Homeಅಂತರಾಷ್ಟ್ರೀಯಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

- Advertisement -
- Advertisement -

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಕಾಟ್ಜ್, ‘ಇಸ್ರೇಲ್‌ ಅನ್ನು ನಾಶಪಡಿಸುವ, ಅಮೆರಿಕ ಮತ್ತು ಇತರ ದೇಶಗಳಿಗೆ ಬೆದರಿಕೆ ಒಡ್ಡುವ, ತಮ್ಮದೇ ಜನರನ್ನು ಹತ್ತಿಕ್ಕುವ ಕಾರ್ಯವನ್ನು ಮುಂದುವರಿಸುವ ಇರಾನ್‌ ಭಯೋತ್ಪಾದಕ ಆಡಳಿತವು ಯಾರನ್ನೇ ನಾಯಕನನ್ನಾಗಿ ನೇಮಿಸಿದರೂ ಅವರನ್ನು ಸಂಹಾರ ಮಾಡುತ್ತೇವೆ’ ಎಂದು ಬರೆದುಕೊಂಡಿದ್ದಾನೆ.

ಈ ನಡುವೆ, ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಹೊಂದಿರುವ ಇರಾನ್‌ನ ‘ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್’ಗೆ ಸಂಬಂಧಿಸಿದ ಕಟ್ಟಡವೊಂದನ್ನು ಇಸ್ರೇಲ್ ಮಂಗಳವಾರ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. 

ಕಳೆದ ಶನಿವಾರ ಇಸ್ರೇಲ್‌–ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಉತ್ತರಾಧಿಕಾರಿಯಾಗಿ ಅವರ ಮಗ ಮೊಜತಬಾ ಖಮೇನಿ ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ವರದಿಗಳಾಗಿವೆ. ಆದರೆ ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...