತನಾಡುತ್ತಿದ್ದರು. ಲಚಿತ್ ಬರ್ಫುಕನ್‌ ಅವರ ನೆನಪಿಗಾಗಿ ನವೆಂಬರ್ 24 ಅನ್ನು ಲಚಿತ್ ದಿವಸ್ ಎಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮೈಸೂರು ರಾಕೆಟ್‌ಗಳ ಉತ್ಖನನ; ಆಸಕ್ತಿ ಕೆರಳಿಸುವ ಇತಿಹಾಸ

“ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಈ ಯಾರು ತಡೆಯುತ್ತಾರೆ ಎಂದು ನಾನು ನಿಮ್ಮನ್ನು ಕೇಳುತ್ತಿದ್ದೇನೆ” ಎಂದು ಅಮಿತ್‌ ಶಾ ಹೇಳಿದ್ದಾರೆ.

“ಇತಿಹಾಸವು ಸರಿಯಲ್ಲ ಎಂಬ ಈ ನಿರೂಪಣೆಯನ್ನು ಬಿಟ್ಟುಬಿಡಿ. ಆದರೆ ದೇಶದಲ್ಲಿ 150 ವರ್ಷಗಳ ಕಾಲ ಆಳಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸಿ ಎಂದು ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ನಾನು ವಿನಂತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ಬರೆದರೆ ಸಾಕು, ಸುಳ್ಳು ನಿರೂಪಣೆಯನ್ನು ಪ್ರಚಾರ ಮಾಡಲಾಗುತ್ತದೆ ಎಂಬ ಕಲ್ಪನೆ ಕೂಡಾ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ವಿಜ್ಞಾನ ಭವನದಲ್ಲಿ ಹಾಜರಿದ್ದ ಇತಿಹಾಸಕಾರರು ಮತ್ತು ವಿದ್ಯಾರ್ಥಿಗಳ ಸಂಶೋಧನೆಗೆ ಒಕ್ಕೂಟ ಸರ್ಕಾರವು ಬೆಂಬಲ ನೀಡಲಿದೆ ಎಂದು ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಇತಿಹಾಸದ ಅವಜ್ಞೆ; ದೇಶ ವಿಭಜನೆಗೆ ಸಿಕ್ಕಸಿಕ್ಕವರ ಮೇಲೆ ಆರೋಪ ಹೊರಿಸುವ ಮುನ್ನ..

“ಮುಂದೆ ಬನ್ನಿ, ಸಂಶೋಧನೆ ಮಾಡಿ ಮತ್ತು ಇತಿಹಾಸವನ್ನು ಪುನಃ ಬರೆಯಿರಿ. ಈ ರೀತಿಯಾಗಿ ನಾವು ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಬಹುದು” ಎಂದು ಅವರು ಹೇಳಿದ್ದಾರೆ.

ಜನರಿಗೆ ಹೆಚ್ಚಿನ ಪ್ರಯೋಜನ ಆಗುವಂತೆ ಇತಿಹಾಸದ ಹಾದಿಯನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ. ಮೊಘಲ್ ವಿಸ್ತರಣೆಯನ್ನು ತಡೆಯುವಲ್ಲಿ ಲಚಿತ್ ವಹಿಸಿದ ಪಾತ್ರವನ್ನು ಗುರುತಿಸಿದ ಅಮಿತ್‌ ಶಾ, “ಸರಿಘಾಟ್ ಯುದ್ಧದಲ್ಲಿ ಅವರ ಅನಾರೋಗ್ಯದ ಹೊರತಾಗಿಯೂ ಮೊಘಲರನ್ನು ಸೋಲಿಸಿದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನೋವಿಕಾರಿಯೊಬ್ಬನ ವಿರೂಪೀ ಹೇಳಿಕೆಯಿದು. ಮೊಗಲರು ಈ ದೇಶಕ್ಕೆ ಕೊಟ್ಟ ಅನುಪಮ ಕೊಡುಗೆಗಳ ಬಗ್ಗೆ ಇತಿಹಾಸದಲ್ಲಿ ದಾಖಲಿಸಲ್ಪಟ್ಟ ವಿಷಯಗಳೇನು ಎಂಬುದು ಈ ತಡಿಪಾರ್ ನರಹಂತಕ ಮೊದಲು ಕಂಡುಕೊಳ್ಳಲಿ. ಹಾಗೆಯೇ ಹಿಟ್ಲರ್ ಅಭಿಮಾನಿಗಳಾದ ಆರೆಸ್ಸಿಗರು ಸ್ವಾತಂತ್ರ್ಯ ಸಂಗ್ರಾಮಲ್ಲಿ ಬ್ರಿಟಿಷರ ಜೊತೆಗೂಡಿ ದೇಶಕ್ಕೆ ದ್ರೋಹ ಬಗೆದದ್ದು,ಸಾವರ್ಕರ್ ಬ್ರಿಟಿಷರ ಪಿಂಚಣಿಯಲ್ಲಿ ಬದುಕು ನಡೆಸಿದ ಇತಿಹಾಸ ಕೂಡಾ ಈ ದೇಶದ ಪ್ರತೀ ಪ್ರಜೆಗೂ ತಿಳಿಸುವಂತಾಗಲಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...