Homeಕೊರೊನಾಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಕೊರೊನಾ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆಯುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಕೇರಳ ಹೈಕೋರ್ಟ್‌, ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. 

ಇತರ ದೇಶಗಳಲ್ಲಿ ಇಂತಹ ಪದ್ಧತಿ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ಕೇರಳ ಹೈಕೋರ್ಟ್‌ಗೆ ತಿಳಿಸಿದರು. ಇದಕ್ಕೆ ಮೌಖಿಕವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ಅವರು ತಮ್ಮ ಪ್ರಧಾನಿಗಳ ಬಗ್ಗೆ ಹೆಮ್ಮೆಪಡದಿರಬಹುದು, ನಮ್ಮ ಪ್ರಧಾನಿ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಹೇಳಿದೆ.

ದೇಶದ ಜನರು ಬಹುಮತದಿಂದ ಪ್ರಧಾನಿಯನ್ನು ಅಧಿಕಾರಕ್ಕೆ ಆಯ್ಕೆ ಮಾಡಿದ್ದಾರೆ. ಲಸಿಕೆ ಪ್ರಮಾಣ ಪತ್ರದಲ್ಲಿ ಅವರ ಭಾವಚಿತ್ರ ಇರುವುದರಲ್ಲಿ ತಪ್ಪೇನು ಎಂದು ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಹೇಳಿದ್ದಾರೆ.

“ನೀವು (ಅರ್ಜಿದಾರರು) ಪ್ರಧಾನ ಮಂತ್ರಿಯ ಬಗ್ಗೆ ಏಕೆ ನಾಚಿಕೆಪಡುತ್ತೀರಿ? ಅವರು ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ…. ನಾವು ವಿಭಿನ್ನ ರಾಜಕೀಯ ದೃಷ್ಟಿಕೋನಗಳನ್ನು ಹೊಂದಿರಬಹುದು, ಆದರೆ ಅವರು ಇನ್ನೂ ನಮ್ಮ ಪ್ರಧಾನಿ” ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರ ಪರ ವಕೀಲ ಪೀಟರ್ ಮೈಲಿಪರಂಪಿಲ್ ಅವರು “ಪ್ರಮಾಣಪತ್ರವು ಖಾಸಗಿ ದಾಖಲೆ ಆಗಿದ್ದು, ಅದರ ಮೇಲೆ ನಮಗೆ ಹಕ್ಕಿದೆ. ನಾವು ಹಣ ಕೊಟ್ಟು ಲಸಿಕೆ ಖರೀದಿಸಿದ್ದು, ಅದರ ಕ್ರೆಡಿಟ್ ಅನ್ನು ಪ್ರಭುತ್ವ ತೆಗೆದುಕೊಳ್ಳುವುದು ಸರಿಯಲ್ಲ” ಎಂದು ವಾದಿಸಿದ್ದಾರೆ.

ಪ್ರಮಾಣ ಪತ್ರಕ್ಕೆ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಸೇರಿಸಿರುವುದು ವ್ಯಕ್ತಿಯ ಖಾಸಗಿತನವನ್ನು ಉಲ್ಲಂಘಿಸಿದಂತಾಗುತ್ತದೆ ಪೀಟರ್‌ ಪ್ರತಿಪಾದಿಸಿದ್ದಾರೆ.

ಈ ದೇಶದಲ್ಲಿ ಜವಾಹಾರ್‌ ಲಾಲ್ ನೆಹರೂ ಹೆಸರಿನಲ್ಲಿ ವಿಶ್ವವಿದ್ಯಾಲಯವೇ ಇದೆ. ಹಾಗಿದ್ದಾಗ ಲಸಿಕೆ ಪ್ರಮಾಣ ಪತ್ರದ ಮೇಲೆ ಈಗಿನಿ ಪ್ರಧಾನಿಯವರ ಫೋಟೊ ಏಕಿರಬಾರದು ಎಂದು ಪೀಠ ಪ್ರಶ್ನಿಸಿದೆ.

ದೇಶದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೊ ಇರುವುದರಿಂದ ತೊಂದರೆಯಾಗಿಲ್ಲ. ‘ನಿಮಗೇಕೆ ತೊಂದರೆ? ಎಂದು ಹೇಳಿದ್ದು, ಅರ್ಜಿಗೆ ಯಾವುದೇ ಅರ್ಹತೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಇಲ್ಲವೆಂದಾದರೆ, ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು ಎಂದು ಹೇಳಿದೆ. 

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ವಿಚಾರಣೆಯಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ ಮತ್ತೊಬ್ಬ ವಕೀಲ ಅಜಿತ್ ಜಾಯ್, ಪ್ರಧಾನಿಯ ಬಗ್ಗೆ ಹೆಮ್ಮೆ ಪಡಬೇಕೆ, ಬೇಡವೇ ಎಂಬುದು ಅವರ ವೈಯಕ್ತಿಕ ಆಯ್ಕೆಯಾಗಿದೆ ಎಂದು ಹೇಳಿದ್ದಾರೆ.

ಇದು ರಾಜಕೀಯ ಭಿನ್ನಾಭಿಪ್ರಾಯದ ವಿಷಯವಲ್ಲ. ಸಾರ್ವಜನಿಕ ಹಣವನ್ನು ಜಾಹೀರಾತು ಮತ್ತು ಪ್ರಚಾರಗಳಿಗೆ ಬಳಸಿಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ನೀಡಿದೆ ಎಂದು ಜಾಯ್‌ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 

ಪ್ರಮಾಣಪತ್ರದಲ್ಲಿ ಫೋಟೋ ಇದ್ದರೆ ಮತದಾರರ ಮನಸ್ಸಿನ ಮೇಲೂ ಪ್ರಭಾವ ಬೀರುತ್ತದೆ. ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿಸಲ್ಲಿಸಿರುವ ಅರ್ಜಿದಾರರು ಮತ್ತು ಹಿರಿಯ ನಾಗರಿಕರು ತಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ಪ್ರಧಾನ ಮಂತ್ರಿಯವರ ಫೋಟೋ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.


ಇದನ್ನೂ ಓದಿ: ತನಗೆ ಮತ ನೀಡದ ದಲಿತ ಯುವಕರಿಗೆ ಎಂಜಲು ನೆಕ್ಕಿಸಿ, ಹಲ್ಲೆ: ಕ್ರೌರ್ಯವೆಸಗಿದ ವ್ಯಕ್ತಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...